ಮಡಿಕೇರಿ, ಮೇ ೨೫ : ಗ್ರಾಹಕರ ವ್ಯಾಜ್ಯಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಜುಲೈ ೮ ರಂದು ಲೋಕ್ ಅದಾಲತ್ ನಡೆಯಲಿದೆ. ಆ ದಿನದಂದು ಸಂಬAಧಪಟ್ಟವರು ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ಗುರುತಿಸಿ ಕೊಂಡು ಇತ್ಯರ್ಥಪಡಿಸಿ ಕೊಳ್ಳುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ ಹಾಗೂ ಸಹಾಯಕ ರಿಜಿಸ್ಟಾçರ್ ಶಾರದ ಅವರು ತಿಳಿಸಿದ್ದಾರೆ.