ಸೋಮವಾರಪೇಟೆ,ಮೇ.೨೫: ಹಿರಿಯ ಪತ್ರಿಕೋದ್ಯಮಿ, ಸೋಮವಾರಪೇಟೆ ಟೀರ್ಸ್ ಕ್ವಾಟರ್ಸ್ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದ ಡಿ.ಎಂ. ಚಿಣ್ಣಪ್ಪ (೮೨) ಅವರು ತಾ. ೨೫ರಂದು ಬೆಂಗಳೂರಿನಲ್ಲಿ ನಿಧನರಾದರು.
ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದ ಚಿಣ್ಣಪ್ಪ ಅವರು ವಯೋಸಹಜ ಕಾಯಿಲೆಯಿಂದ ಇಂದು ಬೆಳಿಗ್ಗೆ ಮನೆಯಲ್ಲಿಯೇ ಕೊನೆಯುಸಿ ರೆಳೆದರು. ಸಿಡಿಲು ಪತ್ರಿಕೆಯ ಸಂಪಾದಕರಾಗಿದ್ದ ಚಿಣ್ಣಪ್ಪ ಅವರು, ‘ಶಕ್ತಿ’ ಹಾಗೂ ಕಾಫಿ ಲ್ಯಾಂಡ್ ಪತ್ರಿಕೆಯಲ್ಲೂ ಕೆಲಸ ಮಾಡಿದ್ದರು. ಮೃತರು ಪತ್ನಿ, ನಿವೃತ್ತ ಶಿಕ್ಷಕಿ ಶಕುಂತಲಾ ಸೇರಿದಂತೆ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ತಾ. ೨೬ರಂದು (ಇಂದು) ಬೆಳಿಗ್ಗೆ ೧೦.೩೦ಕ್ಕೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.