ಮಡಿಕೇರಿ, ಸೆ. ೧೫: ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ೨೦೨೩-೨೪ನೇ ಸಾಲಿನಲ್ಲಿ ರಾಷ್ಟಿçÃಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಯೋಜನೆ ಮತ್ತು ಸೇವೆಗಳ ಕುರಿತು ಜನ ಜಾಗೃತಿ ಮೂಡಿಸಲು ಕೊಡಗು ಜಿಲ್ಲೆಯಲ್ಲಿನ ಜಾನಪದ ಕಲಾ ತಂಡ(ಬೀದಿ ನಾಟಕ)ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ಬೀದಿ ನಾಟಕ ಜಾನಪದ ಕಲಾ ತಂಡದಲ್ಲಿ ೮ ಜನ (ಸ್ಥಳೀಯ ಕಲಾವಿದರು) ಸದಸ್ಯರು ಇರಬೇಕು. ಇವರಲ್ಲಿ ೨ ಮಹಿಳಾ ಕಲಾವಿದರಿರಬೇಕು. ಇಲಾಖೆ ಯೋಜನೆಗಳ ಬಗ್ಗೆ ಬೀದಿ ನಾಟಕ ಪ್ರದರ್ಶನದ ಅನುಭವವಿರಬೇಕು.

ಜಿಲ್ಲೆಯ ಸಂಗೀತ ಮತ್ತು ನಾಟಕ ಡಿವಿಜನ್-ಕನ್ನಡ ಮತ್ತು ಸಂಸ್ಕೃತಿ ಇಲಾಖೆ-ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಜಾನಪದ ಕಲಾತಂಡಗಳು ನೋಂದಣಿಯಾಗಿರಬೇಕು.

ಆಸಕ್ತ ಜಾನಪದ ಕಲಾತಂಡಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಐ.ಇ.ಸಿ. ವಿಭಾಗ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಕಚೇರಿ ವೇಳೆಯಲ್ಲಿ ಅರ್ಜಿಯನ್ನು ಪಡೆದುಕೊಂಡು ತಾ. ೨೧ ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ತಿಳಿಸಿದ್ದಾರೆ.