ಭಾಗಮಂಡಲ, ಸೆ. ೧೫: ಬೆಂಗಳೂರಿನಲ್ಲಿ ಮಿಲಿಟರಿ ಎಂ.ಇ.ಜಿ.ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧರೊಬ್ಬರು ಇಂದು ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸಮೀಪದ ಸಣ್ಣಪುಲಿಕೋಟು ಗ್ರಾಮದ ಉದಿಯನ ಜಿತಿನ್ (೩೧) ಮೃತಪಟ್ಟವರಾಗಿದ್ದಾರೆ.
ಸಣ್ಣಪುಲಿಕೋಟು ಗ್ರಾಮದ ಉದಿಯನ ಮನೆ ಕಾಳಪ್ಪ ಮತ್ತು ದಮಯಂತಿ ಪುತ್ರರಾಗಿರುವ ಇವರು ೨೦೧೨ರಲ್ಲಿ ಮಿಲಿಟರಿ ಸೇವೆಗೆ ಸೇರಿದ್ದು ೧೧ ವರ್ಷಗಳ ಸೇವೆಯನ್ನು ಪೂರೈಸಿದ್ದಾರೆ. ಆರಂಭದಲ್ಲಿ ಬೆಂಗಳೂರಿನಲ್ಲಿ ತರಬೇತಿಗೆ ಸೇರಿದ್ದು ಜಮ್ಮು ಹಾಗೂ ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಬೆಂಗಳೂರಿನಲ್ಲಿ ನಾಯಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿದೇಶಕ್ಕೆ ತೆರಳುವ ಉದ್ದೇಶದಿಂದ ಹೆಚ್ಚಿನ ತರಬೇತಿಯನ್ನು ಪಡೆಯುತ್ತಿದ್ದರು. ಪ್ಯಾರಾಚೂಟ್ ತರಬೇತಿ ಪಡೆಯುತ್ತಿದ್ದ ಸಂದರ್ಭ ಬಿದ್ದು ಕಿಡ್ನಿಗೆ ತೊಂದರೆಯಾಗಿತ್ತು. ಇದಕ್ಕೆ ಸೂಕ್ತ ಚಿಕಿತ್ಸೆಯನ್ನು ಪಡೆದಿದ್ದರು. ತರಬೇತಿ ಮುಕ್ತಾಯ ಹಂತದಲ್ಲಿದ್ದು, ಕೊನೆಯ ದಿನವಾದ ಇಂದು ಬೆಳಗ್ಗಿನ ಜಾವ ಓಟದ ಸಂದರ್ಭ ಕುಸಿದು ಬಿದ್ದಿದ್ದಾರೆ. ಅವರನ್ನು ಕಮಾಂಡೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಐಸಿಯುಗೆ ದಾಖಲಿಸ ಲಾಯಿ ತಾದರೂ, ಚಿಕಿತ್ಸೆ ಫಲಕಾರಿ ಯಾಗದೆ ಕೊನೆಯುಸಿ ರೆಳೆದಿದ್ದಾರೆೆ.
ಒಂದೂವರೆ ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದ ಜಿತಿನ್ ಅವರ ಪತ್ನಿ ವನಿತ ವೀರಾಜಪೇಟೆ ಎಸ್‌ಬಿಐ ಬ್ಯಾಂಕ್ ಉದ್ಯೋಗಿಯಾಗಿದ್ದು, ಆ ಕೆಲಸ ಬಿಟ್ಟು ಒಂದು ವರ್ಷದಿಂದ ಬೆಂಗಳೂರಿನಲ್ಲಿ ಪತಿಯೊಂದಿಗೆ ವಾಸವಿದ್ದರು. ಜಿತಿನ್ ಅವರ ಆರೋಗ್ಯ ಸುಧಾರಿಸುತ್ತಿರುವ ಬಗ್ಗೆ ಅಣ್ಣ ಮಿಥುನ್ ಅವರಿಗೆ ದೂರವಾಣಿ ಮೂಲಕ ನಿನ್ನೆ ದಿನ ಮಾಹಿತಿ ನೀಡಿದ್ದರು ಎನ್ನಲಾಗಿದ್ದು, ಇವರು ಪಿರಿಯಾಪಟ್ಟಣದಲ್ಲಿ ಜಾಗ ತೆಗೆದು ಮನೆ ಕಟ್ಟಿಸುತ್ತಿದ್ದರು. ಮೃತ ಸೈನಿಕ ಜಿತಿನ್ ಇನ್ನು ಮೂರು ತಿಂಗಳಲ್ಲಿ ದಕ್ಷಿಣ ಆಫ್ರಿಕಾಕ್ಕೆÉ ತೆರಳಲಿದ್ದರು.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಸೇನಾ ಗೌರವ ಸಲ್ಲಿಸಿ ಸಂಜೆ
(ಮೊದಲ ಪುಟದಿಂದ) ಬೆಂಗಳೂರಿನಿAದ ಕಳುಹಿಸಿಕೊಡಲಾಗಿದೆ.
ತಾ. ೧೬ರಂದು (ಇಂದು) ಬೆಳಿಗ್ಗೆ ಹನ್ನೊಂದು ಗಂಟೆಗೆ ಸಣ್ಣಪುಲಿಕೋಟು ಮೇಲ್ಕಟ್ಟು ಶಾಲೆಯ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಲಿದೆ. ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಭಾಗಮಂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳನ ರವಿ, ಭಾಗಮಂಡಲ ಕಾವೇರಿ ಕಾಲೇಜಿನ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್ ಹಾಗೂ ಅಯ್ಯಂಗೇರಿ ಗ್ರಾಮ ಪಂಚಾಯಿತಿ ಸದಸ್ಯರು ಜಿತಿನ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. -ಸುನಿಲ್ ಕುಯ್ಯಮುಡಿ