ಕುಶಾಲನಗರ, ಸೆ. ೧೫ : ಕುಶಾಲನಗರ ಕೇರಳ ಸಮಾಜ ವತಿಯಿಂದ ೨೩ನೇ ವರ್ಷದ ಓಣಂ ಹಬ್ಬದ ಆಚರಣೆಯನ್ನು ತಾ. ೧೭ರಂದು ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ನಿರ್ದೇಶಕರಾದ ಎಂ ಜಿ ಪ್ರಕಾಶ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು ತಾ. ೧೭ ರಂದು ಬೆಳಿಗ್ಗೆ ೧೦ ಗಂಟೆಗೆ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಕೇರಳ ಸಮಾಜದ ಅಧ್ಯಕ್ಷ ಕೆ.ಆರ್. ಶಿವಾನಂದನ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂಥರ್ ಗೌಡ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸಿದ್ದಾಪುರ ಎಸ್‌ಎನ್‌ಡಿಪಿ ಮಾಜಿ ಅಧ್ಯಕ್ಷ ಕೆ.ಎನ್. ವಾಸು, ನಿವೃತ್ತ ಅಧಿಕಾರಿ ಟಿ.ಎನ್. ಲಕ್ಷö್ಮಣನ್, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ್ಷೆ ಪಿ.ಎಂ. ರುಕ್ಮಿಣಿ ಮತ್ತು ಕುಶಾಲನಗರ ಪುರಸಭೆಯ ಐದು ಮಂದಿ ಪೌರಕಾರ್ಮಿಕರನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದ ಅಂಗವಾಗಿ ಇಂದಿರಾ ಬಡಾವಣೆಯ ಸಮಾಜದ ಕಟ್ಟಡದ ಬಳಿಯಿಂದ ಬೆಳಿಗ್ಗೆ ೯ ಗಂಟೆಗೆ ಸಭಾಂಗಣದವರೆಗೆ ಮೆರವಣಿಗೆ ನಡೆಯಲಿದೆ. ೨೦೨೨-೨೩ರ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ. ೮೫ಕ್ಕೂ ಅಧಿಕ ಅಂಕ ಪಡೆದ ಸಮಾಜದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಸಭಾ ಕಾರ್ಯಕ್ರಮ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.