ಮಡಿಕೇರಿ, ಸೆ. ೧೫: ಮೂರ್ನಾಡು ಸಮುದಾಯ ಭವನದಲ್ಲಿ ಮೂರ್ನಾಡು ವೃತ್ತಕ್ಕೆ ಸಂಬAಧಿಸಿದ ಅಂಗನವಾಡಿ ಕಾರ್ಯಕರ್ತೆಯರು ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ನೆರವೇರಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪಾಲ್ಗೊಂಡ ಫಲಾನುಭವಿಗಳು ವಿವಿಧ ರೀತಿಯ ಆಹಾರಗಳನ್ನು ತಯಾರಿಸಿ ಪ್ರದರ್ಶಿಸಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಾಂಡ ಸವಿತ ಕೀರ್ತನ್ ಪೋಷಣ್ ಮಾಸಾಚರಣೆ ಉದ್ದೇಶ, ಪೌಷ್ಟಿಕ ಆಹಾರದ ಮಹತ್ವ, ಮಾತೃವಂದನ ಸಪ್ತಾಹದ ಕುರಿತು, ಆಹಾರದಲ್ಲಿರುವ ಔಷಧೀಯ ಗುಣಗಳು, ಪೌಷ್ಟಿಕತೆಯ ಬಗ್ಗೆ ಮಾಹಿತಿ ನೀಡಿದರು.

ಕೊಡ್ಲಿಪೇಟೆ ಸಮೀಪದ ದೊಡ್ಡಕುಂದ ಅಂಗನವಾಡಿ

ಕೊಡ್ಲಿಪೇಟೆ, ಸೆ. ೧೫: ಸಮೀಪದ ದೊಡ್ಡಕುಂದ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಯಾಡಗೊಟ್ಟ ಗ್ರಾ.ಪಂ. ಅಧ್ಯಕ್ಷ ಮಹಮ್ಮದ್ ಹನೀಫ್, ಪೌಷ್ಟಿಕ ಆಹಾರ ಸೇವನೆಯಿಂದ ಮಾತ್ರ ಸದೃಢ ಆರೋಗ್ಯ ಪಡೆಯಬಹುದು. ಈ ನಿಟ್ಟಿನಲ್ಲಿ ಮಕ್ಕಳಿಗೆ ಎಳೆಯ ವಯಸ್ಸಿನಿಂದಲೇ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡಬೇಕೆಂದು ತಿಳಿಸಿದರು. ಗರ್ಭಿಣಿ ತಾಯಿ ಮತ್ತು ಮಗುವಿನ ಆರೋಗ್ಯದಲ್ಲಿ ಸಮಸ್ಯೆಗಳು ಉಂಟಾಗಬಾರದು ಎಂಬ ಉದ್ದೇಶ ದಿಂದ ಪೌಷ್ಟಿಕ ಆಹಾರದ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಇಂತಹ ಕಾರ್ಯಕ್ರಮ ಹಮ್ಮಿ ಕೊಂಡಿದೆ. ಇದರ ಬಗ್ಗೆ ಮಹಿಳೆಯರು ಹೆಚ್ಚಿನ ಗಮನಹರಿಸುವಂತೆ ಸಲಹೆ ನೀಡಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ದಾಕ್ಷಾಯಿಣಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಆರೋಗ್ಯ ನೀರಿಕ್ಷಕಿ ದುಂಬಿತ ಅವರು, ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿ, ಗರ್ಭಿಣಿಯರು ತಮ್ಮ ಹಾಗೂ ಮಗುವಿನ ಆರೋಗ್ಯಕ್ಕೆ ಉತ್ತಮ ಪೌಷ್ಟಿಕಾಂಶವಿರುವ ತರಕಾರಿ ಮತ್ತು ಹಣ್ಣುಗಳನ್ನು ಸೇವಿಸಬೇಕೆಂದರು.

ಬ್ಯಾಡಗೊಟ್ಟ ಅಂಗನವಾಡಿ ಶಿಕ್ಷಕಿ ಚಿನ್ನಮ್ಮ ಮಾತನಾಡಿ, ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ೭ ಅಂಗನವಾಡಿ ಕೇಂದ್ರಗಳು ಒಟ್ಟುಗೂಡಿ ಪೋಷಣ್ ಮಾಸಾಚರಣೆ ಪ್ರಯುಕ್ತ ಕಾರ್ಯಕ್ರಮ ಆಯೋಜಿಸಿರುವುದಾಗಿ ತಿಳಿಸಿದರು.

ಆರೋಗ್ಯ ಇಲಾಖೆಯ ರಕ್ಷಿತ್ ಮತ್ತು ಸ್ಥಳೀಯ ಪ್ರಮುಖರಾದ ಡಿ.ಎ. ಉಮರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿಯರಾದ ನಿರ್ಮಲ ದೊಡ್ಡಕುಂದ, ವನಜಾಕ್ಷಿ ಬೆಂಬಳೂರು, ಶೋಭ ಊರುಗುತ್ತಿ, ವನಿತ ಶಿರಹ, ವಿಮಲ ಕ್ಯಾತೆ, ಚಂದ್ರ ಶಿವರಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಆಶಾ ಕಾರ್ಯ ಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹಾಗೂ ಮಕ್ಕಳ ತಾಯಂದಿರು ಉಪಸ್ಥಿತರಿದ್ದರು.

ಈ ಸಂದರ್ಭ ಗರ್ಭಿಣಿಯರಿಗೆ ಸೀಮಂತ ಮತ್ತು ೬ ತಿಂಗಳ ಮಕ್ಕಳಿಗೆ ಅನ್ನಪ್ರಸನ ಮಾಡ ಲಾಯಿತು. ಅಂಗನ ವಾಡಿಯಲ್ಲಿ ಪೌಷ್ಟಿಕಾಂಶವಿರುವ ಧಾನ್ಯಗಳು ಮತ್ತು ಹಣ್ಣು ಹಂಪಲು, ತರಕಾರಿಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

ಚೆಯ್ಯಂಡಾಣೆ ಸಮೀಪದ ಕರಡ ಗ್ರಾಮದ ಅಂಗನವಾಡಿ

ಚೆಯ್ಯAಡಾಣೆ, ಸೆ. ೧೫: ಸಮೀಪದ ಕರಡ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಹಾಗೂ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೌಶಿ ಕಾವೇರಮ್ಮ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶೀಲಾ ಮಾತನಾಡಿ, ಅಪೌಷ್ಟಿಕತೆ ಯನ್ನು ಹೋಗಲಾಡಿಸುವ ಉದ್ದೇಶದಿಂದ ಗರ್ಭಿಣಿ ಸ್ತಿçÃಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಪೌಷ್ಟಿಕ ಆಹಾರದ ಸೇವನೆ ಬಗ್ಗೆ ಮಾಹಿತಿ ನೀಡುವುದರ ಮೂಲಕ ಮಕ್ಕಳಿಗೆ ಬರುವ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಚೆಯ್ಯಂಡಾಣೆ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಕನಕಾವತಿ ಪೌಷ್ಟಿಕ ಆಹಾರ ಸೇವನೆಯಿಂದ ಉಂಟಾಗುವ ಉಪಯೋಗಗಳ ಕುರಿತು ಮಾಹಿತಿ ನೀಡಿದರು.

ಮಾತೃ ವಂದನಾ ಸಂಯೋಜಕಿ ಚೈತ್ರ ಮಾತನಾಡಿ, ಅಪೌಷ್ಟಿಕತೆಯನ್ನು ನಿವಾರಿಸುವ ಉದ್ದೇಶದಿಂದ ಸರಕಾರ ನಗದು ರೂಪದಲ್ಲಿ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದ್ದು ಗರ್ಭಿಣಿ ಸ್ತಿçÃಗಳು ಇದರ ಸದುಪಯೋಗ ಪಡೆದುಕೊಳ್ಳಲು ಹಾಗೂ ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ನಿಮ್ಮ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಇದನ್ನು ಪಲಾನುಭವಿಗಳಿಗೆ ತಲುಪಿಸುವಂತೆ ಮಾಡಬೇಕೆಂದರು.

ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಪೌಷ್ಟಿಕ ಆಹಾರಗಳನ್ನು ತಯಾರಿಸಿ ಹಾಗೂ ಹಣ್ಣು, ತರಕಾರಿ, ಸೊಪ್ಪುಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಿ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ನರಿಯಂದಡ ಗ್ರಾಮ ಪಂಚಾಯಿತಿ ಸದಸ್ಯ ಬೇಪುಡಿಯಂಡ ವಿಲಿನ್ ಹಾಗೂ ನೇತ್ರಾವತಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು. ಈ ಸಂದರ್ಭ ಪ್ರಥಮ್ ಸಂಸ್ಥೆಯ ಶಾಲಾ ಪೂರ್ವ ಶಿಕ್ಷಣದ ತರಬೇತುದಾರೆ ಸುರಭಿ, ಗ್ರಂಥಪಾಲಕಿ ರೆನ್ನಿ ಬಿಬೋ, ಅಂಗನವಾಡಿ, ಆಶಾ ಕಾರ್ಯಕರ್ತೆ ಯರು, ಗ್ರಾಮದ ಮಹಿಳೆಯರು, ಮತ್ತಿತರರು ಹಾಜರಿದ್ದರು.

ಕರಡ ಅಂಗನವಾಡಿ ಕಾರ್ಯಕರ್ತೆ ಈಶ್ವರಿ ಸ್ವಾಗತಿಸಿ, ಚೆಯ್ಯಂಡಾಣೆ ಅಂಗನವಾಡಿ ಕಾರ್ಯಕರ್ತೆ ತಾರಾ ವಂದಿಸಿದರು.

ಕೊಡ್ಲಿಪೇಟೆ ಅಂಗನವಾಡಿ ಕೇಂದ್ರ

ಆಲೂರು-ಸಿದ್ದಾಪುರ, ಸೆ. ೧೫: ಗರ್ಭಿಣಿ ಸ್ತಿçÃಯರು ಮತ್ತು ತಾಯಂದಿರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತೆಯನ್ನು ಕಾಪಾಡಿಕೊಂಡರೆ ತಾಯಿ ಮತ್ತು ಶಿಶು ಮರಣವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಪರಿವೀಕ್ಷಕಿ (ಬಿಹೆಚ್‌ಓ) ಮಂಜುಳ ಅಭಿಪ್ರಾಯಪಟ್ಟರು.

ಕೊಡ್ಲಿಪೇಟೆ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ಸಪ್ತಾಹ ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳ ಪೋಷಕರಿಗೆ ಮತ್ತು ಗರ್ಭಿಣಿಯರಿಗೆ ಮಾಹಿತಿ ನೀಡಿ ಮಾತನಾಡಿದರು.

ಗರ್ಭಿಣಿ ಸ್ತಿçÃಯರು ತನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಹತ್ತಿರದ ಆಸ್ಪತ್ರೆಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರಬೇಕು. ಪೌಷ್ಟಿಕ ಆಹಾರವನ್ನು ಸೇವಿಸಿದರೆ ಆರೋಗ್ಯ ಉತ್ತಮಗೊಳ್ಳುತ್ತದೆ. ಉತ್ತಮವಾದ ಆಹಾರದ ಸೇವನೆ ಯಿಂದ ಶರೀರದಲ್ಲಿ ಪೌಷ್ಟಿಕಾಂಶ ಒಳಗೊಂಡ ರಕ್ತ ಉತ್ಪತ್ತಿಯಾಗಿ ರಕ್ತಹೀನತೆ ದೂರವಾಗುತ್ತದೆ ಎಂದರು.

ಸೋಮವಾರಪೇಟೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಂಗನವಾಡಿಯ ಮೇಲ್ವಿಚಾರಕಿ ಸಾವಿತ್ರವ್ವ ಮಾತನಾಡಿ, ಕೆಲವು ವರ್ಷಗಳ ಹಿಂದೆ ತಾಯಿ ಮತ್ತು ಶಿಶು ಮರಣಗಳು ಹೆಚ್ಚಿದ್ದವು. ಆದರೆ ಇತ್ತೀಚಿನ ವರ್ಷಗಳಲ್ಲಿ ಸರಕಾರ ಮತ್ತು ಆರೋಗ್ಯ ಇಲಾಖೆಯ ಶ್ರಮದಿಂದ ಇದು ಕಡಿಮೆಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ಸದಸ್ಯ ನಂದೀಶ್ ವಹಿಸಿದ್ದರು. ವೇದಿಕೆಯಲ್ಲಿ ಆರೋಗ್ಯ ಇಲಾಖೆಯ ಅನಿತಾ, ಪೋಷಣ್ ಅಭಿಯಾನದ ಸಂಯೋಜಕ ರಂಜಿತ್ ಶೆಟ್ಟಿ, ಕೊಡ್ಲಿಪೇಟೆ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಿ ಗೌರಮ್ಮ, ಶಾಲಾಭಿವೃದ್ಧಿ ಸಮಿತಿ ಸದಸ್ಯ ವಸಂತ್, ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ಸದಸ್ಯರಾದ ಮುತ್ತಯ್ಯ, ಲಾವಣ್ಯ ಧರ್ಮಪ್ರಕಾಶ್, ಅಪ್ಸರಿ ಬೇಗಂ, ಆಶಾ ಕಾರ್ಯಕರ್ತೆ ಹೊನ್ನಮ್ಮ ಮುಂತಾದವರಿದ್ದರು. ಈ ಸಂದರ್ಭ ಸಾಂಪ್ರದಾಯಿಕ ಸೀಮಂತ ಕಾರ್ಯ ಕ್ರಮ ಏರ್ಪಡಿಸಲಾಯಿತು. ಕೊಡ್ಲಿಪೇಟೆ ಸುತ್ತಲಿನ ಹತ್ತು ಅಂಗನವಾಡಿ ಯವರು ಪಾಲ್ಗೊಂಡಿದ್ದರು.