ಸದಾಶಿವ ಸ್ವಾಮೀಜಿ
ಶನಿವಾರಸಂತೆ, ಸೆ. ೧೫: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳು ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸುವುದರ ಜೊತೆಗೆ ಧರ್ಮದ ತಳಹದಿಯೊಂದಿಗೆ ಉತ್ತಮ ಬದುಕನ್ನು ಕಟ್ಟಿಕೊಡುತ್ತಿವೆ ಎಂದು ಕೊಡ್ಲಿಪೇಟೆ ಶ್ರೀ ಕ್ಷೇತ್ರ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಹೇಳಿದರು.
ಸಮೀಪದ ಕೊಡ್ಲಿಪೇಟೆಯ ಭದ್ರಮ್ಮ ಮಹಾಂತಪ್ಪ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡ್ಲಿಪೇಟೆ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಶ್ರೀವರಮಹಾಲಕ್ಷಿö್ಮÃ ಪೂಜಾ ಸಮಿತಿ ವತಿಯಿಂದ ಕೌಟುಂಬಿಕ ಸೌಹಾರ್ದತೆ ಹಾಗೂ ಗ್ರಾಮ ಸುಭೀಕ್ಷೆಗಾಗಿ ನಡೆದ ಸಾಮೂಹಿಕ ಶ್ರೀವರಮಹಾಲಕ್ಷಿö್ಮÃ ಪೂಜಾ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಮಾಡದ ಅನೇಕ ಯೋಜನೆಗಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಅನುಷ್ಠಾನಗೊಳ್ಳುತ್ತಿವೆ. ರಾಜ್ಯದ ೩೨ ಜಿಲ್ಲೆಗಳಲ್ಲಿ ಇಂತಹ ಕಾರ್ಯಕ್ರಮ ಗಳನ್ನು ಕೈಗೊಂಡು ಜನಜಾಗೃತಿ ಮೂಡಿಸುವುದರ ಜತೆಗೆ ಅಸಹಾ ಯಕರಿಗೆ ಸಹಾಯಹಸ್ತ ಚಾಚುವ ಮೂಲಕ ಅವರ ಬದುಕನ್ನು ಹಸನು ಗೊಳಿಸಲಾಗುತ್ತಿದೆ ದೇವಾಲ ಯದಿಂದ ಹಿಡಿದು ಶೌಚಾಲಯ ದವರೆಗೂ ಧನ ಸಹಾಯವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಹೆಚ್. ರೋಹಿತ್ ಮಾತನಾಡಿ, ಯೋಜನೆಯಡಿ ಅನೇಕ ಕಾರ್ಯಕ್ರಮಗಳಿವೆ. ಬಡಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ವಿದ್ಯಾರ್ಥಿ ವೇತನ ಸೌಲಭ್ಯ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ ಸಹಾಯಧನ, ಮಹಿಳೆಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು, ಹೈನು ಗಾರಿಕೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು. ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಭಗವಾನ್ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಆಚಾರ, ವಿಚಾರ, ಸಂಸ್ಕೃತಿ ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕು ಎಂದರು. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿಗಳಿಗೆ ಯೋಜನೆಯ ವಿವಿಧ ಕಾರ್ಯ ಕ್ರಮದ ಅಡಿ ಮಂಜೂರಾದ ಮಂಜೂರಾತಿ ಪತ್ರ ಹಾಗೂ ಚೆಕ್ಕುಗಳನ್ನು ವಿತರಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಶಿಲ್ಪಿ ವರ ಪ್ರಸಾದ್ ಮಾತನಾಡಿ, ಸಾಮೂಹಿಕ ವರಮಹಾಲಕ್ಷಿö್ಮÃ ಪೂಜಾ ಕಾರ್ಯದ ಮೂಲಕ ಧರ್ಮದ ಬಗ್ಗೆ ಜನಜಾಗೃತಿ ಮೂಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ವಲಯ ಮೇಲ್ವಿಚಾರಕ ನಾಗರಾಜ್, ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನೀಫ್, ಬೆಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಮಲಮ್ಮ, ಹಂಡ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಿರಂಜನ್, ವರಮಹಾಲಕ್ಷಿö್ಮÃ ಪೂಜಾ ಸಮಿತಿ ಅಧ್ಯಕ್ಷ ಬಿ.ವಿ. ನಾಗರಾಜ್, ಒಕ್ಕೂಟದ ಉಪಾಧ್ಯಕ್ಷ ಪಂಕಜ್ ಪ್ರಕಾಶ್, ಕಾರ್ಯದರ್ಶಿ ನಾಗರಾಜ್, ಇತರ ಪ್ರಮುಖರು ಹಾಜರಿದ್ದರು.