ಮಡಿಕೇರಿ, ಸೆ. ೧೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಶುಕ್ರವಾರ ನಡೆದ ‘ಸಂವಿಧಾನ ಪೀಠಿಕೆ ವಾಚನ’ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನ ವ್ಯಕ್ತವಾಯಿತು. ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಸಂವಿಧಾನ ಪೀಠಿಕೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ಒಳಗೊಂಡಿದ್ದು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವತಂತ್ರವನ್ನು ಪ್ರಸ್ತಾಪಿಸಲಾಗಿದೆ.

ಭಾರತೀಯ ಪ್ರಜೆಗಳಾದ ಎಲ್ಲರಿಗೂ ಸಮಾನ ಸ್ಥಾನಮಾನ ಮತ್ತು ಅವಕಾಶಗಳು ದೊರೆಯುವಂತೆ ಮಾಡುವುದು ಸಂವಿಧಾನದ ಆಶಯವಾಗಿದೆ. ವ್ಯಕ್ತಿ ಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಬೇಕಿದೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ವಿಶ್ವದಲ್ಲಿಯೇ ಮಾದರಿಯಾದ ಅತ್ಯುತ್ತಮ ಸಂವಿಧಾನವನ್ನು ಭಾರತೀಯರಿಗೆ ನೀಡಿದ್ದಾರೆ ಎಂದು ಅನಿತಾ ಪೂವಯ್ಯ ನುಡಿದರು.

ಜಿ.ಪಂ. ಸಿಇಒ ವರ್ಣಿತ್ ನೇಗಿ ಮಾತನಾಡಿ, ಭಾರತ ರಾಷ್ಟçದಲ್ಲಿ ಸಂವಿಧಾನವೇ ಪ್ರತಿಯೊಬ್ಬರಿಗೂ ಜೀವಾಳವಾಗಿದೆ. ಸಂವಿಧಾನವಿಲ್ಲದೆ ಜೀವನ ಇಲ್ಲ.

ಸಂವಿಧಾನದಿAದ ಹಲವು ಕಾನೂನು ಸೌಲಭ್ಯಗಳು ಪ್ರತಿಯೊಬ್ಬರಿಗೂ ತಲುಪಲಿವೆ ಎಂದರು.

ಹೆಚ್ವುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಅವರು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ, ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರö್ಯ ಸ್ಥಾನಮಾನ ಹಾಗೂ ಅವಕಾಶ

(ಮೊದಲ ಪುಟದಿಂದ) ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟçದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ, ಅವರಲ್ಲಿ ಭ್ರಾತೃತ್ವ ಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕವಾಗಿ ಸಂಕಲ್ಪ ಮಾಡಿದವರಾಗಿ ನಮ್ಮ ಸಂವಿಧಾನ ಸಭೆಯಲ್ಲಿ ೧೯೪೯, ನವೆಂಬರ್ ೨೬ ರಂದು ಸಂವಿಧಾನವನ್ನು ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ” ಎಂದು ಸಂವಿಧಾನ ಪೀಠಿಕೆಯನ್ನು ವಾಚಿಸಿದರು.

ಪ್ರತಿಯೊಬ್ಬರ ಬದುಕು ಹಸನಾಗಲು ಸಂವಿಧಾನವೇ ಮೂಲ ಎಂಬುದನ್ನು ಅರಿತುಕೊಳ್ಳಬೇಕು. ಎಲ್ಲಾ ವರ್ಗದ ಜನರಿಗೂ ಸಂವಿಧಾನ ಸಮಾನ ಅವಕಾಶ ಕಲ್ಪಿಸಿದೆ. ಸಂವಿಧಾನದ ಪೀಠಿಕೆಯೇ ಆತ್ಮ ಮತ್ತು ಹೃದಯವಾಗಿದೆ ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ೫೪ ಸಾವಿರ ಗುರಿಯಲ್ಲಿ ೨.೮೦ ಲಕ್ಷ ಜನರು ಹೆಸರು ನೋಂದಣಿ ಮಾಡಿ ಸಂವಿಧಾನ ಪೀಠಿಕೆ ವಾಚನಕ್ಕೆ ಅಭೂತ ಪೂರ್ವ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಭೆಯ ಆರಂಭದಲ್ಲಿ ಸಂವಿಧಾನ ಪೀಠಿಕೆ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಗಣ್ಯರು ನೆರವೇರಿಸಿದರು. ಸಂವಿಧಾನ ಪೀಠಿಕೆಯ ಭಾವಚಿತ್ರವನ್ನು ಗಣ್ಯರಿಗೆ ಹಸ್ತಾಂತರ ಮಾಡಲಾಯಿತು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಬಿಸಿಎಂ ಇಲಾಖೆ ಅಧಿಕಾರಿ ಮಂಜುನಾಥ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ದಿವಾಕರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಇತರರು ಹಾಜರಿದ್ದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿನಿಧಿಗಳು ನಾಡಗೀತೆ ಮತ್ತು ರಾಷ್ಟçಗೀತೆ ಹಾಡಿದರು. ರಮೇಶ್ ನಿರೂಪಿಸಿ, ವಂದಿಸಿದರು. ಸಂವಿಧಾನ ಪೀಠಿಕೆ ವಾಚನ ರಾಜ್ಯ ಮಟ್ಟದ ಕಾರ್ಯಕ್ರಮ ವೀಕ್ಷಣೆಗೆ ವರ್ಚುವಲ್ ಮೂಲಕ ಅವಕಾಶ ಮಾಡಲಾಗಿತ್ತು.