ಮಡಿಕೇರಿ, ಸೆ. ೧೫: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ೨೦೨೩-೨೪ನೇ ಜುಲೈ ಆವೃತ್ತಿ ಪ್ರವೇಶಾತಿಯನ್ನು ತಾ. ೩೦ ರವರೆಗೆ ವಿಸ್ತರಿಸಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.
ಕೆಲಸಕ್ಕೆ ಹೋಗುವ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ ೨೦೨೩ರ ತಾ. ೩೦ ರವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಕರಾಮುವಿ ಪ್ರಾದೇಶಿಕ ಕೇಂದ್ರ, ಮಡಿಕೇರಿ ಕಚೇರಿಯನ್ನು ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮಡಿಕೇರಿ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ೨೦೨೩-೨೪ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ-ಸ್ನಾತಕೋತ್ತರ ಕೋರ್ಸ್ಗಳಾದ ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಲಿಬ್, ಐಎಸ್ಸಿ, ಬಿಎಸ್ಸಿ, ಎಂ.ಲಿಬ್ ಐಎಸ್ಸಿ (ಜನರಲ್, ಐಟಿ), ಬಿಎಸ್‌ಡಬ್ಲುö್ಯ, ಎಂಎ, ಎಂಸಿಜೆ, ಎಂಕಾA, ಎಂಎಸ್ಸಿ, ಎಂ.ಲಿಬ್ ಐಎಸ್ಸಿ(ಎಂಬಿಎ, ಎಂಸಿಎ (ಎಐಸಿಟಿಡ ಅಪ್ರೋವ್‌ಡ್) ಎಂಎಸ್‌ಡಬ್ಲುö್ಯ ಮತ್ತು ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮ ಸರ್ಟಿಫಿಕೇಟ್ ಪ್ರೋಗ್ರಾಮ್‌ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಕೆಎಸ್‌ಬಿಯು ಯುಜಿಸಿ ಮಾನ್ಯತೆ ಪಡೆದಿದೆ ಮತ್ತು ನ್ಯಾಕ್‌ನಿಂದ ‘ಎ ಪ್ಲಸ್’ ಮಾನ್ಯತೆ ಪಡೆದಿದೆ. ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವ ವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳಿಗೆ ಸಮನಾದ ಅರ್ಹತೆ ಇರುತ್ತದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಸ್ಮಿತಾ ಸುಬ್ಬಯ್ಯ ಪ್ರಾದೇಶಿಕ ನಿರ್ದೇಶಕರು, ಕರಾಮುವಿ., ಮಡಿಕೇರಿ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿಪೂರ್ವ ಕಾಲೇಜು ಆವರಣ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಟ್ಟಡ ಮಡಿಕೇರಿ-೫೭೧೨೦೧ ದೂ. ೦೮೨೭೨೨೦೧೧೪೭, ೮೦೭೩೩೪೨೩೧೦, ೭೬೧೮೭೬೩೬೫೪, ೯೧೪೧೯೩೮೮೦೩, ೮೨೯೬೨೧೫೭೧೪, ೯೬೧೧೩೨೦೧೯೧ನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.