ಮಡಿಕೇರಿ, ಸೆ. ೧೭: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಸಹಕಾರದೊಂದಿಗೆ ಭಾನುವಾರ ಮಹದೇವಪೇಟೆಯ ಚೌಡೇಶ್ವರಿ ದೇವಾಲಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಜರುಗಿತು.
ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಪಂ ಸಿಇಓ ವರ್ಣಿತ್ ನೇಗಿ, ಕೊಡಗು ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಎಸ್.ಜೆ. ದೇವದಾಸ್, ಮಡಿಕೇರಿ ತಾಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಜಗದೀಶ್ ಆಚಾರ್ಯ, ವೀರಾಜಪೇಟೆ ತಾಲೂಕು ಅಧ್ಯಕ್ಷ ದಿವಾಕರ ಆಚಾರ್ಯ, ವಿಶ್ವಕರ್ಮ ಸಮು ದಾಯ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕರಾದ ಸುಬ್ರಮಣ್ಯ, ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಶಿಲ್ಪಿ, ಕಲಾಶ್ರೀ ಪ್ರಶಸ್ತಿ ವಿಜೇತರಾದ ಮಂಜುನಾಥ ಆಚಾರ್ಯ ಇತರರು ಇದ್ದರು.