ವೀರಾಜಪೇಟೆ, ಸೆ. ೧೬: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತç ಮತ್ತು ಎನ್.ಎಸ್.ಎಸ್. ವಿಭಾಗದಿಂದ ಕಾಲೇಜಿನ ಸಭಾಂಗಣದಲ್ಲಿ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ. ವಹಿಸಿದ್ದರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥೆ ದಿವ್ಯ ಆರ್. ಅವರು, ೧೯೯೭ರ ಸೆಪ್ಟೆಂಬರ್ ೧೫ ರಂದು ಇಂಟರ್ ಪಾರ್ಲಿಮಂಟರಿ ಯೂನಿಯನ್ ಪ್ರಜಾಪ್ರಭುತ್ವದ ಸಾರ್ವತ್ರಿಕ ಘೋಷಣೆಯನ್ನು ಅಂಗೀಕರಿಸಿದ ಸವಿನೆನಪಿಗಾಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ನವೆಂಬರ್ ೮, ೨೦೦೭ ರಂದು ನಿರ್ಣಯವನ್ನು ಅಂಗೀಕರಿಸಿ ಸೆಪ್ಟೆಂಬರ್ ೧೫ನ್ನು ಅಂರ‍್ರಾಷ್ಟಿçÃಯ ಪ್ರಜಾಪ್ರಭುತ್ವ ದಿನವಾಗಿ ಆಚರಿಸುವ ನಿರ್ಣಯ ಕೈಗೊಂಡಿತು. ಅದರಂತೆ ೨೦೦೮ ರಿಂದ ಸೆಪ್ಟೆಂಬರ್ ೧೫ ರಂದು ಅಂರ‍್ರಾಷ್ಟಿçÃಯ ಪ್ರಜಾಪ್ರಭುತ್ವ ದಿನ ಆಚರಿಸುತ್ತಾ ಬರಲಾಗುತ್ತಿದೆ ಎಂದರು.

ಕಾಲೇಜಿನ ಬೋಧಕ-ಬೋಧಕೇತರ ಹಾಗೂ ವಿದ್ಯಾರ್ಥಿಗಳು ಒಟ್ಟಾಗಿ ಸಂವಿಧಾನದ ಪ್ರಸ್ತಾವನೆ-ಪೀಠಿಕೆಯನ್ನು ಓದುವ ಮೂಲಕ ಜೀವನದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯುತ್ತೇವೆಂದು ಪ್ರತಿಜ್ಞೆ ಮಾಡಿದರು.