ಗೋಣಿಕೊಪ್ಪಲು, ಸೆ. ೧೭: ಪ್ರತಿ ಬಾರಿಯಂತೆ ಈ ಬಾರಿಯೂ ಗೋಣಿಕೊಪ್ಪಲುವಿನ ಶ್ರೀ ಕಾವೇರಿ ದಸರಾ ಸಮಿತಿಯ ಪದಾಧಿಕಾರಿಗಳು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಕಾಣಿಕೆ ಸಮರ್ಪಿಸಿದರು.
ಶ್ರೀ ಕಾವೇರಿ ದಸರಾ ಸಮಿತಿಯ ಕಳೆದ ಸಾಲಿನ ಅಧ್ಯಕ್ಷರಾದ ಬಿ.ಎನ್. ಪ್ರಕಾಶ್ ಹಾಗೂ ಉಪ ಸಮಿತಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪೂಜೆ ಸಲ್ಲಿಸಿದರು.
ಈ ವೇಳೆ ಕಳೆದ ಸಾಲಿನಲ್ಲಿ ದೇವಿಗೆ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದ್ದ ಹಣವನ್ನು ಅರ್ಪಿಸಲಾಯಿತು.
ಈ ವೇಳೆ ಶ್ರೀ ಕಾವೇರಿ ದಸರಾ ಸಮಿತಿಯ ಪ್ರ.ಕಾರ್ಯದರ್ಶಿ ಜಪ್ಪು ಸುಬ್ಬಯ್ಯ, ಮಾಜಿ ಅಧ್ಯಕ್ಷ ಸಿ.ಕೆ. ಬೋಪಣ್ಣ, ಪ್ರಮುಖರಾದ ಚೈತ್ರ, ಸುಮಿ ಸುಬ್ಬಯ್ಯ, ಮಲ್ಚೀರ ಗಾಂಧಿ, ಶಿವಾಜಿ, ರಶ್ಮಿ ಪ್ರಕಾಶ್, ಟಿ.ಬಿ. ಜೀವನ್, ಮಧು ಮಾಚಯ್ಯ, ರಮೇಶ್, ಶೀಲಾ ಬೋಪಣ್ಣ ಸೇರಿದಂತೆ ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು ಹಾಜರಿದ್ದರು.