ಮಡಿಕೇರಿ, ಸೆ. ೧೪ : ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ನಾಗರಿಕರು ಪಿ.ಓ.ಪಿ. ಗಣೇಶ ತಯಾರಿಕೆ ಹಾಗೂ ರಾಸಾಯನಿಕ ಬಣ್ಣ ಮುಕ್ತ ಪರಿಸರ ಸ್ನೇಹಿ ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿಯ ಜಿಲ್ಲಾ ಉಪ ಪರಿಸರ ಅಧಿಕಾರಿ ಎಂ.ಎಸ್. ನೇತ್ರಾವತಿ ಮನವಿ ಮಾಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್‌ನ ಜಿಲ್ಲಾ ಘಟಕದ ವತಿಯಿಂದ ಶಾಲಾ-ಕಾಲೇಜುಗಳಲ್ಲಿ ಇಕೋ ಕ್ಲಬ್, ವಿಜ್ಞಾನ ಸಂಘ, ರಾಷ್ಟಿçÃಯ ಸೇವಾ ಯೋಜನೆ (ಎನ್‌ಎಸ್‌ಎಸ್), ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ಇನ್ನಿತರ ಸಂಘಗಳು, ಎಸ್‌ಡಿಎಂಸಿ ಹಾಗೂ ಶಾಲಾ ಆಡಳಿತ ಮಂಡಳಿಯ ಸಹಯೋಗದೊಂದಿಗೆ ತಾ. ೧೮ ರಂದು ನಡೆಯಲಿರುವ ಗೌರಿ- ಗಣೇಶೋತ್ಸವದ ಅಂಗವಾಗಿ ‘‘ನಮ್ಮ ನಡೆ ಹಸಿರೆಡೆಗೆ’’ ಅಭಿಯಾನದಡಿ (ಗೋ ಗ್ರೀನ್ ಕ್ಯಾಂಪೈನ್) ‘‘ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ-೨೦೨೩’’ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸಂಘ- ಸಂಸ್ಥೆಗಳ ಸಹಭಾಗಿತ್ವದಲ್ಲಿ ಜನಜಾಗೃತಿ ಮೂಡಿಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಣೇಶೋತ್ಸವ ಸಂದರ್ಭದಲ್ಲಿ ಪಿ.ಓ.ಪಿ. ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾಲಿನ್ಯಕಾರಿ ರಾಸಾಯನಿಕ ಬಣ್ಣ ಬಳಸಿ ಗಣೇಶ ಮೂರ್ತಿ ತಯಾರಿಸಿ ಪ್ರತಿಷ್ಠಾಪನೆ ಮಾಡುವುದನ್ನು ಸರ್ಕಾರ ಸಂಪೂರ್ಣವಾಗಿ ನಿಷೇಧಿಸಿದೆ. ಈ ಕುರಿತು ಕೊಡಗು ಜಿಲ್ಲಾಧಿಕಾರಿಗಳು ಈಗಾಗಲೇ ಪ್ರಕಟಣೆ ಹೊರಡಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

ನಾಗರಿಕರು ಪರಿಸರ ಪೂರಕವಾಗಿ ಗಣೇಶೋತ್ಸವ ಆಚರಿಸಬೇಕೆಂದು ನೇತ್ರಾವತಿ ಮನವಿ ಮಾಡಿದ್ದಾರೆ.