ಗೋಣಿಕೊಪ್ಪಲು, ಸೆ. ೧೬: ಪ್ರತಿ ನಾಗರಿಕನು ಭಾರತ ದೇಶದ ಸಂವಿಧಾನದ ಆಶಯದಂತೆ ಮುನ್ನಡೆಯಬೇಕು. ದೇಶದ ಸಂವಿಧಾನಕ್ಕೆ ಪ್ರಪಂಚದಲ್ಲೆಡೆ ವಿಶೇಷ ಸ್ಥಾನಮಾನವಿದೆ. ಪ್ರತಿಯೋರ್ವರು ಸಂವಿಧಾನವನ್ನು ಅರ್ಥೈಸಿಕೊಳ್ಳುವಂತಾಗಬೇಕು. ಅಲ್ಲದೆ ಅದನ್ನು ಮತ್ತೊಬ್ಬರಿಗೆ ತಿಳಿ ಹೇಳುವಂತಾಗಬೇಕು ಎಂದು ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಪ್ರಶಾಂತ್ ತಿಳಿಸಿದರು.
ಪೊನ್ನಂಪೇಟೆ ತಾಲೂಕು ಕೇಂದ್ರದ ಕಚೇರಿ ಸಭಾಂಗಣದಲ್ಲಿ ಆಯೋಜನೆಗೊಂಡಿದ್ದ ಭಾರತದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. ಸಂವಿಧಾನವನ್ನು ಅರ್ಥೈಸಿಕೊಂಡು ಮುನ್ನಡೆದರೆ, ಭಾರತ ದೇಶ ಸುಭಿಕ್ಷೆಯಿಂದ ಉತ್ತಮ ಮಾರ್ಗದಲ್ಲಿ ನಡೆಯಲಿದೆ. ಸಂವಿಧಾನದ ಬಗ್ಗೆ ಪ್ರತಿಯೋರ್ವರಿಗೂ ಜಾಗೃತಿ ಮೂಡಿಸುವಂತಾಗಬೇಕು ಎಂದರು.
ವೇದಿಕೆಯಲ್ಲಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಕೆ.ಸಿ. ಅಪ್ಪಣ್ಣ, ಅಕ್ಷರ ದಾಸೋಹ ಅಧಿಕಾರಿ ರಾಜೇಶ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕವಿತ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ವಿಸ್ತಾರಣಾಧಿಕಾರಿ ನಾಗರಾಜು,ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಕುಮಾರ್, ಪಿ.ಆರ್.ಇ.ಡಿ.ಯ ಎಇಇ ಮಹಾದೇವ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಬೀನಾ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ರೀನಾ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿ ಸುನೀಲ್, ಡಾ. ಶಾಂತೇಶ್ ಅಲ್ಪಸಂಖ್ಯಾತ ಮಾಹಿತಿ ಕೇಂದ್ರದ ಅಧಿಕಾರಿ ಯಕ್ಬಾಲ್ ಪಾಷ, ರೆವೆನ್ಯೂ ಅಧಿಕಾರಿ ಸುಧೀಂದ್ರ, ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷೆ ಗಿರಿಜಾ ವೆಂಕಟೇಶ್, ಸದಸ್ಯರಾದ ಕೋಳೆರ ಭಾರತಿ, ಹೆಚ್.ಎನ್. ರವಿ, ಮೂಕಳೇರ ಸುಮಿತಾ ಗಣೇಶ್, ತಾಲೂಕು ಸಲಹಾ ಸಮಿತಿ ಸದಸ್ಯರಾದ ಚುಬ್ರು, ಮಣಿಕುಂಞ, ರವೀಣ, ಶಾಂತಮ್ಮ, ಕೃಷ್ಣಪ್ಪ ಬೆಳ್ಳೂರು ಸೇರಿದಂತೆ ಅನೇಕ ಪ್ರಮುಖರು ಹಾಜರಿದ್ದರು. ತಾಲೂಕು ಹಿಂದುಳಿದ ಕಲ್ಯಾಣಾಧಿಕಾರಿ ಕವಿತ ಸ್ವಾಗತಿಸಿ, ನಿಲಯ ಮೇಲ್ವೀಚಾರಕಿ ಸ್ವಪ್ನ ನಿರೂಪಿಸಿ, ವಂದಿಸಿದರು.ಕುಶಾಲನಗರ
ಕುಶಾಲನಗರ, ಸೆ. ೧೬: ಪ್ರಜಾಪ್ರಭುತ್ವ ದಿನದ ಅಂಗವಾಗಿ ಕುಶಾಲನಗರ ತಾಲೂಕಿನ ವಿವಿಧೆಡೆ ಭಾರತ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಏಕಕಾಲದಲ್ಲಿ ನಡೆಯಿತು.
ಕುಶಾಲನಗರ ತಾಲೂಕು ತಹಶೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ದಂಡಾಧಿಕಾರಿ ಕಿರಣ್ ಗೌರಯ್ಯ ಅವರ ಉಪಸ್ಥಿತಿಯಲ್ಲಿ ಕಚೇರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ವಿವಿಧ ಸಂಘ-ಸAಸ್ಥೆಗಳ ಪ್ರಮುಖರು ಪಾಲ್ಗೊಂಡು ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಕುಶಾಲನಗರ ವಲಯ ಅರಣ್ಯ ಅಧಿಕಾರಿ ಕೆ.ವಿ. ಶಿವರಾಮ್, ಉಪ ತಹಶೀಲ್ದಾರ್ ಮಧುಸೂದನ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ವಿ.ಪಿ. ಶಶಿಧರ್ ಹಲವು ಸಂಘ-ಸAಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.
ಕುಶಾಲನಗರ ಪುರಸಭೆ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯಿತಿ ಮುಖ್ಯ ಅಧಿಕಾರಿ ಕೃಷ್ಣಪ್ರಸಾದ್, ಮಾಜಿ ಅಧ್ಯಕ್ಷ ಜಯವರ್ಧನ್ ಪುರಸಭೆ ಸದಸ್ಯರು ಪಂಚಾಯಿತಿ ಅಧಿಕಾರಿ ಸಿಬ್ಬಂದಿಗಳು ಇದ್ದರು.
ಕುಶಾಲನಗರ ಸರಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಶಿಕ್ಷಕರು ವಿದ್ಯಾರ್ಥಿಗಳು ಪೋಷಕರು ಇದ್ದರು. ಸ್ಥಳೀಯ ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವಿವಿಧ ಶಾಲಾ-ಕಾಲೇಜುಗಳಲ್ಲಿ ಏಕಕಾಲದಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ನಡೆಯಿತು.