ವೀರಾಜಪೇಟೆ, ಸೆ. ೧೬: ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಸಂವಿಧಾನದ ಪ್ರಸ್ತಾವನೆಯ ವಾಚನ ಕಾರ್ಯಕ್ರಮ ನಡೆಯಿತು.
ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಕರ್ ಸಂವಿಧಾನದ ಪೀಠಿಕೆಯನ್ನು ವಾಚಿಸಿದರು.
ವೀರಾಜಪೇಟೆ ಮತ್ತು ಕಳತ್ತೋಡು ಕ್ಲಸ್ಟರ್ನ ಸಿ.ಆರ್.ಪಿ. ಆಗಿರುವ ವೆಂಕಟೇಶ್, ವಿದ್ಯಾಸಂಸ್ಥೆಯ ಮೂರು ವಿಭಾಗದ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು. ಎಲ್ಲಾ ವಿದ್ಯಾರ್ಥಿಗಳ ಸಮ್ಮುಖದಲ್ಲಿ ವಿದ್ಯಾರ್ಥಿ ನಾಯಕ ಹರಿಕೃಷ್ಣನ್ ನೇತೃತ್ವದಲ್ಲಿ ಸಂವಿಧಾನದ ಪೂರ್ವ ಪೀಠಿಕೆಯನ್ನು ಓದಲಾಯಿತು.