ಚಿಕ್ಕಬಳ್ಳಾಪುರ ಭೀಕರ ಅಪಘಾತದಲ್ಲಿ ೧೩ ಮಂದಿ ಸಾವು
ಬೆಂಗಳೂರು, ಅ. ೨೬: ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ೧೩ ಮಂದಿ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸಿಎಂ, ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ೧೩ ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. ೨ ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಬೆಳಗಿನ ಜಾವ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯ ಮುಂದೆಯೇ ರಸ್ತೆ ಬದಿ ನಿಂತಿದ್ದ ಸಿಮೆಂಟ್ ಲಾರಿಗೆ ಟಾಟಾ ಸುಮೋ ಹಿಂದಿನಿAದ ಡಿಕ್ಕಿ ಹೊಡೆದಿದೆ. ಪರಿಣಾಮ ಸುಮೋದಲ್ಲಿ ೧೨ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡಿದ್ದ ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟಾಟಾ ಸುಮೋ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿತ್ತು. ಆದರೆ ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಇದರಿಂದ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ನವಿಲುಗಳನ್ನು ಕೊಂದ ಆರೋಪದ ಮೇಲೆ ಒಡಿಶಾ ಮೂಲದ ಮೂವರ ಬಂಧನ
ತುಮಕೂರು, ಅ. ೨೬: ಜಿಲ್ಲೆಯ ಮಾರನಾಯಕನಪಾಳ್ಯ ಗ್ರಾಮದಲ್ಲಿ ಮಾಂಸಕ್ಕಾಗಿ ನವಿಲುಗಳನ್ನು ಕೊಂದ ಆರೋಪದ ಮೇಲೆ ಒಡಿಶಾ ಮೂಲದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಬಂಧಿತರನ್ನು ಬಿಟ್ಟಿಂಗ್ ನಾಯಕ್, ಬೈಶಕ್ ದಾವು ಮತ್ತು ದುಬಾ ಕಪಟ್ ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಆರೋಪಿಗಳು ಮಾರನಾಯಕನಪಾಳ್ಯದ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ‘ಗಟ್ಟಿಮುಟ್ಟಾದ ಮತ್ತು ರುಚಿಕರ' ಮಾಂಸಕ್ಕಾಗಿ ನವಿಲುಗಳನ್ನು ಕೊಂದಿದ್ದಾರೆ ಎನ್ನಲಾಗಿದೆ. ಗ್ರಾಮದಲ್ಲಿ ನವಿಲುಗಳ ಮಾರಣಹೋಮ ನಡೆಸುತ್ತಿದ್ದು, ಈ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ೧.೫ ಕಿಲೋಗ್ರಾಂ ಹಸಿ ನವಿಲು ಮಾಂಸ, ಎರಡು ಕತ್ತರಿಸಿದ ಕಾಲುಗಳು ಮತ್ತು ಬೇಯಿಸಿದ ಪಕ್ಷಿಯ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ನವಿಲು ಹಿಡಿಯಲು ಬಳಸುತ್ತಿದ್ದ ಬಲೆಗಳು, ಬಲೆ ಉಪಕರಣಗಳು ಮತ್ತು ಮಾಂಸ ಬೇಯಿಸಲು ಬಳಸುತ್ತಿದ್ದ ಪಾತ್ರೆಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಮಾಂಸವನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಸಂಬAಧ ಮುಂದಿನ ತನಿಖೆ ನಡೆಯುತ್ತಿದೆ.
೫ ಉಗ್ರರ ಸೆದೆಬಡಿದ ಭಾರತೀಯ ಸೇನೆ
ಶ್ರೀನಗರ, ಅ. ೨೬: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿ, ೫ ಉಗ್ರರ ಹೆಡೆಮುರಿ ಕಟ್ಟಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ. ಮಾತ್ರವಲ್ಲದೇ ಈ ಕಾರ್ಯಾಚರಣೆಯಲ್ಲಿ ಗಡಿಯೊಳಗೆ ನುಸುಳಲು ಯತ್ನಿಸಿದ ಐದು ಮಂದಿ ಅಪರಿಚಿತ ಭಯೋತ್ಪಾದಕರನ್ನು ಹತ ಮಾಡಿದೆ. ಈ ಬಗ್ಗೆ ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಮಾತನಾಡಿ, ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇದುವರೆಗೆ ಐವರು ಉಗ್ರರು ಸಾವನ್ನಪ್ಪಿದ್ದಾರೆ. ಈ ಪೈಕಿ ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಮೂರು ಮಂದಿ ಸೇರಿ ಒಟ್ಟು ೫ ಮಂದಿ ಉಗ್ರರನ್ನು ಹತ ಮಾಡಲಾಗಿದೆ ಎಂದರು. ಅಂತೆಯೇ ಉಗ್ರರ ಗುರುತು ಪತ್ತೆ ಕಾರ್ಯ ಮಾಡಲಾಗುತ್ತಿದ್ದು, ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ನೀಡಲಾಗುವುದು ಎಂದು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹುಲಿ ಉಗುರು ಡಾಲರ್ ಧರಿಸಿದ್ದ ಇಬ್ಬರು ಅರ್ಚಕರ ಬಂಧನ
ಚಿಕ್ಕಮಗಳೂರು, ಅ. ೨೬: ಹುಲಿ ಉಗುರು ಬೇಟೆಯನ್ನು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿ ಅರಣ್ಯಾಧಿಕಾರಿಗಳು ಮುಂದುವರಿಸಿದ್ದಾರೆ. ನಿನ್ನೆ ಧಾರ್ಮಿಕ ಗುರು ವಿನಯ್ ಗುರೂಜಿಯವರನ್ನು ಚಿಕ್ಕಮಗಳೂರಿನಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಇಂದು ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿAದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜಸ್ಥಾನ ಸಿಎಂ ಗೆಹ್ಲೋಟ್ ಪುತ್ರನಿಗೆ ಇಡಿ ಸಮನ್ಸ್
ಜೈಪುರ, ಅ. ೨೬: ವಿದೇಶಿ ವಿನಿಮಯ ಕಾನೂನು(ಫೆಮಾ) ಉಲ್ಲಂಘಿಸಿದ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಶುಕ್ರವಾರ ಜೈಪುರ ಅಥವಾ ನವದೆಹಲಿಯಲ್ಲಿರುವ ಫೆಡರಲ್ ಏಜೆನ್ಸಿಯ ಕಚೇರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ವೈಭವ್ ಗೆಹ್ಲೋಟ್ ಅವರಿಗೆ ಸೂಚಿಸಲಾಗಿದೆ. ರಾಜಸ್ಥಾನ ಮೂಲದ ಹಾಸ್ಪಿಟಾಲಿಟಿ ಗ್ರೂಪ್ ಟ್ರಿಟಾನ್ ಹೊಟೇಲ್ಸ್ & ರೆಸಾರ್ಟ್ಸ್ ಪ್ರೆöÊವೇಟ್ ಲಿಮಿಟೆಡ್, ವರ್ಧಾ ಎಂಟರ್‌ಪ್ರೆöÊಸಸ್ ಪ್ರೆöÊವೇಟ್ ಲಿಮಿಟೆಡ್ ಮತ್ತು ಅದರ ನಿರ್ದೇಶಕ ಹಾಗೂ ಪ್ರವರ್ತಕರಾದ ಶಿವಶಂಕರ್ ಶರ್ಮಾ, ರತ್ತನ್ ಕಾಂತ್ ಶರ್ಮಾ ಮತ್ತು ಇತರರ ವಿರುದ್ಧದ ಇತ್ತೀಚಿನ ಇಡಿ ದಾಳಿಗೆ ಸಂಬAಧಿಸಿದAತೆ ಸಮನ್ಸ್ ನೀಡಲಾಗಿದೆ. ಕಳೆದ ಆಗಸ್ಟ್ನಲ್ಲಿ ಜೈಪುರ, ಉದಯಪುರ, ಮುಂಬೈ ಮತ್ತು ದೆಹಲಿಯಲ್ಲಿ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಮೂರು ದಿನಗಳ ತೀವ್ರ ಶೋಧ ನಡೆಸಿದ್ದರು. ರತ್ತನ್ ಕಾಂತ್ ಶರ್ಮಾ ಅವರಿಗೆ ವೈಭವ್ ಗೆಹ್ಲೋಟ್ ಅವರೊಂದಿಗಿನ ಸಂಪರ್ಕವನ್ನು ಇಡಿ ಪರಿಶೀಲಿಸಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ (ಫೆಮಾ) ಅಡಿಯಲ್ಲಿ ಅವರ ಹೇಳಿಕೆ ದಾಖಲಿಸಲು ವಿಚಾರಣೆಗೆ ಕರೆದಿದೆೆ ಎಂದು ಮೂಲಗಳು ತಿಳಿಸಿವೆ.