ಚೆಯ್ಯಂಡಾಣೆ, ಅ. ೨೬: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರೊಂದು ರಸ್ತೆ ಬದಿಯ ತೋಡಿಗೆ ಬಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪಾರಾದ ಘಟನೆ ನಾಪೋಕ್ಲು ಮಡಿಕೇರಿ ಮುಖ್ಯರಸ್ತೆಯ ಪಾಲೂರು ನಡೆದಿದೆ.

ಮಡಿಕೇರಿ ಕಡೆಯಿಂದ ನಾಪೋಕ್ಲು ಮಾರ್ಗವಾಗಿ ಎಮ್ಮೆಮಾಡುವಿಗೆ ತೆರಳುತ್ತಿದ್ದ ಮೈಸೂರು ಮೂಲದ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದ ಮಾರುತಿ ಆಲ್ಟೊ ಕಾರು ನಾಪೋಕ್ಲು-ಮಡಿಕೇರಿ ಮುಖ್ಯರಸ್ತೆಯ ಪಾಲೂರು ಗ್ರಾಮದ ವಿಷ್ಣುಮೂರ್ತಿ ದೇವಾಲಯದ ಮುಂಭಾಗದ ರಸ್ತೆಯ ಇಳಿಜಾರಿನಲ್ಲಿ ಮುಂಜಾನೆ ೩ ಗಂಟೆ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ೨೦ ಅಡಿ ಆಳದ ತೋಡಿಗೆ ಬಿದ್ದಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊAಡಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತವಾದ ಕಾರನ್ನು ಕೊಟ್ಟಮುಡಿ ಗ್ರಾಮದ ಯುವಕರು ಟ್ರ‍್ಯಾಕ್ಟರ್ ಬಳಸಿ ಮೇಲೆತ್ತಲು ಸಹಕರಿಸಿದರು. -ಅಶ್ರಫ್