ಕೋವರ್ ಕೊಲ್ಲಿ ಇಂದ್ರೇಶ್
ಬೆAಗಳೂರು, ಅ. ೨೭ : ದೇಶದ ಖ್ಯಾತ ಫ್ಯಾಶನ್ ಡಿಸೈನರ್ ಕೊಡಗು ಮೂಲದ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ ಮತ್ತೆ ಸುದ್ದಿ ಆಗಿದ್ದಾರೆ. ಕುಡಿದ ಅಮಲಿನಲ್ಲಿ ವೇಗವಾಗಿ ಕಾರು ಚಲಾಯಿಸಿ ವ್ಯಕ್ತಿಯ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಯಲಹಂಕದಲ್ಲಿ ಅಕ್ಟೋಬರ್ ೨೫ ರ ರಾತ್ರಿ ನಡೆದಿದೆ.
ಮದ್ಯದ ಅಮಲಿನಲ್ಲಿ ರಾತ್ರಿ ೧೨ ಗಂಟೆ ವೇಳೆಗೆ ಅಪಾಯಕಾರಿಯಾಗಿ ಕಾರು ಚಾಲನೆ ಮಾಡುತ್ತಿದ್ದ ಆ್ಯಡಂ ಅವರ ಹಿಂದೆ ತಾನು ಹೋಗುತ್ತಿದ್ದು ಹಾರ್ನ್ ಮಾಡಿ ಓವರ್ ಟೇಕ್ ಮಾಡಿ ಮುಂದಕ್ಕೆ ತೆರಳಿದ್ದೆ. ಅಷ್ಟಕ್ಕೇ ಅವರು ಪುನಃ ನನ್ನ ಕಾರನ್ನು ಓವರ್ ಟೇಕ್ ಮಾಡಿಕೊಂಡು ಬಂದು ಯಲಹಂಕದ ರೈಲ್ವೆ ವೀಲ್ ಫ್ಯಾಕ್ಟರಿ ಬಳಿ ಅಡ್ಡಗಟ್ಟಿ ಗಲಾಟೆ ಮಾಡಿದರು. ಆಗ ನಾನು ಪೊಲೀಸ್ ಸಹಾಯವಾಣಿಗೆ ೧೧೨ಗೆ ಕರೆ ಮಾಡಿದೆ. ಸ್ಥಳಕ್ಕೆ ಬಂದ ಪೊಲೀಸರೊಂದಿಗೂ ಸಹ ಆ್ಯಡಂ ಬಿದ್ದಪ್ಪ ವಾಗ್ವಾದ ನಡೆಸಿದ್ದರು. ಜೊತೆಗೆ ನನಗೆ ಪ್ರಭಾವಿ ವ್ಯಕ್ತಿಗಳು ಗೊತ್ತು ಎಂದು ಆ್ಯಡಂ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಯಲಹಂಕ ನಿವಾಸಿ ರಾಹುಲ್ ಆರೋಪಿಸಿದ್ದಾರೆ. ಈ ಘಟನೆ ನಡೆದ ನಂತರ ಸ್ಥಳಕ್ಕೆ ಬಂದ ಯಲಹಂಕ ಸಂಚಾರಿ ಪೊಲೀಸರ ಜೊತೆಗೂ ಆ್ಯಡಂ ವಾಗ್ವಾದ ನಡೆಸಿದ್ದು, ಆತನನ್ನು ವಶಕ್ಕೆ ಪಡೆದರು.
ಈ ಬಗ್ಗೆ ಮಾಹಿತಿ ನೀಡಿದ ಈಶಾನ್ಯ ವಿಭಾಗದ ಡಿಸಿಪಿ ಲಕ್ಷಿö್ಮÃ ಪ್ರಸಾದ್, ಆ್ಯಡಂ ಕುಡಿದ ಮತ್ತಿನಲ್ಲಿ ಪೊಲೀಸರು ಹಾಗೂ ವ್ಯಕ್ತಿಯೊಬ್ಬರ ಜೊತೆ ಗಲಾಟೆ ಮಾಡಿದ್ದಾರೆ. ನಾನು ಪ್ರಭಾವಿ ಆಗಿದ್ದೇನೆ ನನ್ನನ್ನೇ ಪ್ರಶ್ನೆ ಮಾಡುತ್ತೀರಾ ಎಂದು ಪೊಲೀಸರಿಗೇ ಬೆದರಿಕೆ ಹಾಕಿದ್ದಾನೆ. ಯಲಹಂಕ ಸಂಚಾರಿ ಪೊಲೀಸರು ಆತನ ಕಾರನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿ, ಮೊಕದ್ದಮೆ ದಾಖಲಿಸಿಕೊಂಡು ಸ್ಟೇಷನ್ ಜಾಮೀನಿನ ಮೇಲೆ ಬಿಟ್ಟು ಕಳಿಸಿದ್ದಾರೆ ಎಂದು ಹೇಳಿದರು.