ಮಡಿಕೇರಿ, ಅ. ೨೭: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುವದು ನಿಶ್ಚಿತ ಎಂದು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಲಕ್ಷö್ಮಣ್ ಹೇಳಿದರು.
ಚುನಾವಣೆಗೆ ಹಲವಾರು ಮಂದಿ ಅಭ್ಯರ್ಥಿ ಆಕಾಂಕ್ಷಿಗಳಿದ್ದಾರೆ. ತಾನೂ ಓರ್ವ ಪ್ರಬಲ ಆಕಾಂಕ್ಷಿಯಾಗಿದ್ದು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಅಧ್ಯಕ್ಷ ಮಂಜುನಾಥ್ಕುಮಾರ್, ವಕ್ತಾರ ಸುರೇಶ್, ಬ್ಲಾಕ್ ಅಧ್ಯಕ್ಷ ಹಂಸ, ಮೈಸೂರು ಜಿ.ಪಂ. ಮಾಜಿ ಅಧ್ಯಕ್ಷ ರಾಮು ಇದ್ದರು.