ಮಡಿಕೇರಿ, ಅ. ೨೭: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕದ ವತಿಯಿಂದ ತಾ. ೨೯ರಂದು ಜನಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ೧೦ ಗಂಟೆಯಿAದ ಅಧಿವೇಶನ ಆರಂಭಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರವೂ ನಡೆಯಲಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಹೆಚ್.ವಿ ಶಿವಪ್ಪ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾನಗಲ್ ಶ್ರೀ ಕುಮಾರಸ್ವಾಮಿಗಳ ೧೫೬ನೇ ಜಯಂತಿ ಮತ್ತು ಡಾ. ಶ್ರೀ ಶಿವಕುಮಾರಸ್ವಾಮಿ ಜಯಂತಿ ಪ್ರಯುಕ್ತ ಜನಜಾಗೃತಿ ಸಭೆ ಏರ್ಪಡಿಸಲಾಗಿದೆ. ತಾ. ೨೯ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಬೆಳಿÀಗ್ಗೆ ೧೦ ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಮೊದಲ ಅಧಿವೇಶನ ನಡೆಯಲಿದ್ದು, ಹರಗುರು ಚರಮೂರ್ತಿಗಳು ಮತ್ತು ಸಚಿವ ಈಶ್ವರಖಂಡ್ರೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪುಸ್ತಕ ಬಿಡುಗಡೆ, ಉಪನ್ಯಾಸ ಕಾರ್ಯಕ್ರಮವೂ ಇದೇ ಸಂದರ್ಭ ನಡೆಯಲಿದೆ. ಅಂದು ಮದ್ಯಾಹ್ನ ೨ ರಿಂದ ೪ ಗಂಟೆಯವರೆಗೆ ೨ನೇ ಅಧಿವೇಶನ ನಡೆಯಲಿದ್ದು, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಗೌರವಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಸದಾಶಿವ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿ ಯಲ್ಲಿ ಮಹಾಸಭಾದ ಕೊಡಗು ಘಟಕದ ಪ್ರಮುಖರಾದ ಶಾಂಭಶಿವ ಮೂರ್ತಿ, ಉದಯಕುಮಾರ್, ಮಹದೇವಪ್ಪ ಹಾಜರಿದ್ದರು.