ನಾಪೋಕ್ಲು, ಅ. ೨೭: ಕಳೆದ ೨ ದಿನಗಳ ಹಿಂದೆ ನಾಪತ್ತೆಯಾಗಿದ್ದ ಇಲ್ಲಿನ ಖಾಸಗಿ ಶಾಲೆಯೊಂದರ ೯ನೇ ತರಗತಿಯ ವಿದ್ಯಾರ್ಥಿನಿ ಶುಕ್ರವಾರ ಮಧ್ಯಾಹ್ನ ಅರೆಪ್ರಜ್ಞಾವಸ್ಥೆಯಲ್ಲಿ ಮನೆ ಸಮೀಪದ ಕಾಫಿ ತೋಟವೊಂದರಲ್ಲಿ ಪತ್ತೆಯಾಗಿದ್ದಾಳೆ.
ಮರಂದೋಡ ಗ್ರಾಮದ ಮನೆ ಸಮೀಪದ ರನ್ನ ಉತ್ತಪ್ಪ ಎಂಬವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಶುಕ್ರವಾರ ಮಧ್ಯಾಹÀ್ನ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದಾಳೆ ಎಂದು ವಿದ್ಯಾರ್ಥಿಯ ತಂದೆ ತಿಳಿಸಿದ್ದಾರೆ. ಬಳಿಕ ಆಕೆಯನ್ನು ಮನೆಗೆ ಕರೆತಂದು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯ ಪೋಷಕರು ಹಾಗೂ ಗ್ರಾಮಸ್ಥರು ಪತ್ತೆಗಾಗಿ ಹುಡುಕಾಟ ನಡೆಸಿದ್ದು, ಪತ್ತೆಯಾಗದ ಹಿನ್ನೆಲೆಯಲ್ಲಿ ಈ ಬಗ್ಗೆ ಬುಧವಾರ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಾಪತ್ತೆ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದರು. ತಪ್ಪಿದಲ್ಲಿ ಸೋಮವಾರ ಬೆಳಿಗ್ಗೆ ೧೦ ಗಂಟೆಯಿAದ ಪೊಲೀಸ್ ಠಾಣೆ ಮುಂಭಾಗದಲ್ಲಿ ವಿವಿಧ ಸಂಘ ಸಂಸ್ಥೆಗಳ ಹಾಗೂ ಗ್ರಾಮಸ್ಥರು ಒಟ್ಟು ಸೇರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದ್ದರು.
ಯುವತಿ ಪ್ರಕರಣಕ್ಕೆ ಸಂಬAಧಿಸಿ ನಾಪೋಕ್ಲುವಿಗೆ ಭೇಟಿ ನೀಡಿದ ಹಿಂದೂ ಜಾಗರಣ ವೇದಿಕೆ ತಂಡವು ಬಾಲಕಿಯ ಪೋಷಕರು ಮತ್ತು ಸ್ಥಳೀಯರು ಹಾಗೂ ನಾಪೋಕ್ಲು ಠಾಣಾಧಿಕಾರಿ ಹಾಗೂ ಡಿ.ವೈ.ಎಸ್.ಪಿ. ಜೊತೆ ಮಾತುಕತೆ ನಡೆಸಿ ಘಟನೆ ಹಾಗೂ ತನಿಖೆಯ ಪೂರ್ತಿ ಮಾಹಿತಿ ಪಡೆದುಕೊಂಡಿದೆ. ನಂತರ ಬಾಲಕಿಯ ಪೋಷಕರಿಗೆ ಧೈರ್ಯ ತುಂಬಿ ತಂಡವು ತೆರಳಿದೆ.
-ದುಗ್ಗಳ