ಮಡಿಕೇರಿ, ಅ. ೨೭: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮಡಿಕೇರಿ ಮತ್ತು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಬಿಡುಗಡೆ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಈಗಾಗಲೇ ಮತದಾರರ ಪಟ್ಟಿಗೆ ಸಂಬAಧಿಸಿದAತೆ ಮನೆ ಮನೆ ಸಮೀಕ್ಷೆ ಮಾಡಿ ಕರಡು ಮತದಾರರ ಪಟ್ಟಿಯನ್ನು ತಯಾರಿಸಲಾಗಿದೆ. ೨೦೨೪ ರ ಜನವರಿ ೦೫ ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತಿದ್ದು, ಅದರೊಳಗೆ ಈ ಕರಡು ಮತದಾರರ ಪಟ್ಟಿಯನ್ನು ಗಮನಿಸಿ ಸರಿಪಡಿಸಿ ಕೊಳ್ಳಲು ಅವಕಾಶ ಇದೆ. ೧೮ ವರ್ಷ ಪೂರ್ಣಗೊಂಡವರ ಹೆಸರು ಬಿಟ್ಟು ಹೋಗಿದ್ದಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶವಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ವೆಂಕಟ್ ರಾಜಾ ಅವರು ಕೋರಿದರು.
ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯ ೫೪೬ ಮತಗಟ್ಟೆಯಲ್ಲಿ ೨,೨೬,೩೯೨ ಪುರುಷ ಮತದಾರರು, ೨,೩೩,೫೦೩ ಮಹಿಳಾ ಮತದಾರರು ಹಾಗೂ ೨೧ ಇತರ ಮತದಾರರು, ಒಟ್ಟು ೪,೫೯,೯೧೬ ಮತದಾರರು ಇದ್ದಾರೆ.
ವಿಧಾನಸಭಾ ಕ್ಷೇತ್ರವಾರು ಗಮನಿಸಿದಾಗ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ೨೭೩ ಮತಗಟ್ಟೆಯಲ್ಲಿ ೧,೧೪,೨೯೪ ಪುರುಷ ಮತದಾರರು, ೧,೧೯,೪೬೪ ಮಹಿಳಾ ಮತದಾರರು ಹಾಗೂ ೧೦ ಇತರ ಮತದಾರರು ಒಟ್ಟು ೨,೩೩,೭೬೮ ಮತದಾರರು ಇದ್ದಾರೆ.
(ಮೊದಲ ಪುಟದಿಂದ) ಹಾಗೆಯೇ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ೨೭೩ ಮತಗಟ್ಟೆಯಲ್ಲಿ ೧,೧೨,೦೯೮ ಪುರುಷ ಮತದಾರರು, ೧,೧೪,೦೩೯ ಮಹಿಳಾ ಮತದಾರರು, ೧೧ ಇತರ ಮತದಾರರು ಒಟ್ಟು ೨,೨೬,೧೪೮ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು. ಕಳೆದ ವಿಧಾನಸಭಾ ಚುನಾವಣೆಗೆ ಹೋಲಿಸಿದೆ ಮತದಾರರ ಸಂಖ್ಯೆ ಹೆಚ್ಚಾಗಿದೆ ಎಂದು ಇದೇ ಸಂದರ್ಭ ದಲ್ಲಿ ಜಿಲ್ಲಾಧಿಕಾರಿ ತಿಳಿಸಿ ದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಅವರು ಇದ್ದರು. ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಅವರನ್ನು ಕೊಡಗು ಜಿಲ್ಲೆಗೆ ಮತದಾರರ ಪಟ್ಟಿ ವೀಕ್ಷಕರಾಗಿ ನೇಮಕ ಮಾಡಲಾಗಿದೆ.
ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭೆ
ಕರಡು ಮತದಾರರ ಪಟ್ಟಿ ಪ್ರಕಟ ಸಂಬAಧಿಸಿದAತೆ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕರಡು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಪ್ರಮುಖರಿಗೆ ನೀಡಿದರು.
ಕರಡು ಮತದಾರರ ಪಟ್ಟಿಯಲ್ಲಿ ಆಕ್ಷೇಪಣೆಗಳು ಇದ್ದಲ್ಲಿ ಮಾಹಿತಿ ನೀಡಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ಸ್ಥಳಾಂತರ ಮತ್ತಿತರ ಸಂಬAಧಿಸಿದAತೆ ಮೊಬೈಲ್ ಅಪ್ಲಿಕೇಷನ್‌ನಲ್ಲಿ ಮತದಾರರ ಸಹಾಯವಾಣಿ (ವೋಟರ್ ಹೆಲ್ಪ್ಲೈನ್)ನಲ್ಲಿ ನೇರವಾಗಿ ಸಲ್ಲಿಸಬಹುದಾಗಿದೆ. ಇಲ್ಲದಿದ್ದಲ್ಲಿ ತಹಶೀಲ್ದಾರರ ಕಚೇರಿಯ ಚುನಾವಣಾ ಶಾಖೆಗೆ ಭೇಟಿ ನೀಡಿ ಸರಿಪಡಿಸಿಕೊಳ್ಳ ಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಆಧಾರ್ ಲಿಂಕ್ ಮಾಡಲಾಗಿದ್ದು, ಯಾವು ದಾದರೂ ಒಂದು ಮತಗಟ್ಟೆಯಲ್ಲಿ ಮಾತ್ರ ಹೆಸರು ಇರಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಹಾಗೆಯೇ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆ ಬರಲಿದ್ದು, ಅರ್ಹರೆಲ್ಲರೂ ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಅಗತ್ಯ ಸಹಕಾರ ನೀಡುವಂತೆ ರಾಜಕೀಯ ಪಕ್ಷಗಳ ಪ್ರಮುಖರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರÀ ತೆನ್ನಿರಾ ಮೈನಾ ಅವರು ಕೊಡಗು ಜಿಲ್ಲೆಯ ಹಾಡಿಯ ಜನರು ಇನ್ನೂ ಸಹ ಆಧಾರ್ ಕಾರ್ಡ್ ಪಡೆದುಕೊಂಡಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಕೊಡಿಸಬೇಕಿದೆ ಎಂದು ಮನವಿ ಮಾಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಆಧಾರ್ ಪಡೆಯದಿರುವ ಆದಿವಾಸಿ ಕುಟುಂಬಗಳಿಗೆ ಆಧಾರ್ ಕಾರ್ಡ್ ಪಡೆಯುವಂತಾಗಲು ‘ಆಧಾರ್ ನೋಂದಣಿ ವಿಶೇಷ ಅಭಿಯಾನ’ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಕರಡು ಮತದಾರರ ಪಟ್ಟಿ ಸಂಬAಧಿಸಿದAತೆ ತಿದ್ದುಪಡಿ ಮತ್ತಿತರ ಸಂಬAಧ ಈಗಲೇ ಸರಿಪಡಿಸಿ ಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ವೋಟರ್ ಹೆಲ್ಪ್ಲೈನ್‌ನಲ್ಲಿ ಗಮನಿಸಬಹುದು ಎಂದರು.
ಭಾರತೀಯ ಜನತಾ ಪಕ್ಷದ ಮುಖಂಡರಾದ ಕೆ.ಪಿ. ಅಪ್ಪಣ್ಣ ಅವರು ಕರಡು ಮತದಾರರ ಪಟ್ಟಿ ಹಾಗೂ ಶಿಕ್ಷಕರ ಮತ್ತು ಪದವೀಧರರ ಚುನಾವಣೆ ಸಂಬAಧ ಅಗತ್ಯ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಇದ್ದರು.