ಮಡಿಕೇರಿ, ಅ. ೨೭ : ಕುಶಾಲನಗರ ವ್ಯಾಪ್ತಿಯ ಹಾರಂಗಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಸುಂದರನಗರದಿAದ ಚಿಕ್ಕತ್ತೂರು ಗ್ರಾಮದವರೆಗೆ ನಿರ್ವಹಿಸಬೇಕಿರು ವುದರಿಂದ ೨೨೦/೧೧ ಕೆವಿ ವಿದ್ಯುತ್ ಉಪ ಕೇಂದ್ರದಿAದ ಹೊರಹೋಗುವ ಎಸ್‌ಎಲ್‌ಎನ್ ಫೀಡರ್‌ನಲ್ಲಿ ತಾ. ೩೦ ರಂದು ಬೆಳಿಗ್ಗೆ ೧೦ ಗಂಟೆಯಿAದ ೫ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಕೂಡ್ಲೂರು, ಕೂಡುಮಂಗಳೂರು, ಸುಂದರನಗರ, ಚಿಕ್ಕತ್ತೂರು, ದೊಡ್ಡತ್ತೂರು, ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.