ಚೆಯ್ಯಂಡಾಣೆ, ಅ. ೨೮: ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‘ನೈತಿಕ ಪೊಲೀಸ್ ಗಿರಿಯ’ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿಸಲಾಗುತ್ತಿದೆ. ಇದರಿಂದ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುತ್ತಿದ್ದು, ಸಮಾಜದ ಸೌಹಾರ್ದವನ್ನು ಕದಡುವುದರ ವಿರುದ್ಧ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.