ಕೂಡಿಗೆ, ಅ. ೨೮: ಕೂಡಿಗೆ ಗ್ರಾಮ ಪಂಚಾಯಿತಿ ಮಾಸಿಕ ಸಭೆ ಅಧ್ಯಕ್ಷ ಕೆ.ಟಿ. ಗಿರೀಶ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಚರ್ಚೆಗಳನ್ನು ನಡೆದವು, ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ನಿವೇಶನ ರಹಿತರಿಗೆ ಕಾಯ್ದಿರಿಸಲಾಗಿರುವ ವಸತಿ ಜಾಗದಲ್ಲಿ ನಿವೇಶನಗಳ ನಿರ್ಮಾಣಕ್ಕೆ ಅನುಕೂಲ ಕಲ್ಪಿಸುವಂತೆ ತುರ್ತಾಗಿ ಕ್ರಮ ವಹಿಸುವಂತೆ ಸಭೆಯಲ್ಲಿ ಹಾಜರಿದ್ದ ಟಿ.ಪಿ. ಹಮೀದ್, ರವಿ, ಅರುಣ್ ರಾವ್ ಒತ್ತಾಯ ಮಾಡಿದರು. ನಂತರ ಮುಂದಿನ ದಿನಗಳಲ್ಲಿ ಸ್ವಚ್ಛತೆ ಪೂರಕವಾಗಿ ಮತ್ತು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್ಗಳ ಶುದ್ಧೀಕರಣಗೊಳಿಸುವ ಮತ್ತು ಶುಚಿತ್ವಕ್ಕೆ ಹೆಚ್ಚಿನ ಅಧ್ಯತೆ ನೀಡುವ ಬಗ್ಗೆ ಚರ್ಚಿಸಲಾಯಿತು. ಈಗಾಗಲೇ ಹರಾಜು ಪ್ರಕ್ರಿಯೆಯಲ್ಲಿ ನಿಗದಿ ಮಾಡಿರುವ ಹಣವನ್ನು ಕೂಡಿಗೆ, ಅ. ೨೮: ಕೂಡಿಗೆ ಗ್ರಾಮ ಪಂಚಾಯಿತಿ ಮಾಸಿಕ ಸಭೆ ಅಧ್ಯಕ್ಷ ಕೆ.ಟಿ. ಗಿರೀಶ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಚರ್ಚೆಗಳನ್ನು ನಡೆದವು, ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ನಿವೇಶನ ರಹಿತರಿಗೆ ಕಾಯ್ದಿರಿಸಲಾಗಿರುವ ವಸತಿ ಜಾಗದಲ್ಲಿ ನಿವೇಶನಗಳ ನಿರ್ಮಾಣಕ್ಕೆ ಅನುಕೂಲ ಕಲ್ಪಿಸುವಂತೆ ತುರ್ತಾಗಿ ಕ್ರಮ ವಹಿಸುವಂತೆ ಸಭೆಯಲ್ಲಿ ಹಾಜರಿದ್ದ ಟಿ.ಪಿ. ಹಮೀದ್, ರವಿ, ಅರುಣ್ ರಾವ್ ಒತ್ತಾಯ ಮಾಡಿದರು. ನಂತರ ಮುಂದಿನ ದಿನಗಳಲ್ಲಿ ಸ್ವಚ್ಛತೆ ಪೂರಕವಾಗಿ ಮತ್ತು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್ಗಳ ಶುದ್ಧೀಕರಣಗೊಳಿಸುವ ಮತ್ತು ಶುಚಿತ್ವಕ್ಕೆ ಹೆಚ್ಚಿನ ಅಧ್ಯತೆ ನೀಡುವ ಬಗ್ಗೆ ಚರ್ಚಿಸಲಾಯಿತು. ಈಗಾಗಲೇ ಹರಾಜು ಪ್ರಕ್ರಿಯೆಯಲ್ಲಿ ನಿಗದಿ ಮಾಡಿರುವ ಹಣವನ್ನು ಯೋಜನೆಗಳ ತಯಾರಿಸುವ ಚರ್ಚೆಗಳು ನಡೆದವು, ಹಾಜರಿದ್ದ ಸದಸ್ಯರು ತಮ್ಮ ತಮ್ಮ ವಾರ್ಡ್ನ ಅಭಿವೃದ್ಧಿಯ ಯೋಜನೆಗೆ ಸಂಬAಧಿಸಿದ ಅಭಿಪ್ರಾಯ ವ್ಯಕ್ತಪಡಿಸಿದರು.
ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಸರಕಾರ ಹೊಸ ಯೋಜನೆಗಳ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು. ಗ್ರಾಮ ಪಂಚಾಯಿತಿ ವತಿಯಿಂದ ಕೈಗೊಳ್ಳಲಾಗುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ವಿವರ ನೀಡಿದರು. ಸಭೆಗೆ ಬಂದ ಸಾರ್ವಜನಿಕರ ಅರ್ಜಿಗಳ ಬಗ್ಗೆ ಚರ್ಚೆಗಳು ನಡೆದವು.
ಅಧ್ಯಕ್ಷತೆಯನ್ನು ವಹಿಸಿದ್ದ ಕೆ.ಟಿ. ಗಿರೀಶ್ ಮಾತನಾಡಿ, ಸದಸ್ಯರ ಸಹಕಾರದೊಂದಿಗೆ ಎಲ್ಲಾ ವಾರ್ಡ್ಗಳಲ್ಲಿ ಮೂಲಭೂತ ಸೌಕರ್ಯಗಳ ಒದಗಿಸುವ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ತಮ್ಮೇಲ್ಲರ ಸಹಕಾರ ಮುಖ್ಯ ಮುಂದಿನ ದಿನಗಳಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಲಹೆಯನ್ನು ಪಡೆದು ನಿವೇಶನ ಹಂಚಿಕೆ ಬಗ್ಗೆ ಕ್ರಮವನ್ನು ವಹಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ವಿ. ಜಯಶ್ರೀ, ಸದಸ್ಯರಾದ. ಟಿ.ಪಿ. ಹಮೀದ್, ಎಸ್.ಎನ್. ಅರುಣ್ ರಾವ್, ಅನಂತ, ಮಂಗಳ, ಮೋಹಿನಿ, ವಾಣಿ, ರತ್ನಮ್ಮ, ಹೆಚ್. ಎಸ್. ರವಿ, ಪಲ್ಲವಿ, ಹೆಚ್.ಆರ್. ಚಂದ್ರು, ಎಂ.ಎಸ್. ಜಯಶೀಲಾ, ಸೇರಿದಂತೆ ಅಭಿವೃದ್ಧಿ ಅಧಿಕಾರಿ ಮಂಜಳಾ, ಗ್ರೇಡ್ ೧, ಕಾರ್ಯದರ್ಶಿ ಅಂಜನಾದೇವಿ, ಕಾರ್ಯದರ್ಶಿ ಪುನೀತ್ ಹಾಜರಿದ್ದರು.