ಮಡಿಕೇರಿ, ಅ.೨೮: ಕೊಡಗು ಜಿಲ್ಲಾಡಳಿತ ವತಿಯಿಂದ ೬೮ ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನವೆಂಬರ್ ೧ ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಡಾ. ಮಂಥರ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್. ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷರಾದ ಎನ್.ಪಿ. ಅನಿತಾ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್, ಮತ್ತಿತರರು ಪಾಲ್ಗೊಳ್ಳಲಿದ್ದಾರೆ.