ಕೊಚ್ಚಿ, ಅ. ೨೯: ಕೇರಳದ ಸಭಾ ಭವನ ಒಂದರಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿ ೩೬ ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಕೇರಳದ ಕಲಮಸ್ಸೆರಿಯ ಝಮ್ರಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ೩ ದಿನಗಳ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು. ಇಂದು ಕೊನೆಯ ದಿನವಾಗಿತ್ತು. ಬೆಳಿಗ್ಗೆ ೯ ಗಂಟೆಗೆ ಪ್ರಾರ್ಥನಾ ಸಭೆ ಆರಂಭಗೊಳ್ಳುತ್ತಿದ್ದAತೆಯೇ, ಈ ಸ್ಫೋಟ ಸಂಭವಿಸಿದೆ. ಘಟನೆ ಸಂದರ್ಭ ೨ ಸಾವಿರಕ್ಕೂ ಹೆಚ್ಚು ಕ್ರೆöÊಸ್ತ ಸಮುದಾಯದವರು ಸ್ಥಳದಲ್ಲಿದ್ದರು.
ಘಟನೆಯಲ್ಲಿ ಗಾಯಗೊಂಡಿರುವ ೩೬ ಮಂದಿಯ ಪೈಕಿ, ಹಲವರ ಸ್ಥಿತಿ ಗಂಭೀರವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕದ ದಳದ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಕನ್ವೆನ್ಸನ್ ಸೆಂಟರ್ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ.
ಸ್ಥಳದಲ್ಲಿ ಹಲವು ಬಾರಿ ಸ್ಫೋಟ ಸಂಭವಿಸಿದ್ದು, ಘಟನೆಗೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ೩ಐದನೇ ಪುಟಕ್ಕೆ
(ಮೊದಲ ಪುಟದಿಂದ)
ಕೃತ್ಯಕ್ಕೆ ಐ.ಇ.ಡಿ. ಬಳಕೆ
ಕೇರಳ ಪ್ರಾರ್ಥನಾ ಮಂದಿರದಲ್ಲಿ ಸಂಭವಿಸಿದ ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಲಾಗಿದೆ ಎಂಬ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿದೆ.
ಈ ಕುರಿತು ಕೇರಳದ ಡಿಜಿಪಿ ಡಾ.ಶೇಖ್ ದರ್ವೇಶ್ ಸಾಹೇಬ್ ಅವರು ಮಾಹಿತಿ ನೀಡಿದ್ದು, ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಸ್ಫೋಟಕ್ಕೆ ಐಇಡಿ ಬಳಸಿರುವುದಾಗಿ ತಿಳಿದು ಬಂದಿದೆ ಎಂದು ಹೇಳಿದ್ದಾರೆ.
ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ೩೬ ಮಂದಿ ಗಾಯಗೊಂಡಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ಎನ್ಐಎ ಕೊಚ್ಚಿ ಘಟಕ, ಕೇರಳ ಪೊಲೀಸರ ಸಮನ್ವಯ ದೊಂದಿಗೆ ತನಿಖೆ ಆರಂಭಗೊAಡಿದ್ದು, ಎರಡು ಐಇಡಿಗಳನ್ನು ಎರಡು ಚೀಲಗಳಲ್ಲಿ ಅಥವಾ ಪೆಟ್ಟಿಗೆಗಳಲ್ಲಿ ಮುಚ್ಚಿಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಪ್ರಾಥಮಿಕ ತನಿಖೆಯಲ್ಲಿ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಬಳಸಿ ಕೃತ್ಯ ನಡೆಸಿರುವುದು ತಿಳಿದು ಬಂದಿದೆ. ಕೆಲವೊಂದು ಅವಶೇಷಗಳು ದೊರಕಿದ್ದು, ಪರಿಶೀಲನೆ ನಡೆಸುತ್ತಿ ದ್ದೇವೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬಾಂಬ್ ನಿಷ್ಕಿçಯದಳ, ವಿಶೇಷ ತನಿಖಾ ತಂಡ ಹಾಗೂ ಎನ್ಐಎ ಅಧಿಕಾರಿಗಳ ತಂಡ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದೆ ಎಂದು ವರದಿಯಾಗಿದೆ.
ಎನ್.ಐ.ಎ. ತನಿಖೆ ಆರಂಭ
ಸರಣಿ ಸ್ಫೋಟಕ್ಕೆ ಸಂಬAಧಿಸಿ ದಂತೆ ರಾಷ್ಟಿçÃಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಎರಡು ಬಾಕ್ಸ್ಗಳಲ್ಲಿ ಅಥವಾ ಬ್ಯಾಗ್ಗಳಲ್ಲಿ ಮುಚ್ಚಿಟ್ಟಿದ್ದ ಎರಡು ಐಇಡಿಗಳು ಸ್ಫೋಟಗೊಂಡಿವೆ ಎಂದು ತಿಳಿದುಬಂದಿದೆ.
ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಕನಿಷ್ಟ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಾರ್ಥನಾ ಸಭೆಯಲ್ಲಿ ಸುಮಾರು ೨,೨೦೦-೨,೫೦೦ ಜನ ಭಾಗವಹಿಸಿದ್ದರು ಎನ್ನಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳು ಜಮ್ರಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ.
ಸರಣಿ ಸ್ಫೋಟದ ಬಗ್ಗೆ ಮೊದಲು ಕಲಮಸ್ಸೆರಿಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ, ನಂತರ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸಲಾಗಿದೆ.
ಶಂಕಿತ ಶರಣಾಗತಿ
ಸರಣಿ ಸ್ಫೋಟ ಸಂಭವಿಸಿದ ಬಳಿಕ ಬಾಂಬ್ ಇಟ್ಟಿರುವುದಾಗಿ ಹೊಣೆಹೊತ್ತು ಡೊಮೆನಿಕ್ ಮಾರ್ಟಿನ್ ಎಂಬ ವ್ಯಕ್ತಿ ತ್ರಿಶೂರ್ನ ಕೊಡಕ್ಕರ ಪೊಲೀಸರಿಗೆ ಶರ ಣಾಗಿದ್ದಾನೆ. ಪೊಲೀಸರು ವ್ಯಕ್ತಿಯನ್ನು ಬಂಧಿಸಿ ಕೊಚ್ಚಿಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸುತ್ತಿದ್ದು, ಆತನ ಕುರಿತಾಗಿ ಯಾವುದೇ ಹೆಚ್ಚಿನ ವಿವರಗಳನ್ನು ಬಿಟ್ಟುಕೊಟ್ಟಿಲ್ಲ. ವ್ಯಕ್ತಿ ಮಾನಸಿಕ ಅಸಮತೋಲನ ಹೊಂದಿದ್ದಾನೆಯೇ ಎನ್ನುವ ಕುರಿತು ಉನ್ನತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.