ಹಮಾಸ್ ಉಗ್ರ ಸಂಘಟನೆ ನಾಯಕ ಭಾಗಿ-ಬಿಜೆಪಿ ಆರೋಪ
ಕೊಚ್ಚಿ, ಅ. ೨೯: ಗಾಜಾಪಟ್ಟಿ ಮೇಲಿನ ಇಸ್ರೇಲ್ ದಾಳಿ ಖಂಡಿಸಿ ಕೇರಳದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಮಾಸ್ ಉಗ್ರ ಸಂಘಟನೆಯ ನಾಯಕ ವರ್ಚುವಲ್ ಆಗಿ ಪಾಲ್ಗೊಂಡಿದ್ದರು ಎಂದು ಕೇರಳ ಬಿಜೆಪಿ ಗಂಭೀರ ಆರೋಪ ಮಾಡಿದೆ. ಕೇರಳದ ಮಲಪ್ಪುರಂನಲ್ಲಿ ಶುಕ್ರವಾರ ಪ್ಯಾಲೆಸ್ತೆöÊನ್ ಪರವಾಗಿ ಜಮಾತೆ ಇಸ್ಲಾಮಿಯ ಯುವ ಘಟಕವಾದ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಮಾಸ್ ನಾಯಕ ಖಲೀದ್ ಮಶಾಲ್ ವರ್ಚುವಲ್ ಮೂಲಕ ಪಾಲ್ಗೊಂಡಿದ್ದ ಬಗ್ಗೆ ಕೇರಳ ಬಿಜೆಪಿ ಘಟಕ ಆಘಾತ ವ್ಯಕ್ತಪಡಿಸಿದೆ. ಉಗ್ರಗಾಮಿ ಸಂಘಟನೆಯೊAದಿಗೆ ಇಸ್ರೇಲ್ ನಡೆಸುತ್ತಿರುವ ಯುದ್ಧದ ವಿರುದ್ಧ ರಾಜ್ಯದಲ್ಲಿ ಇಸ್ಲಾಮಿಸ್ಟ್ ಗುಂಪು ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಇದರಲ್ಲಿ ಹಮಾಸ್ನ ಖಲೀದ್ ಮಶಾಲ್ ವರ್ಚುವಲ್ ಆಗಿ ಭಾಗವಹಿಸಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಆರೋಪಿಸಿದ್ದಾರೆ. ಮಶಾಲ್ ಭಾಗವಹಿಸಿದ್ದ ಪೋಸ್ಟರ್ ಅನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊAಡಿರುವ ಅವರು, ಸಾಂಪ್ರದಾಯಿಕವಾಗಿ ಜಾತ್ಯತೀತ ನೆಲೆಯಾದ ಕೇರಳದಲ್ಲಿ ಪರಿಸ್ಥಿತಿ ಈ ಮಟ್ಟಕ್ಕೆ ತಲುಪಿದೆ ಎಂದು ಆಘಾತ ಹೊರಹಾಕಿದ್ದಾರೆ. ಅಲ್ಲದೆ ಹಮಾಸ್ನ ಭಯೋತ್ಪಾದಕ ನಾಯಕ ಸ್ವತಃ ರಾಜ್ಯದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಇದು ವರ್ಚುವಲ್ ಭಾಗವಹಿಸುವಿಕೆಯಾಗಿದೆ. ಏಕೆಂದರೆ, ಅವರಿಗೆ ವೀಸಾ ಪಡೆಯಲು ಆಗಿಲ್ಲ. ಸಂಘಟಕರ ಉದ್ದೇಶಗಳು ಸ್ಪಷ್ಟವಾಗಿವೆ ಎಂದು ಸುರೇಂದ್ರನ್ ಬರೆದುಕೊಂಡಿದ್ದಾರೆ.
‘ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ’
ಮೈಸೂರು, ಅ. ೨೯: ಕರ್ನಾಟಕ ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಆ ಬಗ್ಗೆ ಚರ್ಚೆ ಅಪ್ರಸ್ತುತ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು. ಭಾನುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ಸದ್ಯ ಸಿದ್ದರಾಮಯ್ಯ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮನೆಯಲ್ಲಿನ ಔತಣಕೂಟದಲ್ಲಿ ಮುದ್ದೆ ಬಿಟ್ಟು ಮತ್ಯಾವ ಹುದ್ದೆಗಳ ಬಗ್ಗೆಯೂ ಚರ್ಚೆ ಆಗಿಲ್ಲ. ಡಿಸಿಎಂ, ಸಂಪುಟ ವಿಸ್ತರಣೆ ಕುರಿತು ಮಾತನಾಡುವವರನ್ನೇ ಕೇಳಬೇಕು ಎಂದರು.
ರೂ. ೧೦ ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ-ರಾಹುಲ್
ರಾಯಪುರ, ಅ. ೨೯: ಛತ್ತೀಸಗಢ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಶ್ವಾಸನೆ ನೀಡುವುದನ್ನು ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ರೂ. ೧೦ ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ರಾಜ್ನಂದಗಾAವ್ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ರಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಭೂರಹಿತ ಗ್ರಾಮೀಣ ಕಾರ್ಮಿಕರಿಗೆ ವರ್ಷಕ್ಕೆ ರೂ. ೧೦,೦೦೦ ಸಹಾಯಧನ ನೀಡುವುದಾಗಿ ಭರವಸೆ ನೀಡಿದ್ದಾರೆ.
ಬಿಎಸ್ಎಫ್ ಯೋಧ ಆತ್ಮಹತ್ಯೆಗೆ ಶರಣು
ಕಂಕೇರ್, ಅ. ೨೯: ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆಯ(ಬಿಎಸ್ಎಫ್) ೩೪ ವರ್ಷದ ಯೋಧನೊಬ್ಬ ತನ್ನ ಸರ್ವಿಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ರಾಜಧಾನಿ ರಾಯ್ಪುರದಿಂದ ಸುಮಾರು ೨೦೦ ಕಿ.ಮೀ. ದೂರದಲ್ಲಿರುವ ರೌಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾರಂಗಿಪಾಲ್ ಗ್ರಾಮದ ಬಿಎಸ್ಎಫ್ ಶಿಬಿರದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಬಿಎಸ್ಎಫ್ನ ೧೬೨ನೇ ಬೆಟಾಲಿಯನ್ನ ಕಾನ್ಸ್ಟೇಬಲ್ ಬಾಲ್ಮಿಕಿ ಸಿನ್ಹಾ ಅವರು ರೈಫಲ್ನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿದ ಅವರ ಸಹೋದ್ಯೋಗಿಗಳು ಸ್ಥಳಕ್ಕೆ ಧಾವಿಸಿ ನೋಡಿದಾಗ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಮೃತ ಯೋಧ ರಾಯ್ಪುರ ಜಿಲ್ಲೆಯ ಮಂದಿರ್ ಹಸೌದ್ನ ರಿವಾ ಗ್ರಾಮದವರು. ಪ್ರಾಥಮಿಕ ಮಾಹಿತಿ ಪ್ರಕಾರ ಅವರ ಪತ್ನಿ ಇತ್ತೀಚೆಗಷ್ಟೇ ಮೃತಪಟ್ಟಿದ್ದರು. ಹೀಗಾಗಿ ಎರಡು ತಿಂಗಳ ರಜೆಯ ನಂತರ ಅವರು ಕರ್ತವ್ಯಕ್ಕೆ ಮರಳಿದ್ದರು. ಘಟನಾ ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಕಂಡುಬAದಿಲ್ಲ ಮತ್ತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಅಂರ್ರಾಷ್ಟಿçÃಯ ಗಡಿಯಲ್ಲಿ ಚೀನಾ ನಿರ್ಮಿತ ೨ ಡ್ರೋನ್ ಪತ್ತೆ
ಚಂಡೀಗಢ, ಅ. ೨೯: ಪಂಜಾಬ್ನ ಅಮೃತಸರ ಮತ್ತು ತರನ್ ತಾರನ್ ಜಿಲ್ಲೆಯ ಅಂರ್ರಾಷ್ಟಿçÃಯ ಗಡಿ ಸಮೀಪ ನಡೆಸಿದ ಪ್ರತ್ಯೇಕ ಶೋಧ ಕಾರ್ಯಾಚರಣೆಯಲ್ಲಿ ಎರಡು ಡ್ರೋನ್ಗಳು ಪತ್ತೆಯಾಗಿವೆ ಎಂದು ಗಡಿ ಭದ್ರತಾ ಪಡೆ (ಬಿಎಸ್ಎಫ್) ಅಧಿಕಾರಿಗಳು ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಭಾನುವಾರ ಅಮೃತಸರದ ದಾವೋಕೆ ಗ್ರಾಮದ ಸಮೀಪ ಶೋಧ ನಡೆಸಲಾಗಿತ್ತು. ಈ ವೇಳೆ ಚೀನಾ ನಿರ್ಮಿತ ಡೋನ್ ಪತ್ತೆಯಾಗಿದೆ. ಶನಿವಾರ ತರನ್ ತಾರನ್ ಜಿಲ್ಲೆಯ ಧೋಲನ್ ಗ್ರಾಮದಲ್ಲಿ ನಡೆಸಿದ ಕಾರ್ಯಾಚರಣೆ ವೇಳೆಯೂ ಚೀನಾ ನಿರ್ಮಿತ ಡ್ರೋನ್ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಇದರೊಂದಿಗೆ ಡ್ರೋನ್ ಮೂಲಕ ಮಾದಕವಸ್ತುಗಳನ್ನು ಸಾಗಿಸುವ ಪ್ರಯತ್ನವನ್ನು ಬಿಎಸ್ಎಫ್ ವಿಫಲಗೊಳಿಸಿದೆ ಎಂದು ತಿಳಿಸಿದ್ದಾರೆ.
ಕೆರೆಗೆ ಬಿದ್ದ ಕಾರು-ಒಂದೇ ಕುಟುಂಬದ ಮೂವರು ಸಾವು
ತುಮಕೂರು, ಅ. ೨೯: ಭಾನುವಾರ ಬೆಳಿಗ್ಗೆ ಕಾರೊಂದು ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿದ್ದ ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಟುಂಬ ಸಮೇತರಾಗಿ ಮುಂಜಾನೆ ಧರ್ಮಸ್ಥಳಕ್ಕೆಂದು ತೆರಳುತ್ತಿದ್ದ ವೇಳೆ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಬಳಿಯಿರುವ ರಾಮಲಿಂಗಪುರ ಕೆರೆಯಲ್ಲಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನ ದೊಡ್ಡಣ್ಣ, ಸಣ್ಣಮ್ಮ, ಯಮುನಾ ಎಂದು ಗುರುತಿಸಲಾಗಿದೆ. ಪ್ರವೀಣ್ ಎಂಬುವವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರೂ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಸಮೀಪದ ವೀರಾಪುರ ಗ್ರಾಮದವರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದೆ. ಈ ಸಂಬAಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.
‘ವನ್ಯಜೀವಿ ವಸ್ತುಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು’
ಬೀದರ್, ಅ. ೨೯: ವನ್ಯಜೀವಿಗಳಿಗೆ ಸಂಬAಧಿಸಿದ ವಸ್ತುಗಳನ್ನು ಇಟ್ಟುಕೊಂಡವರು ಎರಡು ತಿಂಗಳಲ್ಲಿ ವಾಪಸ್ ಕೊಡಲೇಬೇಕು. ಇಂತಹದ್ದೊAದು ಪ್ರಸ್ತಾವನೆ ನಮ್ಮ ಮುಂದಿದ್ದು, ತಾ. ೩೦ ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಿ ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು. ನಗರದಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾರ ಬಳಿಯಾದರೂ ವನ್ಯಜೀವಿಗಳಿಗೆ ಸಂಬAಧಿಸಿದ ವಸ್ತುಗಳಿದ್ದರೆ ವಾಪಸ್ ಕೊಡಬೇಕಾಗುತ್ತದೆ. ಯಾರು ಕೂಡ ಅವರ ಬಳಿ ಇಟ್ಟುಕೊಳ್ಳಲು ಬರುವುದಿಲ್ಲ. ಈ ಬಗ್ಗೆ ಸಿ.ಎಂ. ಜೊತೆಗೂ ಚರ್ಚಿಸಲಾಗುವುದು ಎಂದರು.
ಮೇರಾ ಯುವ ಭಾರತ್ ವೇದಿಕೆ ಘೋಷಣೆ
ನವದೆಹಲಿ, ಅ. ೨೯: ರಾಷ್ಟç ನಿರ್ಮಾಣದ ವಿವಿಧ ಕಾರ್ಯಗಳಲ್ಲಿ ಮಹತ್ವದ ಪಾತ್ರ ವಹಿಸುವಂತೆ ಯುವಜನರಿಗೆ ಅವಕಾಶ ಕಲ್ಪಿಸುವ ಸಲುವಾಗಿ ತಾ. ೩೧ ರಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ರಾಷ್ಟçವ್ಯಾಪಿ ‘ಮೇರಾ ಯುವ ಭಾರತ್' ವೇದಿಕೆ ಪ್ರಾರಂಭಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಘೋಷಿಸಿದ್ದಾರೆ. `ಮನ್ ಕಿ ಬಾತ್' ಬಾನುಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೇರಾ ಯುವ ಭಾರತ್' ವೆಬ್ಸೈಟ್ ಸಹ ಪ್ರಾರಂಭಿಸಲಾಗುವುದು. ಯುವಕರು ಒಙಃhಚಿಡಿಚಿಣ.ಉov.iಟಿನಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು. ಮೈ ಭಾರತ್ ದೇಶದ ಯುವಕರಿಗೆ ರಾಷ್ಟç ನಿರ್ಮಾಣದ ವಿವಿಧ ಕಾರ್ಯಗಳಲ್ಲಿ ಸಕ್ರಿಯ ಪಾತ್ರ ವಹಿಸಲು ಅವಕಾಶ ಕಲ್ಪಿಸಲಿದೆ. ಇದು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವಲ್ಲಿ ದೇಶದ ಯುವ ಶಕ್ತಿಯನ್ನು ಸಂಯೋಜಿಸುವ ಒಂದು ಅನನ್ಯ ಪ್ರಯತ್ನ ಎಂದು ಪ್ರಧಾನಿ ಹೇಳಿದರು.