ಸೋಮವಾರಪೇಟೆ, ಅ. ೨೯: ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ರಾಷ್ಟಿçÃಯ ಹಬ್ಬಗಳ ಸಮಿತಿ ವತಿಯಿಂದ ೬೮ನೇ ಕನ್ನಡ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಎಸ್.ಎನ್. ನರಗುಂದ ವಹಿಸಿದ್ದರು. ಸಭೆಯಲ್ಲಿ ಈ ಬಾರಿ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ ೫೦ ವರ್ಷಗಳು ತುಂಬುತ್ತಿರುವುದರಿAದ ಅದ್ದೂರಿಯಾಗಿ ರಾಜ್ಯೋತ್ಸವ ಆಚರಿಸುವಂತೆ ಸಭೆ ತೀರ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನ. ೧ ರಂದು ಬೆಳಿಗ್ಗೆ ೯.೩೦ಕ್ಕೆ ಆಚರಿಸಲಾಗುವುದು. ಸಭೆಯ ಅಧ್ಯಕ್ಷತೆಯನ್ನು ಸ್ಥಳೀಯ ಶಾಸಕ ಡಾ. ಮಂಥರ್‌ಗೌಡ ವಹಿಸಲಿದ್ದಾರೆ. ಧ್ವಜಾರೋಹಣವನ್ನು ತಹಶೀಲ್ದಾರ್ ನೇರವೇರಿಸಲಿರುವರು. ಬೆಟ್ಟದಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಹಾಗೂ ಸಾಹಿತಿ ಕೆ.ಎನ್. ಸತೀಶ್ ಕಾಜೂರು, ನ.ಲ. ವಿಜಯ ಅವರುಗಳನ್ನು ಸನ್ಮಾನಿಸಲಾಗುವುದು.

ಕಾರ್ಯಕ್ರಮದ ಪ್ರಯುಕ್ತ ಇಲ್ಲಿನ ಜೇಸಿ ವೇದಿಕೆ ಎದುರಿನಿಂದ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ರಚಿತ ಸ್ಥಬ್ಧ ಚಿತ್ರಗಳ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ನಡೆಯಲಿದೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದು ಎಂದು ತಹಶೀಲ್ದಾರ್ ತಿಳಿಸಿದರು.