ಮಡಿಕೇರಿ, ಅ. ೨೯: "ಪತ್ತಾಲೋದಿ" ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿ ಕೋಟೆ ಮತ್ತು ನಾಲ್ನಾಡ್ ಅರಮನೆ ಆವರಣದಲ್ಲಿ ಕುತಂತ್ರಕ್ಕೆÀ ಸಿಲುಕಿ ಜೀವ ಕಳೆದುಕೊಂಡ ಹಿರಿಯ ಕೊಡವರಿಗೆ ಮೀದಿ ಸಮರ್ಪಿಸುವ ಕಾರ್ಯವನ್ನು ನೆರವೇರಿಸಿತು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸಿ.ಎನ್.ಸಿ. ಅಧ್ಯಕ್ಷ ಎನ್.ಯು. ನಾಚಪ್ಪ ಅವರು ಮೌನ ಪ್ರಾರ್ಥನೆಯ ಮೂಲಕ ಹಿರಿಯರನ್ನು ಸ್ಮರಿಸಿದರು. ಅರಮನೆಯ ಪಿತೂರಿಯಲ್ಲಿ ಕೊಡವ ಜನಾಂಗೀಯ ಬುಡಕಟ್ಟು ಜನಾಂಗದ ಹತ್ಯೆಗಳು ಎರಡು ಶತಮಾನಗಳಿಗೂ ಹೆಚ್ಚು ಕಾಲ ನಿರಂತರವಾಗಿ ನಡೆದಿದೆ. ಷಡ್ಯಂತ್ರದಿAದ ಪ್ರಾಣ ಕಳೆದುಕೊಂಡ ಅಮಾಯಕ ಹಿರಿಯರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.

ಸಿ.ಎನ್.ಸಿ. ಪ್ರಮುಖರಾದ ಕಲಿಯಂಡ ಪ್ರಕಾಶ್, ಬಾಚಮಂಡ ರಾಜ ಪೂವಣ್ಣ, ಕಾಂಡೇರ ಸುರೇಶ್, ಪುಲ್ಲೇರ ಕಾಳಪ್ಪ, ಅರೆಯಡ ಗಿರೀಶ್, ಚಂಬಾAಡ ಜನತ್, ಅಪ್ಪಾರಂಡ ಪ್ರಸಾದ್, ಅಪ್ಪಾರಂಡ ವಿಜು, ಮಣವಟ್ಟೀರ ಚಿಣ್ಣಪ್ಪ, ಪುಟ್ಟಿಚಂಡ ದೇವಯ್ಯ, ಪುದಿಯೊಕ್ಕಡ ಕಾಶಿ ಮತ್ತಿತರರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವ ಲ್ಯಾಂಡ್ ಪರ ಪ್ರಾರ್ಥಿಸಿದರು.