ಗೋಣಿಕೊಪ್ಪ ವರದಿ, ಅ. ೨೯: ಅಭಿವೃದ್ಧಿ ಗಾಗಿ ಸರಕಾರದಿಂದ ಬಿಡುಗಡೆಯಾಗಿರುವ ಅನುದಾನ ಹಿಂತಿರುಗದAತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಧನರಾಜ್ ಸೂಚನೆ ನೀಡಿದರು.

ಪೊನ್ನಂಪೇಟೆ ಸಾಮರ್ಥ್ಯ ಸೌಧದಲ್ಲಿ ಆಯೋಜಿಸಿದ್ದ ವೀರಾಜಪೇಟೆ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಅಭಿವೃದ್ಧಿ ದೃಷ್ಟಿಯಿಂದ ಎಲ್ಲ ಇಲಾಖೆಗಳ ಅಧಿಕಾರಿಗಳು ಸರ್ಕಾರದ ಅನುದಾನ ಬಳಕೆ ಮಾಡಲು ಮುಂದಾಗಬೇಕಿದೆ. ವರ್ಷದ ಕೊನೆಯಲ್ಲಿ ಕಾಮಗಾರಿ ನಡೆಯದೆ ಹಣ ಹಿಂತುರುಗದAತೆ ಎಚ್ಚರಿಕೆ ವಹಿಸಬೇಕು ಎಂದರು.

ತಾಲೂಕು ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಸತಿ ಯೋಜನೆ ಅನುಷ್ಠಾನಕ್ಕೆ ಕ್ರಮಕೈಗೊಳ್ಳಬೇಕಿದೆ. ಯೋಜನೆಯ ಕಂತುಗಳ ಹಣ ಬಿಡುಗಡೆಗೆ ಕೂಡ ಸೂಕ್ತ ಸಹಕರಿಸುವಂತೆ ತಿಳಿಸಿದರು. ವಸತಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ನೀತಿ ಸರಿಯಲ್ಲ ಎಂದರು.

ಮೀನು ಕೃಷಿ ಅಭಿವೃದ್ಧಿಗೆ ಸುಮಾರು ೧೨ ಹೆಕ್ಟೇರ್ ಪ್ರದೇಶದಲ್ಲಿ ಮೀನು ಸಾಕಣೆ ವಿಸ್ತರಿಸಲಾಗುವುದು ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು. ತೋಟಗಾರಿಕೆ ಇಲಾಖೆಯಲ್ಲಿ ನರೇಗಾ ಯೋಜನೆಯನ್ನು ಹೆಚ್ಚು ಅನುಷ್ಠಾನಗೊಳಿಸಲು ಸೂಚಿಸಲಾಯಿತು. ಮಾನವ ದಿನಗಳ ಸಂಖ್ಯೆ ಹೆಚ್ಚಿಸಬೇಕು ಎಂದರು.

ಮಳೆ ಕಡಿಮೆ ಇರುವುದರಿಂದ ರಸ್ತೆಗಳ ಅಭಿವೃದ್ಧಿ ಯೋಜನೆಗೆ ಮುಂದಾಗುವAತೆ ಸೂಚಿಸಿದರು. ೯ ಕಾಮಗಾರಿಗೆ ಟೆಂಡರ್ ಮುಗಿದಿದ್ದು, ಭೂಮಿಪೂಜೆಗೆ ಕ್ರಮ ಕೈಗೊಳ್ಳುವುದಾಗಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು. ಖಾಲಿ ಇರುವ ವೈದ್ಯರ ನೇಮಕಾತಿಗೆ ಕ್ರಮಕೈಗೊಳ್ಳಲಾಗಿದೆ. ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಆರೋಗ್ಯ ಅಧಿಕಾರಿ ತಿಳಿಸಿದರು.

ಚೆಸ್ಕಾಂ ಲೈನ್‌ಮನ್ ಹುದ್ದೆ ಭರ್ತಿಗೆ ಕ್ರಮಕೈಗೊಳ್ಳುವುದಾಗಿ ಜಿ. ಪಂ. ಉಪ ಕಾರ್ಯದರ್ಶಿ ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ಪ್ರಗತಿ ಬಗ್ಗೆ ಮಾಹಿತಿ ನೀಡಿದರು. ಇಓ ಕೊಣಿಯಂಡ ಅಪ್ಪಣ್ಣ ಇದ್ದರು.