ಮಡಿಕೇರಿ, ಅ. ೨೯: ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತತ್ತೆ ಬೇಡಿಕೆಯನ್ವಯ ೨ನೇ ರಾಜ್ಯ ಮರು ಸಂಘÀಟನೆ ಆಯೋಗ ರಚಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.೧ ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸುವುದಾಗಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಳಿಗ್ಗೆ ೧೦.೩೦ ಗಂಟೆಯಿAದ ಒಂದು ಗಂಟೆ ಕಾಲ ಧರಣಿ ನಡೆಸಿ ಜಿಲ್ಲಾಡಳಿತದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ೯ ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಖ್ಯಾತ ಅರ್ಥಶಾಸ್ತçಜ್ಞ ಹಾಗೂ ಮಾಜಿ ಕೇಂದ್ರ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕೊಡವ ಲ್ಯಾಂಡ್ ಪರವಾಗಿ ಆಯೋಗವೊಂದನ್ನು ರಚಿಸಬೇಕೆಂದು ಪ್ರತಿಪಾದಿಸಿದ್ದಾರೆ. ಸರ್ಕಾರಗಳು ಈ ಪ್ರಸ್ತಾಪವನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಅತ್ಯಂತ ಸೂಕ್ಷö್ಮ ಬುಡಕಟ್ಟು ಜನಾಂಗವಾಗಿರುವ ಕೊಡವರಿಗೆ ಸಾಂವಿಧಾನಿಕ ಭದ್ರತೆ ನೀಡಬೇಕೆಂದು ಒತ್ತಾಯಿಸಿದ್ದಾರೆ.