ಮಡಿಕೇರಿ, ನ. ೨: ವೀರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾ.ಪಂ.ವ್ಯಾಪ್ತಿಯ ಕೆದಮುಳ್ಳೂರು ಗ್ರಾಮದ ಸರ್ವೇ ನಂಬರ್ ೩೭೦/೧ ರ ೭.೫೦ ಎಕರೆ ಜಾಗದಲ್ಲಿ ೧೨೯ ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಪ್ರಥಮ ಹಂತದಲ್ಲಿ ೬೦ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ವಿದ್ಯುತ್ ಮತ್ತು ಕುಡಿಯುವ ನೀರು ಸಂಪರ್ಕ ಕಲ್ಪಿಸದೆ ಅರ್ಧಕ್ಕೆ ನಿಂತಿರುವ ಹಿನ್ನೆಲೆ ಈ ಕಾಮಗಾರಿಗಳ ಸಂಬAಧ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈಗಾಗಲೇ ೬೦ ಮನೆಗಳ ನಿರ್ಮಾಣ ಕಾಮಗಾರಿ ನಡೆದಿದ್ದು, ಅರ್ಧಕ್ಕೆ ನಿಂತು ಹೋಗಿದೆ. ಈ ಸಂಬAಧ ಸರ್ಕಾರದ ಗಮನಕ್ಕೆ ತಂದು ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು.
ಸೋಲಾರ್ ದೀಪದ ವ್ಯವಸ್ಥೆ ಮಾಡಲಾಗಿದೆ. ಆಹಾರ ಕಿಟ್, ಟಾರ್ಚ್ ವಿತರಿಸಲಾಗಿದೆ. ಸರ್ಕಾರ ಆದಿವಾಸಿಗಳು, ಬಡವರ ಒಳಿತಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಕೆದಮುಳ್ಳೂರು ಗ್ರಾ.ಪಂ. ವ್ಯಾಪ್ತಿಯ ೭೫ ಕುಟುಂಬಗಳು ಹಾಗೂ ಸುತ್ತಮುತ್ತಲಿನ ಗ್ರಾ.ಪಂ.ವ್ಯಾಪ್ತಿಯ ೫೪ ಸೇರಿ ಒಟ್ಟು ೧೨೯ ನಿರಾಶ್ರಿತ ಆದಿವಾಸಿ ಗಿರಿಜನ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಮುಂದಾಗಲಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು.
ಈಗಾಗಲೇ ನಿರ್ಮಾಣ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸುವ ಸಂಬAಧ ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಆದಷ್ಟು ಶೀಘ್ರ ಪೂರ್ಣಗೊಳಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ಡಾ.ವೆಂಕಟ್ ರಾಜಾ ಅವರು ಮಾತನಾಡಿ, ಮನೆಗಳ ನಿರ್ಮಾಣಕ್ಕೆ ಹಣ ಬಿಡುಗಡೆ ಸಂಬAಧ ಪತ್ರ ವ್ಯವಹಾರ ಆಗಿದ್ದು, ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಈ ಸಂಬAಧ ಇಲಾಖೆಯ ನಿರ್ದೇಶಕರ ಜೊತೆ ಚರ್ಚಿಸಲಾಗುವುದು ಎಂದರು.
ಈಗಾಗಲೇ ನಿರ್ಮಾಣ ಹಂತದಲ್ಲಿರುವ ಮನೆಗಳಿಗೆ ವಿದ್ಯುತ್ ಹಾಗೂ ಕುಡಿಯುವ ನೀರು ಪೂರೈಕೆ ಮಾಡಬೇಕಿದೆ. ಈ ಸಂಬAಧ ಪ್ರಯತ್ನಿಸಲಾಗುವುದು ಎಂದರು.
ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ ಅವರು ಮಾಹಿತಿ ನೀಡಿ ಸರ್ಕಾರದ ಆದೇಶದಲ್ಲಿ ತಲಾ ೫ ಲಕ್ಷ ರೂ. ಘಟಕ ವೆಚ್ಚದಲ್ಲಿ ೧೨೯ ಮನೆಗಳನ್ನು ನಿರ್ಮಾಣ ಮಾಡಲು ೬೪೫ ಲಕ್ಷ ರೂ. ಅನುದಾನ ಬಿಡುಗಡೆ ಮಾಡಲು ಆದೇಶಿಸಲಾಗಿತ್ತು. ಅದರಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದಿಂದ ಶೇ.೫೦ ರಷ್ಟು ೩೨೨.೫೦ ಲಕ್ಷ ರೂ. ಅನುದಾನ ಬಿಡುಗಡೆ ಆಗಿ, ಕೆಆರ್ಐಡಿಎಲ್ ಮೂಲಕ ೫ ಲಕ್ಷ ರೂ. ಘಟಕ ವೆಚ್ಚಕ್ಕೆ ಸಿದ್ಧಪಡಿಸಿ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ದೊರತಿದೆ ಎಂದು ಹೇಳಿದರು.
ಕೆಆರ್ಐಡಿಎಲ್ ಸಂಸ್ಥೆಗೆ ಗರಿಷ್ಠ ೨ ಕೋಟಿ ಮೊತ್ತಕ್ಕೆ ಕಾಮಗಾರಿ ಕೈಗೊಳ್ಳಲು ವಿನಾಯಿತಿ ನೀಡಲಾಗಿತ್ತು. ತಿದ್ದುಪಡಿ ಅಧಿನಿಯಮ ೨೦೨೧ ರ ೪ನೇ ಪ್ರಕರಣದ ೪ ಇರಡಿ ವಿನಾಯಿತಿ ನೀಡಿದ್ದು, ಕೆದಮುಳ್ಳೂರು ಗ್ರಾಮದಲ್ಲಿ ೧೨೯ ಮನೆಗಳನ್ನು ನಾಲ್ಕು ಹಂತದಲ್ಲಿ (೧ನೇ ಹಂತದಲ್ಲಿ ೪೦, ೨ನೇ ಹಂತದಲ್ಲಿ ೪೦, ೩ನೇ ಹಂತದಲ್ಲಿ ೪೦, ನಾಲ್ಕನೇ ಹಂತದಲ್ಲಿ ೯ ಮನೆಗಳನ್ನು ನಿರ್ಮಿಸಲು) ಸರ್ಕಾರದಿಂದ ನಿರ್ದೇಶನ ನೀಡಲಾಗಿತ್ತು ಎಂದು ಅವರು ವಿವರಿಸಿದರು.
ಅದರಂತೆ ಮೊದಲ ಹಂತದಲ್ಲಿ ೪೦ ಮನೆಗಳನ್ನು ನಿರ್ಮಾಣ ಮಾಡಲು ಕಾರ್ಯಾದೇಶ ನೀಡಿ ಕಾಮಗಾರಿ ನಿರ್ವಹಿಸಲು ಶೇ.೨೫ ರಷ್ಟು ೧೫೦ ಲಕ್ಷ ರೂ. ಅನುದಾನವನ್ನು ಕಾರ್ಯಪಾಲಕ ಅಭಿಯಂತರರು ಕೆಆರ್ಐಡಿಎಲ್ ಹುಣಸೂರು ಅವರಿಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಸದ್ಯ ಪರಿಷ್ಕೃತ ಜಿಎಸ್ಟಿ ದರ ಸೇರಿದಂತೆ ೨೦೨೧-೨೨ನೇ ಸಾಲಿನ ಎಸ್.ಆರ್ ದರದಂತೆ ಪ್ರತಿ ಮನೆಗೆ ೨.೬೪ ಲಕ್ಷಗಳಂತೆ ಹೆಚ್ಚುವರಿಯಾಗಿ ಒಂದು ಮನೆ ಘಟಕ ವೆಚ್ಚ ರೂ. ೭.೬೪ ಲಕ್ಷ ಆಗುತ್ತದೆ. ಮನೆ ಕಾಮಗಾರಿ ಪ್ರಾರಂಭಿಸಲು ಬಾಕಿ ಇರುವ ೮೯ ಮನೆಗಳ ಒಟ್ಟು ೬೭೯.೯೬ ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಲು ಪರಿಷ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಮಂಜೂರಾತಿ ನೀಡಲು ಕೆಆರ್ಐಡಿಎಸ್ ಕಾರ್ಯಪಾಲಕ ಅಭಿಯಂತರರು ಪತ್ರದಲ್ಲಿ ಕೋರಿದ್ದಾರೆ ಎಂದು ಐಟಿಡಿಪಿ ಇಲಾಖಾ ಅಧಿಕಾರಿ ವಿವರಿಸಿದರು.
ಆಡಳಿತಾತ್ಮಕ ಮಂಜೂರಾತಿ ದೊರೆತಿರುವ ರೂ. ೫ ಲಕ್ಷ ಘಟಕ ವೆಚ್ಚದ ಅಂದಾಜು ಪಟ್ಟಿಯಲ್ಲಿ ವಿದ್ಯುತ್ ಮತ್ತು ಕುಡಿಯುವ ನೀರು ಪೂರೈಕೆ ಒಳಗೊಂಡಿಲ್ಲದೆ ಇರುವುದರಿಂದ ಪ್ರಸ್ತುತ ಸಾಮಾಗ್ರಿಗಳ ದರ ಮತ್ತು ಎಸ್.ಆರ್ ದರ ಹೆಚ್ಚಾಗಿರುವುದರಿಂದ ಅಂದಾಜು ಪಟ್ಟಿಯಂತೆ ಅವಶ್ಯಕ ಕಾಮಗಾರಿ ಕೈಗೊಳ್ಳಲು ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೋರಲಾಗಿದೆ ಎಂದು ಎಸ್. ಹೊನ್ನೇಗೌಡ ಅವರು ತಿಳಿಸಿದರು. ಗ್ರಾಮ ಪಂಚಾಯಿತಿಯಿAದ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಗ್ರಾ.ಪಂ.ಪ್ರಮುಖರು ಮಾಹಿತಿ ನೀಡಿದರು.
ಕೆಆರ್ಐಡಿಎಲ್ ಕಾರ್ಯಪಾಲಕ ಇಂಜಿನಿಯರ್ ಸುರೇಶ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೆ.ಎಸ್. ಪ್ರಮೋದ್, ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಸಚಿನ್, ಗ್ರಾ.ಪಂ. ಅಧಿಕಾರಿಗಳು ಇತರರು ಇದ್ದರು.