ವೀರಾಜಪೇಟೆ, ನ. ೩: ಕಲ್ಲುಬಾಣೆ ನಾಗರಿಕ ವೇದಿಕೆ ಹಾಗೂ ಕಲ್ಲುಬಾಯ್ಸ್ ತಂಡದ ವತಿಯಿಂದ ಕಲ್ಲುಬಾಣೆಯ ಬದ್ರಿಯ ಶಾಲಾ ಆವರಣದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಸನ್ಮಾನ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಪೊನ್ನಣ್ಣ ಅವರು, ಪ್ರಜಾಪ್ರಭುತ್ವವೆಂದರೆ ಸಾಮೂಹಿಕ ನಾಯಕತ್ವದಲ್ಲಿ ನಡೆಯಬೇಕಾಗಿರುವುದು. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸದಾ ನಾನು ಬದ್ಧನಾಗಿರುತ್ತೇನೆ. ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಗ್ಯಾರೆಂಟಿ ಕಾರ್ಡ್ ಬಗ್ಗೆ ಯಾವುದೇ ಗೊಂದಲ ಬೇಡ. ನಮ್ಮ ಸರ್ಕಾರ ಮಾಡಿರುವ ಗ್ಯಾರೆಂಟಿ ಯೋಜನೆಗಳು ಸಂವಿಧಾನಬದ್ಧವಾಗಿದ್ದು ರಾಜ್ಯದ ಜನತೆಯನ್ನು ತಲುಪಿದೆ ಎಂದರು.
ಈ ಸಂದರ್ಭ ಆರ್ಜಿ ಗ್ರಾಮ ಪಂಚಾಯಿತಿಯ ಸದಸ್ಯ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾ ಅಧ್ಯಕ್ಷ ಕೆ.ಟಿ. ಬಷೀರ್ ಮಾತನಾಡಿ, ಚುನಾವಣೆ ಬಳಿಕ ಮೊದಲ ಬಾರಿಗೆ ಕಲ್ಲುಬಾಣೆ ಬೂತ್‌ಗೆ ಶಾಸಕ ಪೊನ್ನಣ್ಣ ಆಗಮಿಸಿರುವುದು ಸಂತೋಷದಾಯಕ ವಿಚಾರ. ಕಲ್ಲುಬಾಣೆಯ ನಾಗರಿಕರಿಗೆ ಇರುವ ಮೂಲಭೂತ ಸೌಲಭ್ಯಗಳ ಕೊರತೆ ಬಗ್ಗೆ ಚುನಾವಣೆ ಪೂರ್ವದಲ್ಲೇ ಶಾಸಕ ಪೊನ್ನಣ್ಣ ಅವರ ಗಮನ ಸೆಳೆಯಲಾಗಿತ್ತು. ಬಹಳ ವರ್ಷಗಳಿಂದ ಇಲ್ಲಿನ ರಸ್ತೆ ಹದಗೆಟ್ಟು ಸಾರ್ವಜ ನಿಕರಿಗೆ ಸಂಚಾರ ದುಸ್ಥರವಾಗಿದೆ. ಇತ್ತೀಚೆಗೆ ಅದನ್ನು ಸರಿಪಡಿಸುವ ಕೆಲಸವಾಗಿದ್ದರೂ ಮತ್ತೆ ಡಾಂಬರು ಕಿತ್ತುಹೋಗಿದ್ದು ಓಡಾಟಕ್ಕೆ ಅನಾನು ಕೂಲವಾಗಿದೆ. ರಸ್ತೆ ಅಗಲೀಕರಣ ವಾಗಬೇಕು, ಕಲ್ಲುಬಾಣೆಯಿಂದ ಆರ್ಜಿಗೆ ಸಂಪರ್ಕ ಕಲ್ಪಿಸಲು ರಸ್ತೆ ನಿರ್ಮಾಣವಾಗಬೇಕು, ಇಲ್ಲಿನ ಮಕ್ಕಳಿಗೆ ಆಟವಾಡಲು ಕ್ರೀಡಾಂಗಣದ ವ್ಯವಸ್ಥೆ, ಸಮುದಾಯ ಆರೋಗ್ಯ ಕೇಂದ್ರದ ವ್ಯವಸ್ಥೆ ಆಗಬೇಕು ಎಂದರು.
ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ, ಕಾಂಗ್ರೆಸ್ ಮುಖಂಡರು ಆಗಿರುವ ಆರ್.ಕೆ. ಅಬ್ದುಲ್ ಸಲಾಂ ಮಾತನಾಡಿ, ಮುಂದಿನ ದಿನಗಳಲ್ಲಿ ಕಲ್ಲುಬಾಣೆಯ ಅಭಿವೃದ್ಧಿಗೆ ಶಾಸಕರು ವಿಶೇಷ ಒತ್ತು ನೀಡಿ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೊಳಿಸಬೇಕು ಎಂದರು.
ಆರ್ಜಿ ಗ್ರಾಮ ಪಂಚಾಯಿತಿ ಸದಸ್ಯ ಶಹದೀರ್ ಅಲಿ ಕಲ್ಲುಬಾಣೆಯ ಸಮಸ್ಯೆಗಳು, ರಸ್ತೆ ವಿಸ್ತರಣೆ ಸಂಬAಧಿಸಿದ ಕುರಿತು ಮನವಿ ಸಲ್ಲಿಸಿದರು.
ಇದೇ ಸಂದರ್ಭ ಕಲ್ಲುಬಾಣೆಯ ಮಹಿಳೆಯರ ಸಂಘಟನೆ ವತಿಯಿಂದ ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರುವ ವೈದ್ಯರುಗಳ ಕೊರತೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಶಾಸಕ ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.
ವೇದಿಕೆಯಲ್ಲಿ ಹಿರಿಯರಾದ ಎಂ.ಇ ಮೊಯಿದ್ದೀನ್ ಕುಟ್ಟಿ, ಕಲ್ಲುಬಾಯ್ಸ್ ತಂಡದ ಅಧ್ಯಕ್ಷ ರಹೀಂ, ಕಾಂಗ್ರೆಸ್ ವಲಯ ಅಧ್ಯಕ್ಷ ಹಾಗೂ ಆರ್ಜಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಾಫರ್, ಆರ್ಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಉಪೇಂದ್ರ, ಅನೂಪ್, ಅನ್ ಜೋವಿಟಾ, ಆರ್ಜಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಹೆಚ್.ಬಿ. ಪಾರ್ವತಿ, ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಲ್ಲುಬಾಣೆಯ ಗ್ರಾಮಸ್ಥರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.