ಐದು ವರ್ಷ ನಮ್ಮದೇ ಸರ್ಕಾರ-ನಾನೇ ಐದು ವರ್ಷ ಮುಖ್ಯಮಂತ್ರಿ : ಸಿದ್ದರಾಮಯ್ಯ
ಹೊಸಪೇಟೆ, ನ. ೨: ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ಹೊಸಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕ್ರಮಗಳನ್ನು ಉದ್ಘಾಟಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಗಣಿಗಾರಿಕೆಗೆ ಸಂಬAಧಿಸಿದ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರಾಜ್ಯ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತದೆ. ಯಾವುದೇ ವರ್ಗದ ಗಣಿಗಾರಿಕೆ ಕಾನೂನುಬದ್ಧವಾಗಿ ಪರವಾನಗಿ ತೆಗೆದುಕೊಂಡಲ್ಲಿ, ಎಲ್ಲ ಸಂಬAಧಪಟ್ಟ ಇಲಾಖೆಗಳಿಂದ ಸಂಪೂರ್ಣ ಸಹಕಾರ ದೊರೆಯಲಿದೆ ಎಂದರು. ಶಾಸಕ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಸರ್ಕಾರ ಶೀಘ್ರವೇ ಪತನವಾಗಲಿದೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕರ್ನಾಟಕ ಜನತೆ ಕಾಂಗ್ರೆಸ್ ಪಕ್ಷವನ್ನು ೧೩೬ ಸ್ಥಾನಗಳಲ್ಲಿ ಗೆಲ್ಲಿಸಿ ಬಹುಮತ ನೀಡಿದ್ದಾರೆ. ಐದು ವರ್ಷ ಕಾಂಗ್ರೆಸ್ ಸರ್ಕಾರದ ಆಡಳಿತವೆ ಇರುತ್ತದೆ. ನಾನೇ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ. ಒಮ್ಮೆ ಆಪರೇಷನ್ ಕಮಲ ಮಾಡಿ ಬಿಜೆಪಿಯವರು ಯಶಸ್ವಿಯಾಗಿದ್ದರಿಂದ, ಈಗ ಮತ್ತೆ ಆ ಪ್ರಯತ್ನಕ್ಕೆ ಕೈ ಹಾಕಬಹುದು ಎಂದುಕೊAಡಿದ್ದಾರೆ. ಆದರೆ ಅವರ ಪ್ರಯತ್ನ ವ್ಯರ್ಥವಾಗಲಿದೆ ಎಂದರು. ಸರ್ಕಾರದಲ್ಲಿ ಮೂರು ಉಪ ಮುಖ್ಯಮಂತ್ರಿಗಳು ಇರಲಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸ್ ರಾಷ್ಟಿçÃಯ ಪಕ್ಷವಾಗಿದ್ದು, ಪ್ರಾದೇಶಿಕ ಪಕ್ಷ ಅಲ್ಲ. ಇಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.
ಮೈಸೂರಿನಲ್ಲಿ ಹುಲಿ ದಾಳಿ: ಅರಣ್ಯ ಸಿಬ್ಬಂದಿ ಮೇಲೆ ಸ್ಥಳೀಯರಿಂದ ಹಲ್ಲೆ
ಮೈಸೂರು, ನ. ೨: ಮೈಸೂರಿನಲ್ಲಿ ಹುಲಿ ದಾಳಿ ಪ್ರಕರಣ ವ್ಯಾಪಕ ಆತಂಕ ಸೃಷ್ಟಿಸಿದೆ. ರೈತನೋರ್ವನ ಮೇಲೆ ಹುಲಿ ದಾಳಿ ನಡೆಸಿ ಗಾಯ ಗೊಳಿಸಿದ ಘಟನೆ ಜಿಲ್ಲೆಯ ನಂಜನಗೂಡು ತಾಲೂಕು ಮಹದೇವನಗರದ ಹೊರವಲಯದಲ್ಲಿ ನಡೆದಿದೆ. ವಿಷಯ ತಿಳಿದು ಪರಿಶೀಲನೆಗೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮಸ್ಥರು ಥಳಿಸಿದ ಘಟನೆ ವರದಿಯಾಗಿದೆ. ಹುಲಿ ದಾಳಿಗೆ ಒಳಗಾದ ರೈತನನ್ನು ವೀರಭದ್ರ ಬೋವಿ ಎಂದು ಗುರುತಿಸಲಾಗಿದ್ದು, ವೀರಭದ್ರ ಬೋವಿ ಬಂಡಿಪುರ ರಾಷ್ಟಿçÃಯ ಉದ್ಯಾನವನದ ಸಮೀಪದ, ನಂಜನಗೂಡು ತಾಲೂಕಿನ ಮಹದೇವನಗರ ಗ್ರಾಮದ ಮತ್ತಿ ಮರದ ಜೇನುಕಟ್ಟೆಯ ಬಳಿ ದನ ಮೇಯಿಸುತ್ತಿದ್ದಾಗ ಹಸು ಹಾಗೂ ಕರುವಿನ ಮೇಲೆ ಹುಲಿ ದಾಳಿ ನಡೆಸಿದೆ. ಆಗ ಹಸುವನ್ನು ರಕ್ಷಿಸಲು ಮುಂದಾದ ವೀರಭದ್ರ ಅವರ ಮೇಲೂ ಹುಲಿ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡ ವೀರಭದ್ರ ಬೋವಿಯವರನ್ನು ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಲಿ ದಾಳಿ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮಹಾಂತೇಶ್ ವಿರುದ್ಧ ಆಕ್ರೋಶಗೊಂಡ ರೈತರು ಥಳಿಸಿದ್ದಾರೆ. ಈ ವೇಳೆ ಕೆಲವರು ಅರಣ್ಯ ಇಲಾಖೆ ಸಿಬ್ಬಂದಿ ಮಹಾಂತೇಶ್ ಅವರನ್ನು ಬಿಡಿಸಿ ಕಳುಹಿಸಿದ್ದಾರೆ.
ಮೋದಿ ಬಗ್ಗೆ ಟೀಕೆ ಮಾಡುವುದು ಸಿದ್ದರಾಮಯ್ಯ ಚಾಳಿ : ಯಡಿಯೂರಪ್ಪ
ಬೆಂಗಳೂರು, ನ. ೨: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಸ್ಥಗಿತ ಆಗಿದೆ. ಉಚಿತ ವಿದ್ಯುತ್ ಕೊಡ್ತೀವಿ ಅಂತ ಹೇಳಿ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಬರ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿಗಳು, ಸಚಿವರು ಹೋಗಿಲ್ಲ. ಶಾಸಕರಿಗೆ ಕೇವಲ ೫೦ ಲಕ್ಷ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ. ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗ ನಿಗಮಗಳಿಗೆ ಹಣ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಆರೋಪಗಳ ಸುರಿಮಳೆಗೈದಿದ್ದಾರೆ. ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕದ ಖರ್ಚು ರೈತನೇ ಭರಿಸಬೇಕು ಎಂಬ ಆದೇಶ ಹೊರಡಿಸಲು ಸರ್ಕಾರ ಹೊರಟಿದೆ. ಉಚಿತ ಬಸ್ ಹೊರತು ಬೇರೆ ಸರ್ಕಾರದ ಬೇರೆ ಗ್ಯಾರಂಟಿ ಯೋಜನೆಗಳು ಸರಿಯಾಗಿ ಜಾರಿಗೆ ಬಂದಿಲ್ಲ. ಅರ್ಧದಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ ನಿಧಿ ಕೊಟ್ಟಿಲ್ಲ. ಇದು ಲೂಟಿ ಸರ್ಕಾರ, ಐಟಿ ದಾಳಿಯಿಂದ ಸರ್ಕಾರದ ಲೂಟಿ ಬಯಲಾಗಿದೆ ಎಂದು ಆರೋಪಿಸಿದರು. ಇದು ಎಐಸಿಸಿಗೆ ಎಟಿಎಂ ಸರ್ಕಾರ ಆಗಿದೆ. ಮೋದಿಯವರನ್ನು ನಿತ್ಯ ಟೀಕಿಸೋದು ಸಿದ್ದರಾಮಯ್ಯ ಚಾಳಿಯಾಗಿದೆ ಎಂದು ಟೀಕಿಸಿದರು.
ಅಪಘಾತ : ಇಬ್ಬರು ಮಕ್ಕಳು ಸೇರಿ ಐವರ ದುರ್ಮರಣ
ಕಲಬುರಗಿ, ನ. ೨: ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಬೈಕ್-ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ದುರ್ಮರಣ ಹೊಂದಿದ್ದಾರೆ. ಅಪಘಾತದಲ್ಲಿ ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಂದೇ ಬೈಕ್‌ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ತೆರಳುತ್ತಿದ್ದರು. ಎದುರಿಗೆ ಬರುತ್ತಿದ್ದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮೃತರು ಅಫಜಲಪೂರನಲ್ಲಿ ಫಾಸ್ಟ್ಫುಡ್ ಹೊಟೇಲ್ ನಡೆಸುತ್ತಿದ್ದರು. ಘಟನಾ ಸ್ಥಳಕ್ಕೆ ಅಫಜಲಪೂರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಜಿಕಾ ವೈರಸ್ ಪತ್ತೆ, ಆತಂಕಬೇಡ: ರಾಜ್ಯ ಸರ್ಕಾರದ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು, ನ. ೨: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೊಳ್ಳೆಗಳಲ್ಲಿ ಜಿಕಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಗುರುವಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಜನರು ಅನಾವಶ್ಯಕವಾಗಿ ಆತಂಕಗೊಳ್ಳದAತೆ, ಜ್ವರದ ಸಂದರ್ಭದಲ್ಲಿ ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವಂತೆ ಮನವಿ ಮಾಡಿದೆ. ಚಿಕ್ಕಬಳ್ಳಾಪುರದ ಆರು ಕೆರೆಗಳಿಂದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದಾಗ ಈಡಿಸ್ ಈಜಿಪ್ಟಿ ಸೊಳ್ಳೆಗಳಲ್ಲಿ ವೈರಸ್ ಪತ್ತೆಯಾಗಿದೆ. ಈ ಕುರಿತು ಮಾರ್ಗಸೂಚಿ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ರಂದೀಪ್ ಡಿ. ಜ್ವರ, ತಲೆನೋವು, ದದ್ದುಗಳು, ಸ್ನಾಯು ನೋವು ಮತ್ತು ಕೀಲು ನೋವು ಈ ವೈರಸ್‌ನ ಲಕ್ಷಣವಾಗಿದ್ದು, ಎರಡರಿಂದ ಏಳು ದಿನಗಳ ವರೆಗೆ ಇರುತ್ತದೆ. ಪ್ರಸ್ತುತ, ರಾಜ್ಯದಲ್ಲಿ ಜಿಕಾ ವೈರಸ್ ಸೋಂಕಿನ ಯಾವುದೇ ಪ್ರಕರಣಗಳಿಲ್ಲ ಎಂದು ತಿಳಿಸಿದ್ದಾರೆ. ಜ್ವರ ಮತ್ತು ರೋಗ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಗಳು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬೇಕು. ಜಿಕಾ ವೈರಸ್ ರೋಗಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಇಲ್ಲದಿ ರುವುದರಿಂದ ಶಂಕಿತ ಅಥವಾ ದೃಢಪಡಿಸಿದ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ರಬೇಕು ಮತ್ತು ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳಬೇಕು, ಸಾಕಷ್ಟು ದ್ರವಗಳನ್ನು ಸೇವಿಸಬೇಕು ಮತ್ತು ಸೊಳ್ಳೆ ಪರದೆಗಳ ಅಡಿಯಲ್ಲಿ ಮಲಗಬೇಕು. ವಿಶೇಷವಾಗಿ ಗರ್ಭಿಣಿಯರು ಎಚ್ಚರಿಕೆ ವಹಿಸಬೇಕು. ವೈದ್ಯರು ಹೇಳಿದಂತೆ ಯಾವುದೇ ಸೋನೋಗ್ರಫಿ ವರದಿ ಹಾಗೂ ಜಿಕಾ ವೈರಸ್ ಪ್ರತಿಕಾಯ ಮತ್ತು ಅಲ್ಟ್ರಾ' ಪರೀಕ್ಷೆಗಾಗಿ ನಿಯಂತ್ರಿತ ಪ್ರದೇಶದಲ್ಲಿರುವ ಗರ್ಭಿಣಿಯರು, ತಮ್ಮ ಸೀರಮ್ ಮತ್ತು ಮೂತ್ರದ ಮಾದರಿಗಳನ್ನು ಪರೀಕ್ಷಿಸಿಕೊಳ್ಳಬೇಕು. ಸಾರ್ವಜನಿಕರು ಮನೆಯ ಸುತ್ತಮುತ್ತ ಈಡಿಸ್ ಸೊಳ್ಳೆಗಳ ಸಂತಾನೋತ್ಪತ್ತಿ ಮೂಲ ಕಡಿಮೆ ಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ವೈಯಕ್ತಿಕ ರಕ್ಷಣಾ ಕ್ರಮಗಳ ಬಳಕೆ ಕುರಿತು ಸಲಹೆ ನೀಡಲಾಗಿದ್ದು, ಸಂಪೂರ್ಣವಾಗಿ ದೇಹ ಮುಚ್ಚುವ ಬಟ್ಟೆಗಳನ್ನು ಧರಿಸಬೇಕು ಮತ್ತು ಹಗಲಿನ ವೇಳೆಯಲ್ಲಿಯೂ ಬೆಡ್ ನೆಟ್‌ಗಳ ಅಡಿಯಲ್ಲಿ ಮಲಗುವಂತೆ ಸಲಹೆ ನೀಡಲಾಗಿದೆ.
ಭಾರತದ ಬೌಲರ್‌ಗಳ ಅಬ್ಬರಕ್ಕೆ ಮುಗ್ಗರಿಸಿದ ಶ್ರೀಲಂಕಾ
ಮುAಬೈ, ನ. ೨: ಭಾರತದ ಬೌಲರ್‌ಗಳು ಮತ್ತೊಮ್ಮೆ ೨೦೨೩ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತಮ್ಮ ಬಲ ತೋರಿಸಿದ್ದಾರೆ. ಭಾರತದ ವಿರುದ್ಧ ಮ್ಯಾಚ್ ಆಡಿದ ಶ್ರೀಲಂಕಾಗೆ ಆಟದ ಪಾಠವನ್ನು ಮಾಡಿದ್ದಾರೆ. ಭಾರತ ನೀಡಿದ್ದ ೩೫೮ ರನ್‌ಗಳ ಬೃಹತ್ ಗುರಿ ಬೆನ್ನುಹತ್ತಿದ ಶ್ರೀಲಂಕಾ ಟೀಂ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮಕಾಡೆ ಮಲಗಿದೆ. ಭಾರತ ನೀಡಿದ್ದ ೩೫೮ ರನ್ ಬೃಹತ್ ಗುರಿ ಬೆನ್ನುಹತ್ತಿದ ಲಂಕಾ ತಂಡ, ಕೇವಲ ೫೫ ರನ್‌ಗಳಿಸಿ ಆಲೌಟ್ ಆಗಿ ವಿಶ್ವಕಪ್ ಅಖಾಡದಿಂದ ಮನೆ ಕಡೆಗೆ ಹೆಜ್ಜೆ ಹಾಕಿದೆ. ಹಾಗೇ ಭಾರತ ತಂಡ ೩೦೨ ರನ್‌ಗಳ ಬೃಹತ್ ಅಂತರದ ಗೆಲುವು ದಾಖಲಿಸಿ, ಈಗ ಅಧಿಕೃತವಾಗಿ ಸೆಮೀಸ್ ಅಖಾಡದಲ್ಲಿ ತನ್ನ ಸ್ಥಾನ ಗ್ಯಾರಂಟಿ ಮಾಡಿಕೊಂಡಿದೆ.