ಮಡಿಕೇರಿ, ನ. ೨ : ಸರ್ಕಾರದ ಸಹಭಾಗಿತ್ವದ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿದೆ ಎಂದು ಕೊಡಗು ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಕೊಡಗು ಜಿಲ್ಲಾಧಿಕಾರಿ ಗಳಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಅಪರ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಅವರ ಮೂಲಕ ಜಿಲ್ಲಾಧಿಕಾ ರಿಗಳಿಗೆ ದೂರು ನೀಡಿದ್ದು, ಕರ್ನಾಟಕ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಜಿಲ್ಲಾಡಳಿತ ಹಾಗೂ ಮಡಿಕೇರಿ ನಗರ ಸಭೆಯ ಸಹಯೋಗದಲ್ಲಿ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ದಿನಾಂಕ ೧೬-೧೦-೨೦೨೩ ರಿಂದ ೨೪-೧೦-೨೦೨೩ ರ ವರೆಗೆ ಮಡಿಕೇರಿ ನಗರದ ಗಾಂಧಿ ಮೈದಾನದಲ್ಲಿ ನಿರ್ಮಿಸಲಾದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆದಿದೆ.

ಸರ್ಕಾರದ ಪ್ರಾಯೋಜಕತ್ವದಲ್ಲಿ ನಡೆಯುವ ಯಾವುದೇ ಸಭೆ ಸಮಾರಂಭಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಆದ್ಯತಾ ಸೂಚಿ ಪಟ್ಟಿ ಅನ್ವಯ ಶಿಷ್ಟಾಚಾರ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಆಹ್ವಾನ ಪತ್ರಿಕೆ ಮುದ್ರಿಸುವಾಗ ಆದ್ಯತೆ ಅನುಸಾರವಾಗಿ ಅತಿಥಿಗಳ, ಗಣ್ಯರ ಹೆಸರನ್ನು ಕ್ರಮವಾಗಿ ನಮೂದಿಸುವುದು ನಿಯಮವಾಗಿದೆ.

ಆದರೆ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಭಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ.

ಆದ್ದರಿAದ ಈ ಪ್ರಕರಣಕ್ಕೆ ಸಂಬAಧಿಸಿದAತೆ ನಗರಸಭೆಯ ಆಧ್ಯಕ್ಷರು ಹಾಗೂ ಮಡಿಕೇರಿ ದಸರಾ ಸಮಿತಿಯ ಅಧ್ಯಕ್ಷರಾದ ಅನಿತಾ ಪೂವಯ್ಯ ಹಾಗೂ ಸಂಬAಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ತೆನ್ನಿರಾ ಮೈನಾ ದೂರಿನಲ್ಲಿ ಒತ್ತಾಯಿಸಿದ್ದಾರೆ.