ಮಡಿಕೇರಿ, ನ. ೩: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಮಡಿಕೇರಿ ಮತ್ತು ಕಾವೇರಿ ಪದವಿ ಕಾಲೇಜು, ಗೋಣಿಕೊಪ್ಪಲು ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ತಾ. ೪ ರಂದು (ಇಂದು) ಕಾವೇರಿ ಪದವಿ ಕಾಲೇಜು, ಗೋಣಿಕೊಪ್ಪಲಿನಲ್ಲಿ ನಡೆಯಲಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಸಾದ್ ಕೆ.ಬಿ. ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಬಿ. ಕಾವೇರಪ್ಪ ವಹಿಸಲಿದ್ದಾರೆ. ಅತಿಥಿಗಳಾಗಿ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಸ್.ಎಸ್. ಮಾದಯ್ಯ, ಕಾವೇರಿ ಕಾಲೇಜು ಎನ್ಸಿಸಿ ಅಧಿಕಾರಿಗಳಾದ ಲೆಫ್ಟಿನೆಂಟ್ ಅಕ್ರಂ ಎಂ.ಆರ್, ಲೆಫ್ಟಿನೆಂಟ್ ಲೇಪಾಕ್ಷಿ ಐ.ಡಿ. ಹಾಗೂ ಸಂಪನ್ಮೂಲ ವ್ಯಕ್ತಿ ಮಡಿಕೇರಿ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಯ ದೀಪಕ್ ಬಿ.ಕೆ. ಭಾಗವಹಿಸಲಿದ್ದಾರೆ.