ಚಂದ್ರಮೋಹನ್
ಕುಶಾಲನಗರ, ನ .೩: ಕುಶಾಲನಗರ ಪಟ್ಟಣದ ಹೃದಯ ಭಾಗದಲ್ಲಿರುವ ಕೆರೆಯೊಂದನ್ನು ಅಕ್ರಮವಾಗಿ ಮಣ್ಣು ತುಂಬಿಸಿ ಮುಚ್ಚುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.
ಕುಶಾಲನಗರ ಖಾಸಗಿ ಬಸ್ ನಿಲ್ದಾಣ ಹಿಂಭಾಗದಲ್ಲಿರುವ ಸುಮಾರು ೨ ಎಕರೆ ವಿಸ್ತೀರ್ಣದ ಕುಂಬಾರ ಗುಂಡಿ ಕೆರೆಯನ್ನು ಕಳೆದ ಹಲವು ದಿನಗಳಿಂದ ಬೃಹತ್ ಗಾತ್ರದ ಕಲ್ಲು ಹಾಗೂ ಮಣ್ಣು ತುಂಬಿಸಿ ಒತ್ತುವರಿ ಮಾಡುತ್ತಿರುವ ಬಗ್ಗೆ ಸ್ಥಳೀಯ ನಾಗರಿಕರಿಂದ ‘ಶಕ್ತಿ’ಗೆ ದೂರುಗಳು ಬಂದಿವೆ.
ಕಳೆದ ಫೆಬ್ರವರಿ ತಿಂಗಳಲ್ಲಿ ಈ ಬಗ್ಗೆ ‘ಶಕ್ತಿ’ ಸಮಗ್ರ ವರದಿ ಪ್ರಕಟಿಸಿ ಸಂಬAಧಿಸಿದ ಅಧಿಕಾರಿಗಳ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಕೆರೆಗೆ ಮಣ್ಣು ತುಂಬಿಸುತ್ತಿರುವ ಕಾರ್ಯ ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಖಾಸಗಿ ವ್ಯಕ್ತಿಯೊಬ್ಬರು ಟ್ರಾö್ಯಕ್ಟರ್, ಟಿಪ್ಪರ್ ಬಳಸಿ ಮಣ್ಣು ಸುರಿಯುತ್ತಿರುವ ದೃಶ್ಯ ಕಂಡು ಬಂದಿದೆ. ತಕ್ಷಣ ಕೆರೆ ದಡದಲ್ಲಿ ಕೆಲಸ ಸ್ಥಗಿತಗೊಳಿಸುವಂತೆ ನಾಗರಿಕರು ಸಂಬAಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪುರಸಭೆ ಸದಸ್ಯ ವಿ.ಎಸ್. ಆನಂದ್ ಕುಮಾರ್ ಕುಂಬಾರಗುAಡಿ ಕೆರೆಯ ಅಸ್ತಿತ್ವವನ್ನು ಉಳಿಸುವ ನಿಟ್ಟಿನಲ್ಲಿ ಈಗಾಗಲೇ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ತಕ್ಷಣ ಸರ್ವೆ ಕಾರ್ಯ ನಡೆಸಿ ಕೆರೆಯನ್ನು ಸಂರಕ್ಷಣೆ ಮಾಡುವ ಕೆಲಸ ಆಗಬೇಕು ಎಂದು ತಿಳಿಸಿದ್ದಾರೆ.
ಯಾವುದೇ ಅನುಮತಿ ಇಲ್ಲದೆ ಕೆರೆಯಲ್ಲಿ ಕಲ್ಲು, ಮಣ್ಣು ಸುರಿಯುತ್ತಿರುವುದು ನಿಯಮಬಾಹಿರವಾಗಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಪುರಸಭೆ ಸದಸ್ಯ ಡಿ.ಕೆ. ತಿಮ್ಮಪ್ಪ ಹೇಳಿದ್ದಾರೆ.
ಈ ಬಗ್ಗೆ ‘ಶಕ್ತಿ’ಗೆ ಪ್ರತಿಕ್ರಿಯೆ ನೀಡಿದ ಕುಶಾಲನಗರ ಪುರಸಭೆ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್, ಕೆರೆಯ ಅಸ್ತಿತ್ವ ಉಳಿಸುವ ಹಿನ್ನೆಲೆಯಲ್ಲಿ ಸರ್ವೆ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಸರ್ವೆ ಕಾರ್ಯ ಪೂರ್ಣಗೊಳ್ಳುವ ತನಕ ಯಥಾಸ್ಥಿತಿ ಕಾಪಾಡುವಂತೆ ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.