ಮಡಿಕೇರಿ, ನ. ೩: ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ತಾ.೫ರಂದು ತಲಕಾವೇರಿ ಕ್ಷೇತ್ರದಲ್ಲಿ ಸಂಕ್ರಮಣ ಕವಿಗೋಷ್ಠಿ, ಭಕ್ತಿ ಗೀತೆಗಳ ಗಾಯನ ಹಾಗೂ ವಿಚಾರಗೋಷ್ಠಿ ಏರ್ಪಡಿಸಲಾಗಿದೆ.

ಬೆಳಿಗ್ಗೆ ೧೦.೩೦ ಗಂಟೆಗೆ ತಲಕಾವೇರಿ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಸ್ನೇಹ ಬಳಗದ ಅಧ್ಯಕ್ಷ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಮಂಡಲ ಮಡಿಕೇರಿ, ನ. ೩: ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ತಾ.೫ರಂದು ತಲಕಾವೇರಿ ಕ್ಷೇತ್ರದಲ್ಲಿ ಸಂಕ್ರಮಣ ಕವಿಗೋಷ್ಠಿ, ಭಕ್ತಿ ಗೀತೆಗಳ ಗಾಯನ ಹಾಗೂ ವಿಚಾರಗೋಷ್ಠಿ ಏರ್ಪಡಿಸಲಾಗಿದೆ.

ಬೆಳಿಗ್ಗೆ ೧೦.೩೦ ಗಂಟೆಗೆ ತಲಕಾವೇರಿ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಸ್ನೇಹ ಬಳಗದ ಅಧ್ಯಕ್ಷ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಮಂಡಲ ನಿವೃತ್ತ ಶಿಕ್ಷಕ ಎ.ಎಸ್. ಶ್ರೀಧರ್ ಉಪಸ್ಥಿತರಿರುವರು.

ಕವಿಗೋಷ್ಠಿ - ಗಾಯನ

ನಂತರ ನಡೆಯುವ ಸಂಕ್ರಮಣ ಕವಿಗೋಷ್ಠಿ ಹಾಗೂ ಭಕ್ತಿಗೀತೆ ಗಾಯನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ, ನಿವೃತ್ತ ಪ್ರಾಂಶುಪಾಲ ಬಿ.ಆರ್. ಜೋಯಪ್ಪ ವಹಿಸುವರು. ಗೋಣಿಕೊಪ್ಪ ಕಾವೇರಿ ಕಾಲೇಜು ಉಪ ಪ್ರಾಂಶುಪಾಲೆ ಡಾ. ಎಸ್. ಪೂವಮ್ಮ, ಮೈಸೂರಿನ ಬಾ.ಸಾ.ಪ.ಪೂ. ಕಾಲೇಜು ಪ್ರಾಂಶುಪಾಲ ಪಿ.ಎಸ್. ಜಾನ್, ಕವಿಯತ್ರಿ ವತ್ಸಲ ., ಸಾಹಿತಿ ಶಿವದೇವಿ ಅವನೀಶ್ಚಂದ್ರ ಅವರುಗಳು ಉಪಸ್ಥಿತರಿರುವರು.