ಗೋಣಿಕೊಪ್ಪಲು, ನ. ೩: ಕೊಡಗು ಜಿಲ್ಲೆಗೆ ಆಗಮಿಸಿದ ಕರ್ನಾಟಕ ರಾಜ್ಯದ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಪೊನ್ನಂಪೇಟೆ ತಾಲೂಕಿನ ಹುದೂರು ಗೋಣಿಕೊಪ್ಪಲು, ನ. ೩: ಕೊಡಗು ಜಿಲ್ಲೆಗೆ ಆಗಮಿಸಿದ ಕರ್ನಾಟಕ ರಾಜ್ಯದ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಪೊನ್ನಂಪೇಟೆ ತಾಲೂಕಿನ ಹುದೂರು ವಿವಿಧ ತಳಿಯ ಭತ್ತಗಳನ್ನು ಬೆಳೆಯುವ ಮೂಲಕ ಸಾಧನೆ ಮಾಡಿರುವ ಕೃಷಿಕ ರವಿಶಂಕರ್ ಗದ್ದೆಗೆ ತೆರಳಿ ಕೃಷಿಕನ ಕಾಳಜಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಈ ವೇಳೆ ಕೃಷಿಕ ರವಿಶಂಕರ್ ಈ ಬಾರಿ ಮಳೆ ಕೊರತೆ ಹಿನ್ನೆಲೆಯಲ್ಲಿ ಬೆಳೆಯಲ್ಲಿ ನಷ್ಟ ಸಂಭವಿಸಿರುವ ಬಗ್ಗೆ ಸಚಿವರ ಗಮನ ಸೆಳೆದರು. ನೀರಾವರಿಗಾಗಿ ಬೋರ್ವೆಲ್ ತೆಗೆಯುವಂತೆ ಸಚಿವರು ಸೂಚನೆ ನೀಡಿದರು. ಇದಕ್ಕೆ ಇಲಾಖೆ ವತಿಯಿಂದ ಅಗತ್ಯ ಸಹಾಯ ನೀಡುವುದಾಗಿ ಭರವಸೆ ನೀಡಿದರು.
ನಾಗರಿಕರನ್ನು ತನ್ನತ್ತ ಸೆಳೆಯುತ್ತಿರುವ ನೇರಳೆ ಬಣ್ಣದ ಕೃಷ್ಣ ಭತ್ತವನ್ನು ಸಚಿವರು ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಹಿರಿಯ ಅಧಿಕಾರಿಗಳು ವೀಕ್ಷಿಸಿ ಇವರಿಂದ ಮಾಹಿತಿ ಪಡೆದರು. ಈ ವೇಳೆ ಕೊಡಗು ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ.ಎನ್. ಪ್ರಥ್ಯು, ಅರುವತ್ತೋಕ್ಲು ಗ್ರಾ.ಪಂ. ಸದಸ್ಯ ಸುಗುಣ ಸೇರಿದಂತೆ ಕೃಷಿ ಇಲಾಖೆಯ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.