ಕೂಡಿಗೆ: ಕನ್ನಡಿಗರಾದ ನಮ್ಮಲ್ಲಿ ನವೆಂಬರ್‌ನಲ್ಲಿ ಜಾಗೃತವಾಗುವ ಕನ್ನಡ ಭಾಷಾ ಪ್ರೇಮವು ಇಡೀ ವರ್ಷದುದ್ದಕ್ಕೂ ನಿತ್ಯೋತ್ಸವ ಆದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯು ನಿಶ್ಚಯವಾಗಿಯೂ ಬೆಳೆಯಲು ಸಾಧ್ಯ ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಭಾಸ್ಕರ್ ನಾಯಕ್ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ರಾಷ್ಟçಕವಿ ಕುವೆಂಪು ಕನ್ನಡ ಭಾಷಾ ಸಂಘದ ವತಿಯಿಂದ ಪ್ರೌಢಶಾಲೆಯಲ್ಲಿ ಎನ್.ಎಸ್.ಎಸ್., ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಎಸ್‌ಡಿಎಂಸಿ ಹಾಗೂ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ ೬೮ನೇ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-೫೦ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣವಾಗಿ ಈಗ ೫೦ ವರ್ಷ. ನಾಡಿನೆಲ್ಲೆಡೆ ಸುವರ್ಣ ಸಂಭ್ರಮ ಮನೆ ಮಾಡಿದೆ. ಈ ಅರ್ಧ ಶತಮಾನದಲ್ಲಿ ರಾಜ್ಯವು ಎಲ್ಲ ಕ್ಷೇತ್ರಗಳಲ್ಲಿಯೂ ಬೆಳೆದಿದೆ ಎಂದರು.

ಕೂಡಿಗೆ: ಕನ್ನಡಿಗರಾದ ನಮ್ಮಲ್ಲಿ ನವೆಂಬರ್‌ನಲ್ಲಿ ಜಾಗೃತವಾಗುವ ಕನ್ನಡ ಭಾಷಾ ಪ್ರೇಮವು ಇಡೀ ವರ್ಷದುದ್ದಕ್ಕೂ ನಿತ್ಯೋತ್ಸವ ಆದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯು ನಿಶ್ಚಯವಾಗಿಯೂ ಬೆಳೆಯಲು ಸಾಧ್ಯ ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಭಾಸ್ಕರ್ ನಾಯಕ್ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ರಾಷ್ಟçಕವಿ ಕುವೆಂಪು ಕನ್ನಡ ಭಾಷಾ ಸಂಘದ ವತಿಯಿಂದ ಪ್ರೌಢಶಾಲೆಯಲ್ಲಿ ಎನ್.ಎಸ್.ಎಸ್., ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಎಸ್‌ಡಿಎಂಸಿ ಹಾಗೂ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ ೬೮ನೇ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-೫೦ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣವಾಗಿ ಈಗ ೫೦ ವರ್ಷ. ನಾಡಿನೆಲ್ಲೆಡೆ ಸುವರ್ಣ ಸಂಭ್ರಮ ಮನೆ ಮಾಡಿದೆ. ಈ ಅರ್ಧ ಶತಮಾನದಲ್ಲಿ ರಾಜ್ಯವು ಎಲ್ಲ ಕ್ಷೇತ್ರಗಳಲ್ಲಿಯೂ ಬೆಳೆದಿದೆ ಎಂದರು.

ಬೆಟ್ಟಗೇರಿ ಮಾತನಾಡಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ಎ.ಎಂ. ಜವರಯ್ಯ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕ.ಸಾ.ಪ. ಸಮಿತಿ ಸದಸ್ಯರಾದ ಲೀಲಾಕುಮಾರಿ ತೊಡಿಕಾನ, ಡಿ.ಎಸ್. ಸೋಮಶೇಖರ್, ಗ್ರಾಮ ಪಂಚಾಯಿತಿ ಪಿಡಿಓ ಎಂ.ಆರ್. ಸಂತೋಷ್, ಲೆಕ್ಕಾಧಿಕಾರಿ ಎಸ್.ಎಸ್. ಮಮತ, ಸಿಬ್ಬಂದಿ ಅವಿನಾಶ್, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಎಸ್.ಎಂ. ಪುಟ್ಟಸ್ವಾಮಿ, ಸದಸ್ಯರಾದ ಎಂ. ನಾಗರಾಜ್, ಡಿ.ವೈ. ಶೃತಿ, ಕೃಷಿಕರಾದ ಕೆ.ಎಸ್. ರಾಜಾಚಾರಿ, ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಎಂ.ಟಿ. ದಯಾನಂದ ಪ್ರಕಾಶ್ ಇತರರು ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳಾದ ಕೆ. ಎಂ. ಮದನ್ ಮತ್ತು ಸ್ಪಂದನ ಕಾರ್ಯಕ್ರಮ ನಿರ್ವಹಿಸಿದರು. ಕನ್ನಡ ಭಾಷಾ ಶಿಕ್ಷಕ ಕೆ. ಗೋಪಾಲಕೃಷ್ಣ ಸ್ವಾಗತಿಸಿದರು. ವಿದ್ಯಾರ್ಥಿನಿ ಭೂಮಿಕಾ ಮತ್ತು ತಂಡದ ವತಿಯಿಂದ ಗೀತಾ ಗಾಯನ ನಡೆಸಿಕೊಡಲಾಯಿತು.

ವಿದ್ಯಾರ್ಥಿಗಳಾದ ಭೂಮಿಕ ಮತ್ತು ತಂಡದ ವತಿಯಿಂದ ನಾಡು- ನುಡಿಗೆ ಸಂಬAಧಿಸಿದAತೆ ಪ್ರದರ್ಶಿಸಿದ ಜನಪದ ಹಾಗೂ ಸಾಂಸ್ಕೃತಿಕ ನೃತ್ಯ ಪ್ರೇಕ್ಷಕರ ಗಮನ ಸೆಳೆಯಿತು. ಕಲಾವಿದ ಬರ್ಮಣ್ಣ ಬೆಟ್ಟಗೇರಿ ಗೀತೆ ಹಾಡಿದರು.ಮಡಿಕೇರಿ: ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕ.ಸಾ.ಪ. ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ಕೋಶಾಧಿಕಾರಿ ಕೆ. ತಿಮ್ಮಪ್ಪ, ಟ್ರಸ್ಟಿ ವಿ.ಪಿ. ಸುರೇಶ್, ಬಿ.ಜಿ. ಗಣೇಶ್, ಸಿಬ್ಬಂದಿಗಳಾದ ಯಮುನಾ, ಸವಿತಾ, ರಾಜೇಶ್, ಉದ್ಯಮಿಗಳಾದ ಅಬ್ದುಲ್ ರೆಹಮಾನ್, ಅಶ್ರಫ್, ರಾಮಣ್ಣ, ಲೀಲಾವತಿ, ಪುಟಾಣಿಗಳಾದ ಮೌಲ್ಯ ಬಜೆಕೋಡಿ, ತರುಣ್ ಬಜೆಕೋಡಿ, ಚರಿತಾ ಮುಂತಾದವರು ಭಾಗವಹಿಸಿದ್ದರು.

ಗುಡ್ಡೆಹೊಸೂರು ಶಾಲೆಮಡಿಕೇರಿ: ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕ.ಸಾ.ಪ. ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ಕೋಶಾಧಿಕಾರಿ ಕೆ. ತಿಮ್ಮಪ್ಪ, ಟ್ರಸ್ಟಿ ವಿ.ಪಿ. ಸುರೇಶ್, ಬಿ.ಜಿ. ಗಣೇಶ್, ಸಿಬ್ಬಂದಿಗಳಾದ ಯಮುನಾ, ಸವಿತಾ, ರಾಜೇಶ್, ಉದ್ಯಮಿಗಳಾದ ಅಬ್ದುಲ್ ರೆಹಮಾನ್, ಅಶ್ರಫ್, ರಾಮಣ್ಣ, ಲೀಲಾವತಿ, ಪುಟಾಣಿಗಳಾದ ಮೌಲ್ಯ ಬಜೆಕೋಡಿ, ತರುಣ್ ಬಜೆಕೋಡಿ, ಚರಿತಾ ಮುಂತಾದವರು ಭಾಗವಹಿಸಿದ್ದರು.

ಗುಡ್ಡೆಹೊಸೂರು ಶಾಲೆಮುಳ್ಳೂರು: ೬೮ನೇ ಕನ್ನಡ ರಾಜ್ಯೋತ್ಸವವನ್ನು ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ವಿಭಿನ್ನ ಮತ್ತು ಇತಿಹಾಸ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಕೊಡಗಿನ ಜೈನಕಾಶಿ ಎಂದು ಪ್ರಸಿದ್ಧಿ ಪಡೆದಿರುವ ಮುಳ್ಳೂರು ತ್ರಿವಳಿ ಜೈನ ಬಸದಿ ಕೇಂದ್ರದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.

ಬೆಳಿಗ್ಗೆ ಶಾಲಾ ಆವರಣದಲ್ಲಿ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕನ್ನಡ ಧ್ವಜಾರೋಹಣ ನೇರವೇರಿಸಿದ ಬಳಿಕ ಶಾಲಾ ಮುಖ್ಯ ಶಿಕ್ಷಕ ಸಿ.ಎಸ್. ಸತೀಶ್ ಮತ್ತು ವಿದ್ಯಾರ್ಥಿಗಳು ನಿರ್ಮಿಸಿದ ೧೫ ಅಡಿ ಎತ್ತರದ ಕನ್ನಡದ ಬೃಹತ್ ತೇರನ್ನು ಶಾಲಾ ಮುಂಭಾಗದಿAದ ಸಮೀಪದ ಜೈನ ಬಸದಿ ಕೇಂದ್ರಕ್ಕೆ ಮೆರವಣಿಗೆ ಮೂಲಕ ಸಾಗಿಸಲಾಯಿತು. ತೇರಿನ ಮೇಲ್ಭಾಗದಲ್ಲಿ ತಾಯಿ ಭವನೇಶ್ವರಿ ಮತ್ತು ಕರ್ನಾಟಕದ ಭೂಪಟ ರಾರಾಜಿಸುತ್ತಿತ್ತು. ಕನ್ನಡದ ಪ್ರಸಿದ್ಧ ಕವಿಗಳು, ಸಾಹಿತಿಗಳು, ವಿಜ್ಞಾನಿಗಳು, ಕರ್ನಾಟಕದ ಉದಯಕ್ಕೆ ಶ್ರಮಿಸಿದ ಹಿರಿಯರು, ಚಂದ್ರಯಾನ-೩ಯಲ್ಲಿ ಪಾಲ್ಗೊಂಡಿದ್ದ ಕನ್ನಡ ವಿಜ್ಞಾನಿಗಳ ಭಾವಚಿತ್ರ ಹಾಗೂ ಹೂವಿನ ಹಾರ ಗಳಿಂದ ತೇರು ಅಲಂಕೃತಗೊAಡಿತ್ತು. ಕನ್ನಡ ತೇರು ಶೋಭಯಾತ್ರೆಯಲ್ಲಿ ಪೋಷಕರು ಕಲಶ ಹೊತ್ತು ತೇರಿನ ಮುಂಭಾಗದಲ್ಲಿ ಸಾಗಿದರೆ ವಿದ್ಯಾರ್ಥಿ ಗಳು ಕನ್ನಡಪರ ಘೋಷಣೆಗಳನ್ನು ಮೊಳಗಿಸುತ್ತಾ ಜೈನ ಬಸದಿ ಕೇಂದ್ರದತ್ತ ಸಾಗಿದರು. ಜೈನ ಬಸದಿ ಕೇಂದ್ರದ ಮುಂಭಾಗದಲ್ಲಿರುವ ಹಳೆಕನ್ನಡ ಶಾಸನಗಳಿಗೆ ಪೂಜೆ ಸಲ್ಲಿಸಿದ ಬಳಿಕ ಜೈನ ಬಸದಿ ಕೇಂದ್ರದ ಮುಂಭಾಗದ ಮರದ ನೆರಳಿನಲ್ಲಿ ಸಾಂಕೇತಿಕವಾಗಿ ೬೮ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹವ್ಯಾಸಿ ಇತಿಹಾಸ ಸಂಶೋಧಕ ಮತ್ತು ಮುಳ್ಳೂರು ನಿವಾಸಿಯಾದ ಮುಳ್ಳೂರು ಸತೀಶ್ ರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಲರವಕ್ಕೆ ಚಾಲನೆ ನೀಡಿದ ಬಳಿಕ ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿ, ಇತಿಹಾಸ ಮತ್ತು ಹಳೆಗನ್ನಡ ಶಾಸನ, ಮುಳ್ಳೂರು ಗ್ರಾಮ ಮತ್ತು ಜೈನ ಬಸದಿ ಕೇಂದ್ರದ ಇತಿಹಾಸದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕೆ.ಆರ್. ಪೇಟೆಯ ನಿವೃತ್ತ ಆಡಿಟ್ ಅಧಿಕಾರಿ ಎನ್.ಎಸ್. ಲೋಕೇಶ್ ವಿಶ್ವಕರ್ಮ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷೆ ಬಿಂದು ಸುರೇಶ್ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯ ವೆಂಕಟೇಶ್, ಪ್ರಮುಖರಾದ ಸುರೇಶ್, ವೇದಕುಮಾರ್, ಶಾಲೆಯ ಕ್ರಿಯಾಶೀಲ ಮುಖ್ಯ ಶಿಕ್ಷಕ ಸಿ.ಎಸ್. ಸತೀಶ್, ಅತಿಥಿ ಶಿಕ್ಷಕಿ ಎಂ.ಆರ್. ನವ್ಯ, ಎಸ್‌ಡಿಎಂಸಿ ಪದಾಧಿಕಾರಿಗಳು ಸದಸ್ಯರು, ಗ್ರಾಮಸ್ಥರು ಪಾಲ್ಗೊÆಂಡಿದ್ದರು. ವಿದ್ಯಾರ್ಥಿಗಳು ಭಾಷಣ ಸೇರಿದಂತೆ ಕನ್ನಡದ ಬಗ್ಗೆ ವಿವಿಧ ಮಾಹಿತಿಗಳನ್ನು ವೇದಿಕೆಯಲ್ಲಿ ಪ್ರಸ್ತುತ ಪಡಿಸಿದರು.

ಜೈನ ಬಸದಿ ಕೇಂದ್ರದ ಮುಂಭಾಗದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ವನ್ನು ನಡೆಸಿಕೊಟ್ಟರು. ಕನ್ನಡ ನಾಡು ನುಡಿಯ ವಿಶೇಷತೆ ಸಾರುವ ನೃತ್ಯ ರೂಪಕ, ಹೊಯ್ಸಳರ ವಂಶ ಉದಯವಾದ ನೃತ್ಯರೂಪಕ ಸೇರಿದಂತೆ ಕರ್ನಾಟಕದ ಸಾಂಸ್ಕೃತಿಕ ಪರಂಪರೆ ಸಾರುವ ನೃತ್ಯ ರೂಪಕಗಳನ್ನು ಪ್ರದರ್ಶಿಸಲಾಯಿತು.ಸುಂಟಿಕೊಪ್ಪ: ಇಲ್ಲಿನ ಕನ್ನಡ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರಗಳಿಂದ ಆಚರಿಸಲಾಯಿತು.

ಕನ್ನಡ ವೃತ್ತದಲ್ಲಿ ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಮತ್ತು ಇತರ ಎಲ್ಲಾ ಸಂಘ-ಸAಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಸುಂಟಿಕೊಪ್ಪ ಗೌಡ ಸಮಾಜದ ಅಧ್ಯಕ್ಷ ಯಂಕನ ಎಂ. ಉಲ್ಲಾಸ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸುಂಟಿಕೊಪ್ಪ ಪಟ್ಟಣವು ಎಲ್ಲಾ ಜಾತಿ ಜನಾಂಗಗಳಿಗೆ ಆಶ್ರಯವಾಗಿದ್ದು, ಮಾದರಿ ಎನಿಸಿದೆ. ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದರು.

ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸೆಲ್ವರಾಜ್ ಆಗಮಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಕನ್ನಡ ಬಗೆಗಿನ ಪ್ರೀತಿ ಅಭಿಮಾನ ನಮ್ಮ ದೇಹದ ನರನಾಡಿಗಳಲ್ಲಿ ಕೊನೆಯುಸಿರು ಇರುವವರೆಗೂ ಹರಿಯುತ್ತಿರಲಿ ಎಂದು ಆಶಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಲ್ಲಿ ಒಬ್ಬರಾಗಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ಮಾತನಾಡಿ, ಮೈಸೂರು ಎಂದು ಇದ್ದ ರಾಜ್ಯದ ಹೆಸರು ಕರ್ನಾಟಕ ಎಂದಾಗಿ ೫೦ ವರ್ಷಗಳು ತುಂಬಿದ್ದು ನಾವೆಲ್ಲರೂ ಕನ್ನಡವನ್ನು ಇನ್ನಷ್ಟು ಹೆಚ್ಚಾಗಿ ಪ್ರೀತಿಸುವ ಸಮಯ ಇದು ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಂಟಿಕೊಪ್ಪ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಎಫ್. ಸಬಾಸ್ಟೀನ್ ಕನ್ನಡ ವೃತ್ತದ ಇತಿಹಾಸದ ಕುರಿತು ಮಾಹಿತಿಯಿತ್ತರು.

ಸುಂಟಿಕೊಪ್ಪ ಗ್ರಾ.ಪಂ. ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಶ್ರೀಧರ್, ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಯಶೋಧರ ಪೂಜಾರಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾಗೇಶ ಪೂಜಾರಿ, ಗ್ರಾ.ಪಂ. ಸದಸ್ಯರುಗಳಾದ ಪ್ರಸಾದ್ ಕುಟ್ಟಪ್ಪ, ಸೋಮನಾಥ್, ರಫಿಕ್ ಖಾನ್, ಆಲಿಕುಟ್ಟಿ, ಶಬ್ಬೀರ್, ವಸಂತಿ, ಶಾಂತಿ, ರೇಷ್ಮ, ಗ್ರಾ.ಪಂ. ಲೆಕ್ಕಪರಿಶೋಧಕಿ ಚಂದ್ರಕಲಾ, ಸುಂಟಿಕೊಪ್ಪ ನಾಡು ಗೌಡ ಸಮಾಜದ ಕಾರ್ಯದರ್ಶಿ ಕೌಶಿಕ್, ಖಜಾಂಚಿ ಪಟ್ಟೆಮನೆ ಉದಯಕುಮಾರ್, ಬಿಲ್ಲವ ಸಮಾಜದ ಅಧ್ಯಕ್ಷ ಮಣಿ ಮುಖೇಶ್, ವರ್ತಕರ ಸಂಘದ ಅಧ್ಯಕ್ಷ ಡಿ. ನರಸಿಂಹ ಹಾಗೂ ಇತರರು ಇದ್ದರು.ಚೆಯ್ಯಂಡಾಣೆ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮ ಕುಮಾರಿ ವಹಿಸಿ ಕನ್ನಡ ರಾಜ್ಯೋತ್ಸವ, ಕನ್ನಡದ ಹೆಗ್ಗಳಿಕೆ, ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಿ ಕನ್ನಡವನ್ನು ಉಳಿಸಿ ಬೆಳಸುವಂತಾಗಬೇಕೆAದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪತ್ರಕರ್ತ ಹಾಗೂ ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿ ಅಶ್ರಫ್ ಮಾತನಾಡಿ, ಶಾಲೆಯ ಹಳೆಯ ನೆನಪನ್ನು ಸ್ಮರಿಸಿ ಕನ್ನಡ ರಾಜ್ಯೋತ್ಸವದ ಕುರಿತು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಅತಿಥಿ ಶಿಕ್ಷಕಿ ಸತ್ಯ ದಿನದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಿಂದ ಭಾಷಣ, ನಾಡಗೀತೆ, ಹಾಡು, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಿವೃತ ಶಿಕ್ಷಕಿ ಎನ್.ಟಿ. ಕಾವೇರಮ್ಮ ಅವರು ನೀಡಿದ ಬಹುಮಾನವನ್ನು ಅತಿಥಿಗಳು ವಿತರಿಸಿದರು. ಈ ಸಂದರ್ಭ ಶಿಕ್ಷಕಿ ಜಯಪ್ರದ, ದಮಯಂತಿ, ವಿದ್ಯಾರ್ಥಿಗಳು ಮತಿತ್ತರರು ಉಪಸ್ಥಿತರಿದ್ದರು.

ನರಿಯಂದಡ ಗ್ರಾಮ ಪಂಚಾಯಿತಿಕಣಿವೆ: ಕುಶಾಲನಗರದ ಮಹಾತ್ಮ ಗಾಂಧಿ ಪದವಿ ಕಾಲೇಜು ಹಾಗೂ ವಿವೇಕಾನಂದ ಪಿ.ಯು. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಭುವನೇಶ್ವರಿ ಭಾವಚಿತ್ರಕ್ಕೆ ಕಾಲೇಜಿನ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ ಪುಷ್ಪಾರ್ಚನೆ ನೆರವೇರಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲೆ ಟಿ.ಎ. ಲಿಖಿತ, ಪಿ.ಯು. ವಿಭಾಗದ ಪ್ರಾಂಶುಪಾಲೆ ಕ್ಲಾರಾ ರೇಶ್ಮಾ ಹಾಗೂ ಬೋಧಕರಿದ್ದರು.ಚೆಯ್ಯಂಡಾಣೆ: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಸದಸ್ಯರಾದ ಈರಪ್ಪ, ಸುಬೈರ್, ಮಮ್ಮದ್, ಮಂಜುಳಾ, ವಾಣಿ, ಕವಿತಾ, ಅಭಿವೃದ್ಧಿ ಅಧಿಕಾರಿ ಆಶಾಕುಮಾರಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಬಿದ್ದಪ್ಪ, ಅಂಗನವಾಡಿ ಕಾರ್ಯಕರ್ತೆ ತಾರ, ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.

ಚೆಟ್ಟಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಚೆಟ್ಟಳ್ಳಿ: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಹಚ್ಚೇವು ಕನ್ನಡದ ದೀಪ ಎಂಬ ಮಕ್ಕಳ ಸಾಮೂಹಿಕ ಹಾಡಿನೊಂದಿಗೆ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿವಿಧ ಕಾರ್ಯಕ್ರಮಗಳನ್ನು ಆಚರಿಸಲಾಯಿತು.

ಈ ಸಂದರ್ಭ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಿಂಧುರಾಜನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಲ್ಪ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಕೃಷ್ಣಪ್ಪ, ಸಂಪನ್ಮೂಲ ವ್ಯಕ್ತಿಗಳಾದ ಅಶೋಕ ಎನ್.ಎಸ್., ಶಾಲಾ ಮುಖ್ಯೋಪಾಧ್ಯಾಯಿನಿ ರಮಾ. ಪಿ.ಕೆ. ಹಾಗೂ ಸಹ ಶಿಕ್ಷಕರು ಪಾಲ್ಗೊಂಡಿದ್ದರು.ಹೆಬ್ಬಾಲೆ: ಕುಶಾಲನಗರ ತಾಲೂಕು ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಸಮಾರಂಭದಲ್ಲಿ ಮುಖ್ಯ ಶಿಕ್ಷಕ ಹೆಚ್.ಎಲ್. ವೆಂಕಟೇಶ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರದೀಪ್ ಹಾಗೂ ಶಾಲಾ ಶಿಕ್ಷಕ ವರ್ಗದವರಾದ ಹೆಚ್.ಈ. ರಮೇಶ್, ಸಿ.ಎಸ್. ಜಾನಕಿ, ಸಿ.ಎಂ. ಬಬಿತ, ಹೆಚ್.ಬಿ. ಪುಷ್ಪಾವತಿ, ಭಾಗ್ಯ ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡಿದರು.ಸಂಪಾಜೆ: ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಂಪಾಜೆಯಲ್ಲಿ ಶ್ರೀ ಭಗವಾನ್ ಸಂಘದಿAದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಪಯಸ್ವಿನಿ ಸೊಸೈಟಿ ಅಧ್ಯಕ್ಷ ಅನಂತ್ ಊರುಬೈಲು, ಭಗವಾನ್ ಸಂಘದ ಕಾರ್ಯದರ್ಶಿ ಹರ್ಷಿತ್ ನೆಲ್ಲಿಪುಣಿ ಮಾತನಾಡಿ, ರಾಜ್ಯೋತ್ಸವದ ಶುಭಾಶಯ ಕೋರಿದರು. ಸೊಸೈಟಿ ಸಿಇಓ ಬಿ.ಕೆ. ಆನಂದ ಮತ್ತು ಸಿಬ್ಬಂದಿಗಳು, ಮಾಜಿ ಎಪಿಎಂಸಿ ಸದಸ್ಯ ಕೆ.ಕೆ. ದೇವಪ್ಪ ಮತ್ತು ಭಗವಾನ್ ಸಂಘದ ಸದಸ್ಯರು ಭಾಗವಹಿಸಿದ್ದರು.

ಸಿದ್ದಾಪುರ: ಸಿದ್ದಾಪುರ ಗ್ರಾಮ ಪಂಚಾಯಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮ ಗೋಪಾಲ್ ಧ್ವಜಾರೋಹಣ ನೆರವೇರಿಸಿದರು. ನಂತರ ದಿನದ ಮಹತ್ವದ ಬಗ್ಗೆ ಮಾತನಾಡಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಳನಿ ಸ್ವಾಮಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿಗಳು ಹಾಜರಿದ್ದರು.ಕಣಿವೆ: ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ಸುವರ್ಣ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಾಂಬೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪಂಚಾಯಿತಿ ಅಧ್ಯಕ್ಷ ಚೆಟ್ಟಡ್ಕ ಎಲ್. ವಿಶ್ವ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ಪಂಚಾಯಿತಿ ಸದಸ್ಯರಾದ ಆರ್.ಕೆ. ಚಂದ್ರ, ಎ.ಎಂ. ಲೋಕನಾಥ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಪಂಚಾಯಿತಿ ಸಿಬ್ಬಂದಿಗಳಿದ್ದರು.

(ಮುAದುವರಿಯುವುದು)