ಮಡಿಕೇರಿ, ನ. ೫: ವಿದ್ಯುತ್ ಮತ್ತು ರೈಲ್ವೆ ಖಾಸಗೀಕರಣ ವಿರೋಧಿಸಿ ಸಿಐಟಿಯು ಕೊಡಗು ಜಿಲ್ಲಾ ಸಮಿತಿ ಇಲ್ಲಿನ ಸೆಸ್ಕ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿತು.

ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್. ಭರತ್ ಮಾತನಾಡಿ, ಖಾಸಗೀಕರಣದ ಮೂಲಕ ಕೇಂದ್ರ ಸರ್ಕಾರ ಸರ್ಕಾರಿ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಅತೀವ ಹೊರೆ ಯಾಗಲಿದೆ ಎಂದು ಹೇಳಿದರು.

ವಿದ್ಯುತ್ ತಿದ್ದುಪಡಿ ಮಸೂದೆ ಯನ್ನು ಕೂಡಲೇ ಸರ್ಕಾರ ವಾಪಸ್ ಪಡೆಯಬೇಕು. ರೈಲ್ವೆಯನ್ನು ಸರ್ಕಾ ರದ ಅಧೀನದಲ್ಲೆ ಇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. ಸಂಘಟ ನೆಯ ಮುಖಂಡರಾದ ಎ.ಸಿ.ಸಾಬು, ಎನ್.ಡಿ.ಕುಟ್ಟಪ್ಪ, ಎಚ್.ಪಿ.ರಮೇಶ್, ಮಹದೇವು, ಸಾಜಿ ರಮೇಶ್ ಇದ್ದರು.