ಸೋಮವಾರಪೇಟೆ, ನ. ೫ : ಸೋಮವಾರಪೇಟೆ ವ್ಯಾಪ್ತಿಯಲ್ಲಿರುವ ಅಕ್ರಮ ಗಾಂಜಾ ಮಾರಾಟ, ಬೈಕ್ಗಳಲ್ಲಿ ಕರ್ಕಶ ಶಬ್ದಮಾಡುತ್ತಾ ತೆರಳುವ ಪುಂಡಪೋಕರಿಗಳು, ಕಳ್ಳಭಟ್ಟಿ ತಯಾರಿಕೆ ಮತ್ತು ಮಾರಾಟದಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದು ಸಂಬAಧಿಸಿದ ಇಲಾಖೆಗಳಿಗೆ ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ. ಗೋಪಾಲಕೃಷ್ಣ ಅವರು ಸೂಚಿಸಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತದ ವತಿಯಿಂದ ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ನಡೆದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮತ್ತು ಸೇವನೆಯಂತಹ ಪ್ರಕರಣಗಳು ಹೆಚ್ಚುತ್ತಿವೆ. ಶಾಲಾ ಕಾಲೇಜಿನ ಮಕ್ಕಳಿಗೆ ಗಾಂಜಾ ನೀಡಲಾಗುತ್ತಿದೆ. ಇದು ಕಳವಳಕಾರಿಯಾಗಿದ್ದು, ಸಂಬAಧಿಸಿದ ಪೊಲೀಸ್ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳು ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಲೇ ಬೇಕು. ಮುಂದಿನ ಭವಿಷ್ಯದ ಮಕ್ಕಳನ್ನು ರಕ್ಷಣೆ ಮಾಡಬೇಕೆಂದು ತಮ್ಮ ಕಳಕಳಿ ವ್ಯಕ್ತಪಡಿಸಿದರು.
ಇದರೊಂದಿಗೆ ಪುಂಡ ಪೋಕರಿಗಳು ಬೈಕ್ಗಳ ಸೈಲೆನ್ಸರ್ನ್ನು ಬದಲಾವಣೆ ಮಾಡಿಕೊಂಡು ಕರ್ಕಶ ಶಬ್ದದೊಂದಿಗೆ ಸಂಚರಿಸುತ್ತಿದ್ದಾರೆ. ಇದರಿಂದಾಗಿ ನ್ಯಾಯಾಲಯದ ಕಲಾಪಗಳಿಗೆ ಅಡಚಣೆಯಾಗುತ್ತಿದೆ. ಇನ್ನು ಶಾಲಾ ಕಾಲೇಜು, ಆಸ್ಪತ್ರೆ ಯಲ್ಲಿರುವ ಪರಿಸ್ಥಿತಿ ಏನಾಗಬೇಕು? ಎಂದು ಪ್ರಶ್ನಿಸಿದ ಅವರು, ಇವುಗಳ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಜರುಗಿಸಬೇಕೆಂದು ಸೂಚಿಸಿದರು.
ಇದರೊಂದಿಗೆ ಕಳ್ಳಭಟ್ಟಿ ತಯಾರಿಕೆ ಮತ್ತು ೩ಐದನೇ ಪುಟಕ್ಕೆ (ಮೊದಲ ಪುಟದಿಂದ) ಮಾರಾಟದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಮದ್ಯಪಾನಿಗಳ ಆರೋಗ್ಯದ ದೃಷ್ಟಿಯಿಂದ ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಬೇಕೆಂದು ನಿರ್ದೇಶನ ನೀಡಿದ ನ್ಯಾಯಾಧೀಶರು, ರಸ್ತೆಬದಿಯಲ್ಲಿರುವ ಅಂಗಡಿಗಳಿAದ ಸಾರ್ವಜನಿಕರ ಓಡಾಟ, ವಾಹನಗಳ ಸಂಚಾರಕ್ಕೆ ತೊಡಕಾಗುತ್ತಿದೆ. ಈ ಬಗ್ಗೆ ಸಂಬAಧಿಸಿದ ಇಲಾಖೆ ಗಮನ ಹರಿಸಬೇಕು. ಕಂದಾಯ ಇಲಾಖೆಯಲ್ಲಿ ಕಡತಗಳ ವಿಲೇವಾರಿಗೆ ವಿಳಂಬ ಧೋರಣೆ ಅನುಸರಿಸಬಾರದು. ಸರ್ಕಾರಿ ಸಂಬಳ, ಸವಲತ್ತು ಪಡೆಯುವ ನೌಕರರು ಲಂಚಕ್ಕಾಗಿ ಬೇಡಿಕೆ ಮುಂದಿಡಬಾರದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ. ಗೋಕುಲ್ ಅವರು ಮಾತನಾಡಿ, ಸರ್ಕಾರಿ ನೌಕರರು ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಕೆಲಸ ಮಾಡಬೇಕು. ಸಂಪಾದನೆಗಳು ಕಾನೂನಿನ ಚೌಕಟ್ಟಿನೊಳಗಿರಲಿ. ಅಕ್ರಮವಾಗಿ ಹಣ ಸಂಪಾದನೆ ಮಾಡಬಾರದು. ಸರ್ಕಾರವು ಎಲ್ಲಾ ಸೌಲಭ್ಯಗಳನ್ನು ನೀಡಿದ್ದರೂ ಭ್ರಷ್ಟಾಚಾರದಲ್ಲಿ ಭಾಗಿಯಾಗುವುದು ನ್ಯಾಯ ಮಾರ್ಗವಲ್ಲ ಎಂದು ಕಿವಿಮಾತು ನುಡಿದರು.
ಸರ್ಕಾರಿ ನೌಕರರು ತಮ್ಮ ಇತಿಮಿತಿ ಅರಿತು ಕೆಲಸ ಮಾಡಬೇಕು. ಕಷ್ಟದಲ್ಲಿರುವವರಿಗೆ ಸಹಾಯ ನೀಡಬೇಕೆಂದು ತಿಳಿಸಿದ ಅವರು, ನಾಗರಿಕ ಸೇವಾ ಅಧಿನಿಯಮದ ಕಾನೂನುಗಳ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.
ವಕೀಲರ ಸಂಘದ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ ಮಾತನಾಡಿ, ಲಂಚ ತೆಗೆದುಕೊಳ್ಳುವುದು ಹಾಗೂ ಪಡೆದುಕೊಳ್ಳುವುದು ಅಪರಾಧ. ಸರ್ಕಾರಿ ಅಧಿಕಾರಿಗಳು ಲಂಚದ ಪ್ರಕರಣದಲ್ಲಿ ಸಿಲುಕಿ ಆರೋಪ ಸಾಬೀತಾದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದರು.
ಇAದು ಬಹುತೇಕ ಮಂದಿಗೆ ಕಾನೂನಿನ ಅರಿವು ಇಲ್ಲವಾಗಿದೆ. ಅಪರಾಧಗಳ ಬಗ್ಗೆಯೂ ಸಮರ್ಪಕ ಮಾಹಿತಿಯಿಲ್ಲ. ಈ ಹಿನ್ನೆಲೆ ಅಬಕಾರಿ ಮತ್ತು ಅರಣ್ಯ ಇಲಾಖೆಯ ಕಾಯ್ದೆಗಳ ಬಗ್ಗೆ ಸಾರ್ವಜನಿಕರು ಹಾಗೂ ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಅಭಿಪ್ರಾಯಿಸಿದರು. ಕಾರ್ಯಕ್ರಮದಲ್ಲಿ ಅಬಕಾರಿ ಇಲಾಖೆಯ ಉಪ ಅಧೀಕ್ಷಕಿ ಚೈತ್ರ, ಅಬಕಾರಿ ನಿರೀಕ್ಷಕ ಲೋಕೇಶ್ ಅವರುಗಳು ಉಪಸ್ಥಿತರಿದ್ದರು. ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.