ಮಡಿಕೇರಿ, ನ. ೫: ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಶೈಕ್ಷಣಿಕ ಸಾಧನೆಗೈದವರಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ. ಕನ್ನಡ ಮಾಧ್ಯಮದಲ್ಲಿ ಶೇ. ೮೦ ಮೇಲ್ಪಟ್ಟು ಹಾಗೂ ಆಂಗ್ಲ ಮಾಧ್ಯಮದಲ್ಲಿ ಶೇ. ೯೦ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿ.ಯು.ಸಿ. ಮತ್ತು ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಮತ್ತು ಸಿ.ಇ.ಟಿ.ಯಲ್ಲಿ ೧೦೦೦ ರ‍್ಯಾಂಕ್ ಒಳಗೆ ಮತ್ತು ಎನ್.ಇ.ಇ.ಟಿ.ಯಲ್ಲಿ ರಾಷ್ಟçಮಟ್ಟದಲ್ಲಿ ೫೦೦೦ ರ‍್ಯಾಂಕ್ ಒಳಗೆ ಪಡೆದುಕೊಂಡಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳು ತಾ. ೧೫ ರೊಳಗೆ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಡನೆ ಅರ್ಜಿಯನ್ನು ಸಂಘದ ಕಚೇರಿಗೆ ತಲುಪಿಸತಕ್ಕದ್ದು.

ವೈದ್ಯಕೀಯ, ಇಂಜಿನಿಯರಿAಗ್, ಸ್ನಾತಕೋತ್ತರ ಪದವಿಯಲ್ಲಿ ರ‍್ಯಾಂಕ್ ಪಡೆದ ಮತ್ತು ಕ್ರೀಡೆ, ಕಲೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ರಾಜ್ಯ, ರಾಷ್ಟç ಮತ್ತು ಅಂರ‍್ರಾಷ್ಟಿçÃಯ ಮಟ್ಟದಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಸನ್ಮಾನಿಸಲಾಗುವುದು. ಆಸಕ್ತರು ತಾ. ೧೫ ರೊಳಗೆ ಸೂಕ್ತ ದಾಖಲೆ ಸಹಿತ ಅರ್ಜಿಯನ್ನು ಸಂಘದ ಕಚೇರಿಗೆ ತಲುಪಿಸತಕ್ಕದ್ದು ಎಂದು ಸಂಘದ ಪ್ರಕಟಣೆ ತಿಳಿಸಿದೆ.