ಸುಂಟಿಕೊಪ್ಪ, ನ. ೬: ಹೆರೂರು ಗ್ರಾಮದಲ್ಲಿ ಕಾಡಾನೆಗಳು ವಾಸದ ಮನೆಗಳತ್ತ ಆಗಮಿಸುತ್ತಿದ್ದು, ಕಾಡಾನೆ ಹಾವಳಿ ನಿಯಂತ್ರಿಸಲು ಕ್ರಮಕೈಗೊಳ್ಳುವಂತೆ ಗ್ರಾಮದ ನಿವಾಸಿಗಳು, ಕೃಷಿಕರು ಒತ್ತಾಯಿಸಿದ್ದಾರೆ.

ಮಳೆಯ ಅಭಾವದಿಂದ ಕೃಷಿ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಈ ನಡುವೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿಯೂ ಹೆಚ್ಚಾಗಿದ್ದು, ಬೆಳೆದ ಕೃಷಿ ಫಸಲುಗಳನ್ನು ತಿಂದು ಧÀ್ವಂಸಗೊಳಿಸುತ್ತಿವೆ. ಇತ್ತೀಚಿನ ದಿನಗಳಲ್ಲಿ ವಾಸದ ಮನೆಯ ಸಮೀಪವೇ ಆಗಮಿಸುವ ಕಾಡಾನೆಗಳು ಅನಾಹುತಗಳನ್ನು ಉಂಟು ಮಾಡುವ ಭೀತಿ ಕಾಡುತ್ತಿದೆ. ಇದರಿಂದ ಮನೆಗಳಲ್ಲಿ ನೆಲೆಸಲು ಆತಂಕ ಪಡುವಂತಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ. ಕೂಡಲೇ ಸಂಬAಧಿಸಿದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಕಾಡಾನೆ ಹಾವಳಿ ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.