ಗೋಣಿಕೊಪ್ಪಲು, ನ. ೬ : ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಆದರ್ಶ ಗುಣ ಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು. ಆ ಮೂಲಕ ತಮ್ಮ ಗುರಿಗಳನ್ನು ಸಾಧಿಸಲು ಉತ್ತಮ ಅವಕಾಶ ಸಿಗಲಿದೆ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಕರೆ ನೀಡಿದರು.

ವೀರಾಜಪೇಟೆಯ ಪುರಭವನದ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಹಮ್ಮಿ ಕೊಳ್ಳಲಾಗಿದ್ದ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಇವರು, ವಿಶ್ವಕ್ಕೆ ಅಂಬೇಡ್ಕರ್‌ರವರ ಸಾಧನೆ ಮಾದರಿಯಾಗಿದೆ. ಸಂವಿಧಾನದ ಅಡಿಯಲ್ಲಿ ಇಂದು ಭಾರತ ದೇಶ ನಡೆಯುತ್ತಿದೆ. ಶೋಷಿತರ ಧ್ವನಿಯಾಗಿ ಅಂಬೇಡ್ಕರ್ ರವರು ತಮ್ಮ ಜೀವನದ ಉದ್ದಕ್ಕೂ ಕೆಲಸ ನಿರ್ವಹಿಸಿದ್ದಾರೆ. ದ.ಸಂ.ಸ. ಇಂತಹ ಕಾರ್ಯಕ್ರಮ ರೂಪಿಸುವ ಮೂಲಕ ಪ್ರತಿಭಾವಂತರು ಸಮಾಜದ ಮುಖ್ಯವಾಹಿನಿಯಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳಲು ಅವಕಾಶ ಕಲ್ಪಿಸಿರುವುದು ಶ್ಲಾಘನೀಯ ಎಂದರು. ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ಸಿಗಲು ಅಂಬೇಡ್ಕರ್‌ರವರು ತಮ್ಮ ಹೋರಾಟ ಆರಂಭಿಸಿದ್ದರು. ತಮ್ಮ ಜ್ಞಾನಾರ್ಜನೆಯ ಮೂಲಕ ಇಡೀ ವಿಶ್ವಕ್ಕೆ ಮಾದರಿಯಾದರು. ಇವರ ತತ್ವ ಸಿದ್ಧಾಂತಗಳನ್ನು ಸಮಾಜದ ಎಲ್ಲಾರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು. ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕನಾಗಬಹುದು ಎಂದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕ ಹೆಚ್. ಎಲ್. ದಿವಾಕರ್ ಪ್ರಾಸ್ತವಿಕ ವಾಗಿ ಮಾತನಾಡಿ, ಕಳೆದ ೧೩ ವರ್ಷ ಗಳಿಂದ ದ.ಸಂ.ಸ. ವತಿಯಿಂದ ೧೦ನೇ ತರಗತಿಯಲ್ಲಿ ಉತ್ತಮ ಅಂಕ ಪಡೆದು ತೇರ್ಗಡೆ ಹೊಂದಿರುವ ವಿದ್ಯಾರ್ಥಿ ಗಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುತ್ತ ಬಂದಿದೆ. ಅಲ್ಲದೆ ಮಕ್ಕಳ ಕಲಿಕೆಯಲ್ಲಿ ಶ್ರಮಿಸಿದ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸುತ್ತಿದೆ. ಜಿಲ್ಲೆಯ ೪೬ ಪ್ರೌಢಶಾಲೆಯಲ್ಲಿಯೂ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾ ಗುತ್ತಿದೆ. ಸನ್ಮಾನದಿಂದ ವಿದ್ಯಾರ್ಥಿಗಳು ಸ್ಪೂರ್ತಿ ಪಡೆಯು ವಂತಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಹಿರಿಯ ವೈದ್ಯರು, ಸಮಾಜ ಸೇವಕ ಡಾ. ದೇವದಾಸ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಪೈಪೋಟಿ ನಡುವೆ ಯಶಸ್ಸು ಸಾಧಿಸಬೇಕು. ವಿದ್ಯಾಭ್ಯಾಸದ ವೇಳೆ ಕಠಿಣ ಶ್ರಮ ಅಗತ್ಯವಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್‌ರವರ ಪುಸ್ತಕಗಳನ್ನು ಹೆಚ್ಚಾಗಿ ಓದುವಂತಾಗಬೇಕು ಎಂದರು. ದ.ಸಂ.ಸ. ವಿಭಾಗೀಯ ಮಟ್ಟದ ಸಂಚಾಲಕ ಎನ್. ವೀರಭದ್ರಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಂಗವಾಗಿ ನೂತನ ಶಾಸಕ ಎ.ಎಸ್. ಪೊನ್ನಣ್ಣನವರಿಗೆ ದ.ಸಂ.ಸ. ವತಿ ಯಿಂದ ಸನ್ಮಾನಿಸಿ ಗೌರವಿಸ ಲಾಯಿತು. ವೀರಾಜಪೇಟೆ ಪುರಸಭೆಯ ಪೌರಕಾರ್ಮಿಕರಿಗೆ ಈ ವೇಳೆ ಸ್ವೆಟರ್ ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ, ಕಾಫಿ ಬೆಳೆಗಾರ ಬಿಳುಗುಂದ ಗ್ರಾಮದ ಮಜೀದ್‌ಖಾನ್, ಮಡಿಕೇರಿ ತಾಲೂಕಿನ ದಸಂಸ ತಾಲೂಕು ಸಂಚಾಲಕ ದೀಪಕ್ ಮಾತನಾಡಿ ದರು. ವೇದಿಕೆಯಲ್ಲಿ ವೀರಾಜಪೇಟೆ ತಾಲೂಕಿನ ಸಂಚಾಲಕ ಜಗದೀಶ್, ಮಡಿಕೇರಿ ನಗರ ಸಂಚಾಲಕ ಲೋಕನಾಥ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ದಸಂಸ ಸದಸ್ಯೆ ರೋಹಿಣಿ, ಸ್ವಾಗತಿಸಿ, ವಂದಿಸಿ ದರು. ವಿವಿಧ ಭಾಗದಿಂದ ಪ್ರತಿಭಾವಂತ ವಿದ್ಯಾರ್ಥಿಗಳು, ಸಂಘ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.