ಸೋಮವಾರಪೇಟೆ, ನ. ೯: ಗೌಡಳ್ಳಿ ಗ್ರಾಮ ಪಂಚಾಯಿತಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ತಾ. ೧೦ರಂದು (ಇಂದು) ಗೌಡಳ್ಳಿ ಶ್ರೀ ನವದುರ್ಗಾ ಪರಮೇಶ್ವರಿ ದೇವಾಲಯ ಸಭಾಂಗಣದಲ್ಲಿ ಬೆಳಿಗ್ಗೆ ೯.೩೦ರಿಂದ ಮಧ್ಯಾಹ್ನ ೨ಗಂಟೆಯವರೆಗೆ ನಡೆಯಲಿದೆ ಎಂದು ವೈದ್ಯಾಧಿಕಾರಿ ಕೆ. ಇಂದೂಧರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.