ಡಾ. ಮಂಥರ್ ಗೌಡ

ಮಡಿಕೇರಿ, ನ. ೮: ಕನ್ನಡಿಗರು ಇತರ ಭಾಷಿಕರಿಗೆ ಕನ್ನಡವನ್ನು ಕಲಿಸುವ ಔದಾರ್ಯ ತೋರಿದರೆ ಕರ್ನಾಟಕವೇ ಕನ್ನಡಮ ಯವಾಗುತ್ತದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅಭಿಮತ ವ್ಯಕ್ತಪಡಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನ ಕಾಲೇಜಿನ ಕ್ಯಾಂಪಸ್‌ನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಉದ್ಯೋಗ, ವಿದ್ಯಾಭ್ಯಾಸದ ಸಲುವಾಗಿ ಹೊರ ರಾಜ್ಯದ ಜನತೆ ಹೆಚ್ಚಾಗಿ ಬರುತ್ತಿದ್ದು ಅವರೊಂದಿಗೆ ನಾವು ಕನ್ನಡವನ್ನೇ ಮಾತನಾಡಿದರೆ ಅವರು ಕನ್ನಡ ಕಲಿಯುತ್ತಾರೆ. ಆ ಕಾರ್ಯವನ್ನು ಎಲ್ಲಾ ಕನ್ನಡಿಗರು ಅನುಸರಿಸಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ, ಕನ್ನಡ ವಿಶ್ವದ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾಗಿದ್ದು, ಕನ್ನಡದ ಮೇಲೆ ಇತರ ಯಾವ ಭಾಷೆಯೂ ಆಕ್ರಮಣ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಅತಿ ಹೆಚ್ಚಿನ ಎಂಟು ಜ್ಞಾನಪೀಠ ಪ್ರಶಸ್ತಿ ಕನ್ನಡಕ್ಕೆ ದೊರಕಿರುವದನ್ನು ಗಮನಿಸಿದರೆ ಕನ್ನಡದ ಹಿರಿಮೆ, ಗರಿಮೆಯನ್ನು ಊಹಿಸಬಹುದು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ. ಕೆ.ಬಿ. ಕಾರ್ಯಪ್ಪ, ವಿದೇಶಿಯರು ಕೂಡ ಕನ್ನಡದ ಬಗ್ಗೆ ವ್ಯಾಮೋಹ ಹೊಂದಿ ಅನೇಕ ಕೃತಿಗಳನ್ನು ರಚಿಸಿದ್ದರು. ಜರ್ಮನಿಯ ರೆವರಂಡ್ ಫರ್ಡಿನ್ಯಾಂಡ್ ಕಿಟಲ್ ಕನ್ನಡ-ಇಂಗ್ಲಿಷ್ ನಿಘಂಟು ರಚಿಸಿದ್ದನ್ನು ಗಮನಿಸಿದಾಗ ಕನ್ನಡ ವಿಶ್ವದ ಜನಪ್ರಿಯ ಭಾಷೆ ಎಂಬದು ಅರಿವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭ ಕಾಲೇಜು ವಿದ್ಯಾರ್ಥಿಗಳ ಪರವಾಗಿ ಡಾ. ಮಂಥರ್ ಗೌಡ ಹಾಗೂ ತೆನ್ನಿರ ಮೈನಾ ಅವರನ್ನು ಮೈಸೂರು ಪೇಟ ತೊಡಿಸಿ ಸನ್ಮಾನಿಸಲಾಯಿತು. ವಿದ್ಯಾರ್ಥಿ ಯಶಸ್ಸ್ ಕೈಯಾರೆ ರಚಿಸಿದ ಡಾ. ಮಂಥರ್ ಗೌಡ ಭಾವಚಿತ್ರವನ್ನು ಶಾಸಕರಿಗೆ ನೀಡಲಾಯಿತು. ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ಸಿ.ಇ.ಓ. ಎ.ಎಲ್. ಸ್ವಾಮಿ, ಮಡಿಕೇರಿ ನಗರಸಭೆಯ ಸದಸ್ಯ ರಾಜೇಶ್ ಯಲ್ಲಪ್ಪ, ಶಸ್ತç ಚಿಕಿತ್ಸಕರಾದ ಡಾ. ಎನ್. ನಂಜುAಡಯ್ಯ, ಡಾ. ರೂಪೇಶ್, ಸಾಂಸ್ಕತಿಕ ಸಂಘದ ಕಾರ್ಯದರ್ಶಿ ಡಾ. ಮಂಜುನಾಥ್ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿ ಪ್ರತಿನಿಧಿಗಳಾದ ಕುಮಾರಿ ಕೃಪಾ ಎನ್. ಮತ್ತು ಸುಮಂತ್ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಪ್ರಜ್ಞಾ ಎ.ಎಸ್. ಮತ್ತು ಶಶಾಂಕ್ ಅತಿಥಿಗಳನ್ನು ಪರಿಚಯಿಸಿ, ಅನುದೀಪ್ ವಂದಿಸಿದರು.