ಮಡಿಕೇರಿ, ನ. ೯ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಡಗದಾಳು ಸರ್ಕಾರಿ ಪ್ರೌಢಶಾಲೆ ವತಿಯಿಂದ ರಾಷ್ಟಿçÃಯ ಕಾನೂನು ಸೇವಾ ದಿನಾಚರಣೆ ಪ್ರಯುಕ್ತ ಕಡಗದಾಳು ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಚ್.ಸಿ. ಶಾಮ್ ಪ್ರಸಾದ್ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ನಂತರ ಸಂವಿಧಾನದ ಪೀಠಿಕೆಯನ್ನು ಓದಿ ಬೋಧಿಸಿದರು. ಬಳಿಕ ಮಾತನಾಡಿದ ಎಚ್.ಸಿ. ಶಾಮ್ ಪ್ರಸಾದ್, ಸಮಾಜದ ಕಟ್ಡಕಡೆಯ ವ್ಯಕ್ತಿಗೂ ಸಮಾನ ನ್ಯಾಯ ಸಿಗಬೇಕೆಂಬುದು ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಅದರಂತೆ ಎಲ್ಲಾ ವರ್ಗದ ಜನರಿಗೆ ಸಮಾನ ಅವಕಾಶವನ್ನು ನೀಡಲು ಕಾನೂನು ಸೇವಾ ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತವೆ. ಅದರಂತೆ ಯಾರೇ ಆದರು ಆರ್ಥಿಕ ಅಥವಾ ಇನ್ನಾವುದೇ ದುರ್ಬಲತೆಗಳಿಂದ ಸಿಗಬೇಕಾದ ಅವಕಾಶಗಳಿಂದ ವಂಚಿತರಾಗಬೇಕಾಗಿಲ್ಲ. ಪ್ರಾಧಿಕಾರದ ಮೂಲಕ ಎಲ್ಲರಿಗೂ ನ್ಯಾಯ ದೊರಕಿಸಿಕೊಡಲಾಗುವುದು.

ರಾಜ್ಯಾದ್ಯಂತ ೧೦೦ ಗ್ರಾಮ ನ್ಯಾಯಾಲಗಳನ್ನು ಸ್ಥಾಪಿಸುತ್ತಿದ್ದು, ಜಿಲ್ಲೆಯಲ್ಲಿ ೧೦ ಗ್ರಾಮಗಳನ್ನು ಗುರುತಿಸಲಾಗುವುದು. ಗ್ರಾಮದಲ್ಲಿರುವ ಹಳ್ಳಿಗರು ಸಹ ನಗರಕ್ಕೆ ಬಂದು ನ್ಯಾಯ ಪಡೆಯಲು ಅಸಾಧ್ಯವಾದರೆ ಅವರಲ್ಲಿಗೆ ಹೋಗಿ ನ್ಯಾಯ ನೀಡಬೇಕೆಂಬುವುದು ಇದರ ಉದ್ದೇಶವಾಗಿದೆ. ಅಂದರೆ ನ್ಯಾಯದಿಂದ ಯಾರೂ ವಂಚಿತರಾಗಬಾರದು ಎಂಬುದಾಗಿದೆ ಎಂದು ಹೇಳಿದರು.

ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರAಜನ್ ಮಾತನಾಡಿ, ಪ್ರತಿಯೊಬ್ಬರೂ ಕನಿಷ್ಟ ಕಾನೂನಿನ ಜ್ಞಾನವನ್ನು ಪಡೆದುಕೊಳ್ಳಬೇಕು. ಪ್ರಸಕ್ತ ಆಧುನಿಕತೆಯ ಸೋಗಿನಲ್ಲಿ ಮೊಬೈಲ್‌ಗೆ ಅತಿ ಹೆಚ್ಚು ದಾಸರಾಗಿರುವುದು ಕಳವಳಕಾರಿ, ಸಂವಿಧಾನದಲ್ಲಿ ನೀಡಿರುವ ಹಕ್ಕುಗಳ ಬಗ್ಗೆ ಮಾತ್ರ ನಾವು ಪ್ರತಿಪಾದಿಸುತ್ತೇವೆ ಹೊರತು ನಮ್ಮ ಕರ್ತವ್ಯಗಳನ್ನು ಮರೆತಿದ್ದೇವೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ರಧಾನ ಕಾನೂನು ನೆರವು ಅಭಿರಕ್ಷಕ ಕೆ.ಆರ್.ವಿದ್ಯಾಧರ ಗೌಡ ಮಾತನಾಡಿ ಇಂದಿನ ಸಾಮಾಜಿಕ ಪಿಡುಗಾಗಿರುವ ಬಾಲ್ಯ ವಿವಾಹ, ಪೋಕ್ಸೋ ವಿಷಯದ ಬಗ್ಗೆ ಮಾಹಿತಿ ನೀಡಿದರು. ಅದರಂತೆ ಕಾನೂನು ಸೇವಾ ದಿನಾಚರಣೆಯ ಪ್ರಯುಕ್ತ ಪ್ರಾಧಿಕಾರದಿಂದ ದೊರೆಯುವ ಸೌಲಭ್ಯಗಳು, ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಹಾಗೆಯೇ ಗ್ರಾಹಕರ ಹಕ್ಕುಗಳ ಬಗ್ಗೆ ವಿಷಯ ಮಂಡಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಕೆ.ಬಿ.ಪ್ರಸಾದ್ ಅವರು ಸೈಬರ್ ಕ್ರೆöÊಂ., ಗ್ರಾಹಕರ ಹಕ್ಕುಗಳು ನ್ಯಾಯಾಲಯದ ಕಲಾಪಗಳ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಪ್ರಶ್ನೆಗಳಿಗೆ ಸುದೀರ್ಘವಾಗಿ ಉತ್ತರಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಶಾಲಾ ಮುಖ್ಯೋಪಾಧ್ಯಾಯರಾದ ಭಾರತಿ, ಅಧ್ಯಕ್ಷರಾದ ನಾಸರ್ ಇದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಬಿ.ಎನ್.ವಿಮಲ ಸ್ವಾಗತಿಸಿದರು. ಭಾರತಿ ವಂದಿಸಿದರು. ಆರತಿ ನಿರೂಪಿಸಿದರು. ಬಿ.ಎಸ್.ಜಯಪ್ಪ ಪ್ರಾಸ್ತಾವಿಕ ನುಡಿಯನ್ನಾಡಿದರು.