ಮಡಿಕೇರಿ, ನ. ೮: ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ ೧ ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ೨೦೨೩-೨೪ ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಆದೇಶದಂತೆ ೨೦೨೩-೨೪ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದ್ದು, ಈ ಯೋಜನೆಯ ಸದುಪಯೋಗ ಪಡೆಯುವಂತೆ ಕೃಷಿಕರಲ್ಲಿ ಮನವಿ ಮಾಡಿದರು.

ರೈತರ ನೋಂದಣಿ ಸಂಬAಧ ತಾಂತ್ರಿಕ ತೊಂದರೆಗಳು ಕಂಡುಬAದಲ್ಲಿ ಕೂಡಲೇ ಸರಿಪಡಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರ್ಕಾರ ನೇಮಕ ಮಾಡಿದ್ದು ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತಿದೆ ಎಂದು ವಿವರಿಸಿದರು.

ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್‌ನಿAದ ರೈತರ ನೋಂದಣಿ ಕಾರ್ಯ ಆರಂಭವಾ ಗಿದ್ದು, ಕೆಲವೇ ದಿನಗಳಲ್ಲಿ ಭತ್ತ/ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ ೨೫ ಕ್ವಿಂಟಾಲ್‌ನAತೆ ಒಬ್ಬ ಬೆಳೆಗಾರರಿಂದ ಗರಿಷ್ಠ ೪೦ ಕ್ವಿಂಟಾಲ್ ಭತ್ತ ಹಾಗೂ ರಾಗಿ ಕನಿಷ್ಟ ೧೦ ರಿಂದ ಗರಿಷ್ಟ ೨೦ ಕ್ವಿಂಟಾಲ್ ಖರೀದಿಸಲಾ ಗುತ್ತಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ೨೧೮೩ ರೂ. ನಿಗದಿಪಡಿ ಸಲಾಗಿದ್ದು, ರಾಗಿ ಪ್ರತಿ ಕ್ವಿಂಟಾಲ್‌ಗೆ ೩೮೪೬ ರೂ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ ಮಡಿಕೇರಿ ಎಪಿಎಂಸಿ ಆವರಣ, ಕುಶಾಲನಗರ ಎಪಿಎಂಸಿ ಆವರಣ, ಗೋಣಿಕೊಪ್ಪ ಎಪಿಎಂಸಿ ಆವರಣ ಹಾಗೂ ಸೋಮವಾರಪೇಟೆ ಎಪಿಎಂಸಿ ಮಾರ್ಕೇಟ್ ಆವರಣದಲ್ಲಿ ಖರೀದಿ ಮಾಡಲಾಗುತ್ತಿದೆ. ರೈತರು ಸಂಬAಧಪಟ್ಟ ನೋಂದಣಿ ಕೇಂದ್ರಗಳಲ್ಲಿಯೇ ತಮ್ಮ ಭತ್ತವನ್ನು ನೀಡಬಹುದಾಗಿದೆ ಎಂದರು.

ಬೇಡಿಕೆಗೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸೂಕ್ತ ದಾಸ್ತಾನಿಗಾಗಿ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‌ಗಳನ್ನು ನಿಯೋ ಜಿಸಲು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸಲಹೆ ನೀಡಿದರು.

ಭತ್ತವನ್ನು ಮಾರಾಟ ಮಾಡಬೇ ಕಾದ ರೈತರು ಈಗಾಗಲೇ ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಣಿಯಾಗಿ ರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿ ದ್ದಲ್ಲಿ ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಣಿ ಮಾಡಿ ಕೊಂಡು ತಾವು ಬೆಳೆದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದರು.

ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಫ್ರೂಟ್ಸ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್‌ಪಿಸಿಐ ಬ್ಯಾಂಕ್ ಖಾತೆಯ ವಿವರಗಳನ್ನು ನೀಡಬೇಕಿದೆ ಎಂದು ತಿಳಿಸಿದರು.

ಸರ್ಕಾರವು ಪೌಷ್ಟಿಕಾಂಶತೆಯಿAದ ಕೂಡಿದ ಸಾರವರ್ದಿತ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿದ್ದು, ಈ ಸಂಬAಧ ಅಕ್ಕಿ ಗಿರಣಿಗಳಲ್ಲಿ ಹಲ್ಲಿಂಗ್ ಮಾಡುವಾಗ ಸಾರವರ್ದಿತ ಅಕ್ಕಿಯನ್ನು ತಯಾರು ಮಾಡಲು ಕಡ್ಡಾಯವಾಗಿ ಅಕ್ಕಿ ಗಿರಣಿ ಮಾಲೀಕರುಗಳು ಬ್ಲೆಂಡಿAಗ್ ಮಿಷನನ್ನು ಅಳವಡಿಸಲು ಹಾಗೂ ಅಳವಡಿಸದ ಅಕ್ಕಿ ಗಿರಣಿಗಳಿಗೆ ಸರಕಾರದ ಆದೇಶದಂತೆ ಹಲ್ಲಿಂಗ್‌ಗೆ ಭತ್ತವನ್ನು ನೀಡಲು ಸಾಧ್ಯವಿರುವುದಿಲ್ಲ ಎಂದು ಹೇಳಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸೋಮಸುಂದರ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಅಧಿಕಾರಿ ಕೆ.ಪಿ. ಸೋಮಯ್ಯ, ಆಹಾರ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.